ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳಿ
ಮೈಸೂರು

ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳಿ

October 21, 2022

ಮೈಸೂರು, ಅ.20(ಎಸ್‍ಬಿಡಿ)- ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ `ಪ್ರಗತಿಯ ಪ್ರತಿಮೆ’ ಅನಾವರಣ ಸಮಾರಂಭದಲ್ಲಿ ಹೆಚ್ಚಿನ ಜನ ಭಾಗಿಯಾಗಬೇಕೆಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ್ ಮನವಿ ಮಾಡಿದರು.
ಮೈಸೂರಿನ ಬೋಗಾದಿಯಲ್ಲಿರುವ ಶ್ರೀ ಆದಿಚುಂಚನ ಗಿರಿ ಶಾಖಾ ಮಠದ ಆವರಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನ.11ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪೇಗೌಡರ ಬೃಹತ್ ಪ್ರತಿಮೆಯನ್ನು ಅನಾವರಣ ಮಾಡಲಿದ್ದು, ಆ ಐತಿಹಾಸಿಕ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲೆಯ ಹೆಚ್ಚು ಜನ ಪಾಲ್ಗೊಳ್ಳಬೇಕು. ಈ ಹಿನ್ನೆಲೆ ಯಲ್ಲಿ ಅ.22ರಂದು ನಾಡಪ್ರಭು ಕೆಂಪೇಗೌಡರ ರಥ ಮೈಸೂರಿಗೆ ಆಗಮಿಸಲಿದ್ದು, ಅದ್ಧೂರಿಯಾಗಿ ಬರ ಮಾಡಿಕೊಳ್ಳಬೇಕು. ಶ್ರೀ ಮಠದ ನೇತೃತ್ವದಲ್ಲೇ ಈ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಪ್ರತಿ ಯೊಬ್ಬರೂ ಸಹಕರಿಸಬೇಕೆಂದು ಕೋರಿಕೊಂಡರು.

ಶಾಸಕ ಎಲ್.ನಾಗೇಂದ್ರ ಮಾತನಾಡಿ, ಅ.22ರಂದು ಮೈಸೂರಿಗೆ ಆಗಮಿಸಲಿರುವ ನಾಡಪ್ರಭು ಕೆಂಪೇ ಗೌಡರ ರಥವನ್ನು ಮೈಸೂರು-ಬೆಂಗಳೂರು ಹೆದ್ದಾರಿಯ ಕೆಂಪೇಗೌಡರ ವೃತ್ತದಲ್ಲಿ ಅದ್ಧೂರಿಯಾಗಿ ಸ್ವಾಗತಿಸ ಲಾಗುವುದು. ಎಲ್ಲಾ ಸಂಘ-ಸಂಸ್ಥೆಗಳು, ಸಂಘಟನೆಗಳು ಸಹಕಾರ ನೀಡಬೇಕು. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಕೆಂಪೇಗೌಡರ ಬೃಹತ್ ಪ್ರತಿಮೆ ಸೇರಿದಂತೆ ಅವರ ಸಾಧನೆಯನ್ನು ಚಿರಸ್ಥಾಯಿ ಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅತ್ಯಂತ ಆಸಕ್ತಿಯಿಂದ ಕಾರ್ಯಕ್ರಮಗಳನ್ನು ರೂಪಿಸಿದೆ. ಇಂತಹ ಸಂದರ್ಭದಲ್ಲಿ ಜಾತ್ಯಾತೀತವಾಗಿ, ಪಕ್ಷಾತೀತವಾಗಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವ ಮೂಲಕ ಕೆಂಪೇಗೌಡರಿಗೆ ಗೌರವ ಸಲ್ಲಿಸಬೇಕೆಂದು ಕೇಳಿಕೊಂಡರು.

ಶ್ರೀ ಆದಿ ಚುಂಚನಗಿರಿ ಶಾಖಾ ಮಠದ ಶ್ರೀ ಸೋಮನಾಥ ಸ್ವಾಮೀಜಿ ಮಾತನಾಡಿ, ಜಾತ್ಯಾತೀತ ನಿಲುವು ಹೊಂದಿದ್ದ ನಾಡಪ್ರಭು ಕೆಂಪೇಗೌಡರು ಒಂದು ಸಮುದಾಯಕ್ಕೆ ಸೀಮಿತರಲ್ಲ. ಎಲ್ಲಾ ಸಮು ದಾಯದವರಿಗೆ ಕಸುಬಿನ ಆಧಾರದಲ್ಲಿ ಪೇಟೆಗಳನ್ನು ನಿರ್ಮಿಸಿದ್ದ ಅವರ ಆದರ್ಶ ನಿಲುವಿಗೆ ಒಂದು ಸಾಕ್ಷಿ ಯಾಗಿದೆ. ಹಾಗಾಗಿ ಕೆಂಪೇಗೌಡರ ಪ್ರತಿಮೆ ಅನಾವರಣ ಹಾಗೂ ಅದಕ್ಕೂ ಮುನ್ನ ರಥ ಸಂಚಾರದ ಯಶಸ್ವಿಗೆ ಸಮಾಜದ ಎಲ್ಲಾ ಸಮುದಾಯದವರೂ ಕೈ ಜೋಡಿಸಬೇಕೆಂದು ತಿಳಿಸಿದರು.

ಈ ಸಂಧರ್ಭದಲ್ಲಿ ಮೈಸೂರು ಜಿಲ್ಲಾ ಒಕ್ಕಲಿಗರ ಸಂಘದ ಉಪಾಧ್ಯಕ್ಷ ರವಿ ರಾಜಕೀಯ, ಪ್ರಧಾನ ಕಾರ್ಯದರ್ಶಿ ಚೇತನ್, ಖಜಾಂಚಿ ಲೋಕೇಶ್, ರಾಜ್ಯ ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಕೆ.ವಿ.ಶ್ರೀಧರ್, ನಿರ್ದೇಶಕ ಸಿ.ಜಿ.ಗಂಗಾಧರ್, ಪ್ರಶಾಂತ್ ಗೌಡ, ಗುರು, ಜಯರಾಮ್, ರಾಜು, ಕುಮಾರ್ ಗೌಡ, ಸಂತೋಷ, ನಾಗಣ್ಣ ಮತ್ತಿತರರು ಉಪಸ್ಥಿತರಿದ್ದರು.

ಮೈಸೂರಿನ ಶ್ರೀ ಆದಿಚುಂಚನಗಿರಿ ಶಾಖಾ ಮಠದಲ್ಲಿ ಬುಧವಾರ ನಡೆದ ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ಮಾತನಾಡಿದರು. ಶ್ರೀ ಸೋಮನಾಥ ಸ್ವಾಮೀಜಿ, ಶಾಸಕ ಎಲ್.ನಾಗೇಂದ್ರ ಮತ್ತಿತರರು ಉಪಸ್ಥಿತರಿದ್ದರು.

 

Translate »