ಮೇ 30ರಂದು ಬೆಂಗಳೂರಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಭಾರೀ ಪ್ರತಿಭಟನೆ
ಮೈಸೂರು

ಮೇ 30ರಂದು ಬೆಂಗಳೂರಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಭಾರೀ ಪ್ರತಿಭಟನೆ

May 28, 2019

ಮೈಸೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆ ಗಳಲ್ಲಿ ಆರಂಭಿಸುತ್ತಿರುವ ಎಲ್‍ಕೆಜಿ ಹಾಗೂ ಯುಕೆಜಿ ಜವಾಬ್ದಾರಿಯನ್ನು ಅಂಗನವಾಡಿ ಗಳಿಗೆ ಅಧಿಕೃತವಾಗಿ ವಹಿಸಲು ಆಗ್ರಹಿಸಿ ಮೇ 30ರಂದು ಬೆಳಿಗ್ಗೆ 11.30ಕ್ಕೆ ಬೆಂಗ ಳೂರಿನಲ್ಲಿ ಭಾರೀ ಪ್ರತಿಭಟನೆ ಹಮ್ಮಿಕೊಳ್ಳ ಲಾಗಿದೆ ಎಂದು ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಚ್.ಎಸ್. ಸುನಂದಾ ಇಂದಿಲ್ಲಿ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಕೇಂದ್ರ ರೈಲ್ವೆ ನಿಲ್ದಾಣ ದಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ರ್ಯಾಲಿ ನಡೆಯಲಿದೆ. ಸುಮಾರು 50,000ಕ್ಕೂ ಹೆಚ್ಚು ಅಂಗನವಾಡಿ ಕಾರ್ಯ ಕರ್ತೆಯರು ಭಾಗವಹಿಸಲಿದ್ದಾರೆ. ತಮ್ಮ ಮನವಿಗೆ ಸರ್ಕಾರ ಸ್ಪಂದಿಸದಿದ್ದರೆ ಅನಿರ್ದಿ ಷ್ಟಾವಧಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸರ್ಕಾರಿ ಶಾಲೆಗಳಲ್ಲಿ ಎಲ್‍ಕೆಜಿ ಹಾಗೂ ಯುಕೆಜಿ ಆರಂಭಿಸುತ್ತಿರುವ ಸರ್ಕಾರ ಅದರ ಜವಾಬ್ದಾರಿಯನ್ನು ಅಂಗನವಾಡಿ ಗಳಿಗೆ ವಹಿಸುವಂತೆ ಒತ್ತಾಯಿಸಿ ಈಗಾ ಗಲೇ ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಮನವಿ ನೀಡಿದ್ದೇವೆ. ನಮಗೆ ನೀಡಿರುವ ಎಲ್ಲಾ ಹೆಚ್ಚುವರಿ ಕೆಲಸದಿಂದ ಮುಕ್ತ ಗೊಳಿಸಿ, ಎಲ್‍ಕೆಜಿ ಹಾಗೂ ಯುಕೆಜಿ ಜವಾಬ್ದಾರಿ ಯನ್ನು ನಮಗೇ ನೀಡಿದರೆ ಅಂಗನವಾಡಿ ಗಳ ಉಳಿವಿಗೆ ನೆರವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಅಂಗನವಾಡಿಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಖಾಸಗಿ ವಿದ್ಯಾ ಸಂಸ್ಥೆ ಗಳಲ್ಲಿ ದೊರೆಯುವ ಸೌಲಭ್ಯಗಳೆಲ್ಲವೂ ಇಲ್ಲಿ ಸಿಗುವಂತೆ ಸರ್ಕಾರ ನೋಡಿಕೊಳ್ಳ ಬೇಕು. ಮಾತೃಪೂರ್ಣ ಯೋಜನೆ ಕೆಲಸಕ್ಕೆ ಹೆಚ್ಚುವರಿ ಸಹಾಯಕಿಯನ್ನು ನೇಮಿಸಬೇಕು ಎಂದೂ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಕಾವೇರಮ್ಮ, ಕಾಯಕರ್ತೆಯರಾದ ಮಾಯಾವತಿ ಪುಷ್ಪಾವತಿ, ವಸಂತ, ಲೀಲಾತಿ, ಮಂಜುಳ ಇನ್ನಿತರರು ಉಪಸ್ಥಿತರಿದ್ದರು

Translate »