ಆ.26ರಿಂದ ಸೆ.30ರವರೆಗೆ ರಾಜ್ಯಾದ್ಯಂತ ಬೃಹತ್ ಅಭಿಯಾನ
ಮೈಸೂರು

ಆ.26ರಿಂದ ಸೆ.30ರವರೆಗೆ ರಾಜ್ಯಾದ್ಯಂತ ಬೃಹತ್ ಅಭಿಯಾನ

August 24, 2021

ಮೈಸೂರು,ಆ.23(ಪಿಎಂ)-ಲಿಂಗಾಯತ ಪಂಚಮ ಸಾಲಿ, ಲಿಂಗಾಯತ ಗೌಡ, ಮಲೆಗೌಡ ಲಿಂಗಾಯತ ಮತ್ತು ದೀಕ್ಷಾ ಲಿಂಗಾಯತ ಸಮುದಾಯಕ್ಕೆ `2ಎ’ ಮೀಸಲಾತಿ ಸೌಲಭ್ಯ ನೀಡಬೇಕೆಂದು ಆಗ್ರಹಿಸಿ ಹಾಗೂ ಈ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿ ಸುವ ಸಲುವಾಗಿ ಆ.26ರಿಂದ ಸೆ.30ರವರೆಗೆ `ಪ್ರತಿಜ್ಞಾ ಪಂಚಾಯತ್’ ಶೀರ್ಷಿಕೆಯಡಿ ರಾಜ್ಯಾದ್ಯಂತ ಬೃಹತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮ ವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಉತ್ತರ ಕರ್ನಾಟಕದಲ್ಲಿರುವ ಬಹು ಸಂಖ್ಯಾತ ಲಿಂಗಾಯತ ಪಂಚಮಸಾಲಿ ಸಮು ದಾಯವನ್ನು ಒಗ್ಗೂಡಿಸಿ ಹೋರಾಟ ನಡೆಸಲಾಗಿದೆ. ಸಮುದಾಯಕ್ಕೆ ಶೈಕ್ಷಣಿಕ ಮತ್ತು ಸಾಮಾಜಿಕ ಹಿಂದುಳಿದಿರುವಿಕೆ ಆಧಾರದಲ್ಲಿ 2ಎ ಮೀಸಲಾತಿ ನೀಡಬೇಕೆಂದು ಬೃಹತ್ ಚಳುವಳಿ ನಡೆಸಲಾಗಿದೆ. ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ವಿಧಾನಸಭೆ ಅಧಿ ವೇಶನದಲ್ಲಿ 6 ತಿಂಗಳ ಕಾಲಾವಕಾಶ ಕೇಳಿತ್ತು. ಈ ಗಡುವು ಸೆ.30ಕ್ಕೆ ಮುಕ್ತಾಯ ಗೊಳ್ಳಲಿದೆ ಎಂದು ಹೇಳಿದರು.
ಅದೇ ರೀತಿ ಹಳೇ ಮೈಸೂರು ಪ್ರಾಂತ್ಯದ ಲಿಂಗಾಯತಗೌಡ ಸೇರಿದಂತೆ ರಾಜ್ಯದ ಇನ್ನಿತರ ಭಾಗದ ಮಲೆಗೌಡ ಲಿಂಗಾ ಯತ ಮತ್ತು ದೀಕ್ಷಾ ಲಿಂಗಾಯತ ಸಮುದಾಯ ಗಳಿಗೂ `2ಎ’ ಮೀಸಲಾತಿ ಸೌಲಭ್ಯ ನೀಡಬೇಕೆಂಬುದು ನಮ್ಮ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ಪ್ರತಿಜ್ಞಾ ಪಂಚಾ ಯತ್ ಅಭಿಯಾನ ಏರ್ಪಡಿಸಲಾಗಿದೆ. ಅಭಿಯಾನಕ್ಕೆ ಆ.26 ರಂದು ಬೆಳಗ್ಗೆ 10ಕ್ಕೆ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಚಾಲನೆ ನೀಡಲಾಗು ವುದು. ಬಳಿಕ ರಾಜ್ಯಾದ್ಯಂತ ಎಲ್ಲಾ ತಾಲೂಕು ಕೇಂದ್ರ ಗಳಲ್ಲಿ ಅಭಿಯಾನದಡಿ ಜಾಗೃತಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಅವರು ಹೇಳಿದರು.

ಅಭಿಯಾನದ ಚಾಲನೆ ಬಳಿಕ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಲಿದೆ. ಆ.27ರಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ, ಮೈಸೂರು ಜಿಲ್ಲೆಯ ನಂಜನಗೂಡು, ಮೈಸೂರು ನಗರ, ಆ.28ರಂದು ಹೆಚ್‍ಡಿ ಕೋಟೆ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ಮತ್ತು ಕೆಆರ್ ನಗರದಲ್ಲಿ ಕಾರ್ಯಕ್ರಮ ಜರುಗಲಿವೆ. ಈ ಸಂಬಂಧ ಸ್ಥಳ ಮತ್ತು ಕಾರ್ಯಕ್ರಮದ ಸ್ವರೂಪ ಕುರಿ ತಂತೆ ಶೀಘ್ರದಲ್ಲಿ ಮಾಹಿತಿ ನೀಡಲಾಗುವುದು. ಈ ನಮ್ಮ ಸಮುದಾಯಗಳು ಉನ್ನತ ಶಿಕ್ಷಣ ಮತ್ತು ಸರ್ಕಾರಿ ಕೆಲಸದಿಂದ ವಂಚಿತರಾಗುತ್ತಿದ್ದಾರೆ. ಈ ಕಾರಣಕ್ಕಾಗಿ ಮೀಸಲಾತಿ ಅಗತ್ಯವಾಗಿದೆ ಎಂದು ಹೇಳಿದರು.

ಮಾಜಿ ಶಾಸಕ ಹೆಚ್.ಎಸ್.ಶಿವಶಂಕರ್, ಪಂಚಮ ಸಾಲಿ ಲಿಂಗಾಯತ ಹೋರಾಟ ಸಮನ್ವಯ ಸಮಿತಿ ಸಂಚಾಲಕ ಮಲ್ಲೇಶ್, ಲಿಂಗಾಯತ ಗೌಡ ಮಹಾ ಸಭಾದ ರಾಜ್ಯಾಧ್ಯಕ್ಷ ಆಲನಹಳ್ಳಿ ಪುಟ್ಟಸ್ವಾಮಿ, ರಾಜ್ಯ ಕಾರ್ಯದರ್ಶಿ ಕೇಬಲ್ ಮಹೇಶ್ ಮತ್ತಿತರರು ಗೋಷ್ಠಿಯಲ್ಲಿದ್ದರು.

Translate »