ಖಾಸಗಿ ಆಸ್ಪತ್ರೆ ಬಂದ್‍ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ
ಚಾಮರಾಜನಗರ

ಖಾಸಗಿ ಆಸ್ಪತ್ರೆ ಬಂದ್‍ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

July 29, 2018

ಚಾಮರಾಜನಗರ: ಕೇಂದ್ರ ಸರ್ಕಾರ ಕಾರಿಗೆ ತರಲು ಮುಂದಾಗಿರುವ ರಾಷ್ಟ್ರೀಯ ವೈದ್ಯಕೀಯ ಕಮಿಷನ್ ಮಸೂದೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಶನಿವಾರ ಕರೆ ನೀಡಿದ್ದ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್‍ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಜಿಲ್ಲೆಯ ಕೊಳ್ಳೇಗಾಲ ತಾಲೂಕು ಕೇಂದ್ರದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಬೆಳಿಗ್ಗೆಯಿಂದಲೇ ಆಸ್ಪತ್ರೆಯ ಒಪಿಡಿ (ಹೊರ ರೋಗಿಗಳ ವಿಭಾಗ) ಬಂದ್ ಮಾಡಿ ಉಪವಿಭಾಗಾಧಿಕಾರಿ ಬಿ.ಫೌಜಿಯಾತರನ್ನಮ್ ಅವರಿಗೆ ಮನವಿ ಸಲ್ಲಿಸಿ ಬಂದ್‍ಗೆ ಬೆಂಬಲ ಸೂಚಿಸಿದರು. ಆದರೆ, ಚಾಮರಾಜನಗರ, ಯಳಂದೂರು, ಗುಂಡ್ಲುಪೇಟೆ, ಹನೂರು ತಾಲೂಕು ಕೇಂದ್ರಗಳಲ್ಲಿ ಬಂದ್‍ಗೆ ಯಾವುದೇ ಸ್ಪಂದನೆ ದೊರೆಯಲಿಲ್ಲ. ಆಸ್ಪತ್ರೆಗಳು ಎಂದಿನಂತೆ ಕಾರ್ನಿರ್ವಹಿಸಿದವು. ಆಸ್ಪತ್ರೆಯ ವೈದ್ಯಾಧಿಕಾರಿಗಳು ರಾಷ್ಟ್ರೀಯ ವೈದ್ಯಕೀಯ ಕಮಿಷನ್ ಮಸೂದೆಯನ್ನು ಖಂಡಿಸಿ ಜಿಲ್ಲಾಡಳಿತದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ವೈದ್ಯಕೀಯ ಕಮಿಷನ್ ಮಸೂದೆ ಖಂಡಿಸಿ ಈಗಾಗಲೇ ಹಲವು ಬಾರಿ ಬಂದ್ ಮಾಡಲಾಗಿದೆ. ಇದರಿಂದ ರೋಗಿಗಳಿಗೆ ತೊಂದರೆಯಾಗಿತ್ತು. ಹಾಗಾಗಿ, ಈ ಬಾರಿ ಬಂದ್ ಮಾಡಲಿಲ್ಲ. ಇದರ ಬದಲಿಗೆ ಎಲ್ಲ ಖಾಸಗಿ ಆಸ್ಪತ್ರೆಗಳ ಮುಂಭಾಗ ‘ಧಿಕ್ಕಾರ ದಿವಾಸ್’ ಎಂದು ನಾಮಫಲಕ ಹಾಕಿದ್ದೇವೆ ಎಂದು ಜಿಲ್ಲಾ ಖಾಸಗಿ ವೈದ್ಯರ ಸಂಘದ ಅಧ್ಯಕ್ಷ ಡಾ.ಬಸವರಾಜೇಂದ್ರ ‘ಮೈಸೂರು ಮಿತ್ರ’ನಿಗೆ ತಿಳಿಸಿದರು.

Translate »