ಪತ್ನಿ ವಿರುದ್ಧ ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು
ಹಾಸನ

ಪತ್ನಿ ವಿರುದ್ಧ ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

July 3, 2018

ಹಾಸನ: ತನ್ನ ಸಾವಿಗೆ ಪತ್ನಿಯೇ ಕಾರಣವೆಂದು ಡೆತ್‍ನೋಟ್ ಬರೆದಿಟ್ಟು ವಿಷ ಸೇವಿಸಿದ್ದ ವ್ಯಕ್ತಿವೋರ್ವ ಚಿಕಿತ್ಸೆ ಫಲಿಸದೆ ಅಸುನೀಗಿರುವ ಘಟನೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ತಾಲೂಕಿನ ಮರ್ಕುಲಿ ಗ್ರಾಮದ ನಿವಾಸಿ ರಾಘವೇಂದ್ರ(45) ಮೃತರು. ನನ್ನ ಸಾವಿಗೆ ನನ್ನ ಹೆಂಡತಿಯೇ ಕಾರಣವೆಂದು ಡೆತ್‍ನೋಟ್ ಬರೆದಿಟ್ಟು ವಿಷ ಸೇವಿಸಿದ್ದ. ಬಳಿಕ ಆತನನ್ನು ನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಹಲವು ವರ್ಷಗಳಿಂದ ಪತಿ -ಪತ್ನಿ ನಡುವೆ ಕೌಟುಂಬಿಕ ಕಲಹ ಗಳಿತ್ತು ಎನ್ನಲಾಗಿದ್ದು, ಡೆತ್‍ನೋಟ್ ಆಧರಿಸಿ ರಾಘವೇಂದ್ರನ ಪತ್ನಿ ವಿರುದ್ಧ ಶಾಂತಿ ಗ್ರಾಮ ಠಾಣೆ ಪೊಲೀಸರು ಪ್ರಕರಣ ದಾಖಸಿಕೊಂಡಿದ್ದಾರೆ.

Translate »