ಕಾಣೆಯಾಗಿದ್ದ ವಿದ್ಯಾರ್ಥಿಯ ಶವ ಪತ್ತೆ
ಕೊಡಗು

ಕಾಣೆಯಾಗಿದ್ದ ವಿದ್ಯಾರ್ಥಿಯ ಶವ ಪತ್ತೆ

November 22, 2018

ಕುಶಾಲನಗರ: ಮಂಗಳವಾರದಿಂದ ಕಾಣೆಯಾಗಿದ್ದ ವಿದ್ಯಾರ್ಥಿಯ ಶವ ಇಂದು ಇಲ್ಲಿನ ಮಾದಾಪಟ್ಟಣ ಬಳಿಯ ಕಾವೇರಿ ನದಿಯಲ್ಲಿ ದೊರೆತಿದೆ.

ಮೂಲತಃ ಸಕಲೇಶಪುರದಲ್ಲಿ ಕಾರ್ತಿಕ್ ಕುಶಾಲನಗರದ ಪಾಲಿಟೆಕ್ನಿಕ್‍ನಲ್ಲಿ ಪ್ರಥಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿ ಯಾಗಿದ್ದು, ಹಾಸ್ಟೆಲ್‍ನಲ್ಲಿ ವಾಸವಿದ್ದ ಕಾರ್ತಿಕ್ ನಿನ್ನೆಯಿಂದ ಕಾಣೆಯಾಗಿದ್ದ. ಈ ಬಗ್ಗೆ ಪ್ರಾಂಶುಪಾಲರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇಂದು ಕಾವೇರಿ ನದಿಯಲ್ಲಿ ಶವ ಪತ್ತೆಯಾಗಿದ್ದು, ಈಜಲು ತೆರಳಿದ್ದ ವೇಳೆ ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ. ಕುಶಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

Translate »