ಮೈಸೂರಲ್ಲಿ ಪ್ರತ್ಯೇಕ ಪೋಕ್ಸೋ ಕೋರ್ಟ್ ಆರಂಭ
ಮೈಸೂರು

ಮೈಸೂರಲ್ಲಿ ಪ್ರತ್ಯೇಕ ಪೋಕ್ಸೋ ಕೋರ್ಟ್ ಆರಂಭ

March 17, 2020

ಮೈಸೂರು,ಮಾ.16(ಆರ್‍ಕೆ)-ಮೈಸೂರಿನ ಜಿಲ್ಲಾ ನ್ಯಾಯಾಲಯ (ಹಳೇ ಕೋರ್ಟ್)ದ ಆವರಣದಲ್ಲಿ ಪೋಕ್ಸೋ ಪ್ರಕರಣಗಳ ವಿಚಾರಣೆ ಗಾಗಿ ಪ್ರತ್ಯೇಕ ನ್ಯಾಯಾಲಯ ಇಂದಿನಿಂದ ಆರಂಭ ವಾಯಿತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾ ಲಯದ ನ್ಯಾಯಾಧೀಶ ಎಸ್.ಕೆ.ಒಂಟಿಗೋಡಿ ಅವರು ಪೋಕ್ಸೊ  ವಿಶೇಷ ನ್ಯಾಯಾ ಲಯವನ್ನು ಟೇಪು ಕತ್ತರಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭ ಪೋಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ದೇವರಾಜು, ಮೈಸೂರು ವಕೀಲರ ಸಂಘದ ಅಧ್ಯಕ್ಷ ಆನಂದಕುಮಾರ್, ಕಾರ್ಯದರ್ಶಿ ಶಿವಣ್ಣ, ಶ್ರೀಮತಿ ಜಯಶ್ರೀ ಸೇರಿದಂತೆ ಹಲವರು ಉಪಸ್ಥಿತರಿದ್ದರು. ರಾಜ್ಯದ ಪ್ರತೀ ಜಿಲ್ಲೆಗಳಲ್ಲಿ ಪೋಕ್ಸೊ ವಿಶೇಷ ನ್ಯಾಯಾ ಲಯ ತೆರೆಯಬೇಕೆಂದು ಹೈಕೋರ್ಟ್ ನ್ಯಾಯಮೂರ್ತಿಗಳು ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಮೈಸೂರಲ್ಲಿ ಪ್ರಥಮ ನ್ಯಾಯಾಲಯವನ್ನು ಉದ್ಘಾಟಿಸಲಾಯಿತು.

Translate »