ಅರೆ ಬೆಂದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ
ಹಾಸನ

ಅರೆ ಬೆಂದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ

January 9, 2019

ಹಾಸನ: ಅರ್ಧಂಬರ್ಧ ಬೆಂದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಹಾಸನದ ಹೊಸ ಬಸ್ ನಿಲ್ದಾಣದ ಬಳಿ ಮಂಗಳವಾರ ಪತ್ತೆಯಾಗಿದೆ.

ಸುಮಾರು 50 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಶವ ಎಂದು ಗುರುತಿ ಸಲಾಗಿದೆ. ಕುಡಿದ ಅಮಲಿನಲ್ಲಿ ಗಲಾಟೆ ಸಂಭವಿಸಿ, ನಂತರ ಈತನನ್ನು ಕೊಲೆ ಮಾಡಿ ಪ್ರಕರಣವನ್ನು ಮುಚ್ಚಿಹಾಕುವ ಸಲುವಾಗಿ ಶವವನ್ನು ಪೆÇದೆಯೊಂದರ ಬಳಿ ತಂದು ಯಾವುದೇ ಸುಳಿವು ಸಿಗದಂತೆ ಸುಟ್ಟು ಹಾಕಲು ಪ್ರಯತ್ನ ಮಾಡಲಾಗಿದೆ ಎನ್ನಲಾಗಿದೆ.
ಇಂದು ಭಾರತ್ ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿ ಜನಸಂಖ್ಯೆ ವಿರಳವಾಗಿತ್ತು. ಹಾಗಾಗಿ ದುಷ್ಕರ್ಮಿಗಳು ಶವವನ್ನು ಬಸ್ ನಿಲ್ದಾಣದ ಬಳಿ ಸುಟ್ಟು ಹಾಕಿದ್ದಾರೆ. ಸಾರ್ವಜನಿಕರು ಅರ್ಧಂಬರ್ಧ ಬೆಂದಿದ್ದ ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್‍ಗೌಡ, ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿ ನಂದಿನಿ, ಬಡಾವಣೆ ಪೊಲೀಸ್ ಸಬ್‍ಇನ್ಸ್ ಪೆಕ್ಟರ್ ಸುರೇಶ್, ಶ್ವಾನದಳ ಸಿಬ್ಬಂದಿ, ಬೆರಳಚ್ಚು ತಜ್ಞರು ಒಳಗೊಂಡಂತೆ ಬಡಾವಣೆ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೆ.ಆರ್. ಪುರಂ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Translate »