ಕೆ.ಆರ್.ಪೇಟೆ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಸ್ತ್ರೀಶಕ್ತಿ ಮಹಿಳಾ ಸ್ವಸಹಾಯ ಸಂಘದ ಬ್ಯಾಂಕ್ ಸಾಲ ಮನ್ನಾ ಮಾಡಬೇಕು. ಡೀಸೆಲ್, ಪೆಟ್ರೋಲ್, ವಿದ್ಯುತ್ ದರ ಕಡಿತಗೊಳಿಸಬೇಕು ಎಂದು ಆಗ್ರಹಿಸಿ ಪಟ್ಟಣದಲ್ಲಿ ಬುಧವಾರ ತಾಲೂಕು ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರವಾಸಿ ಮಂದಿರ ವೃತ್ತದಲ್ಲಿ ಸಮಾ ವೇಶಗೊಂಡ ಕಾರ್ಯಕರ್ತರು ಹಾಗೂ ಸಂಘಟನೆಯ ಮಹಿಳಾ ಘಟಕದ ಪದಾಧಿಕಾರಿಗಳು ಮಾನವ ಸರಪಳಿ ನಿರ್ಮಿಸಿ ಕೆಲ ಕಾಲ ಮೈಸೂರು-ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿಯನ್ನು ತಡೆದು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಜೆಟ್‍ನಲ್ಲಿ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾದ ಬಗ್ಗೆ ಪ್ರಸ್ತಾಪ ಮಾಡದೆ ನಿರ್ಲಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿರುದ್ಧ ಅಸಮಾ ಧಾನ ವ್ಯಕ್ತಪಡಿಸಿದರು.
ಎಚ್.ಡಿ.ಕುಮಾರಸ್ವಾಮಿ ಅವರು ಚುನಾವಣಾ ಪ್ರಣಾಳಿಕೆಯಲ್ಲಿ ಸ್ತ್ರೀಶಕ್ತಿ ಸಂಘಗಳ ಬ್ಯಾಂಕ್ ಸಾಲ ಹಾಗೂ ರೈತರ ಸಾಲವನ್ನು ಅಧಿಕಾರಕ್ಕೆ ಬಂದ 24ಗಂಟೆ ಯಲ್ಲಿಯೇ ಮನ್ನಾ ಮಾಡುವುದಾಗಿ ಭರ ವಸೆ ನೀಡಿದ್ದರು. ಆದರೆ, ಅವರು ಬಜೆಟ್ ನಲ್ಲಿ ಸ್ತ್ರೀಶಕ್ತಿ ಮಹಿಳಾ ಸಂಘಗಳ ಸಾಲ ಮನ್ನಾ ವಿಚಾರವಾಗಿ ಯಾವುದೇ ಪ್ರಸ್ತಾಪ ಮಾಡದಿರುವುದು ಮಹಿಳೆಯರಿಗೆ ಮಾಡಿದ ಮೋಸವಾಗಿದೆ. ಜೊತೆಗೆ, ರೈತರ ಎಲ್ಲಾ ಸಾಲವನ್ನು ಮನ್ನಾ ಮಾಡದೇ ಕೇವಲ ಸುಸ್ತಿ ಸಾಲವನ್ನು ಮನ್ನಾ ಮಾಡಿರುವ ಕಾರಣ ತಾಲೂಕಿನ 6 ಮಂದಿ ರೈತರಿಗೆ ಮಾತ್ರ ಸಹಕಾರ ಸಂಘದ ಸಾಲ ಮನ್ನಾ ಆಗಿದೆ ಎಂದು ದೂರಿದರು.
ಕುಮಾರಸ್ವಾಮಿ ಅವರು ನೀಡಿದ ಭರವಸೆಯನ್ನು ನಂಬಿ ಜಿಲ್ಲೆಯ ಎಲ್ಲ ಮಹಿಳಾ ಮತದಾರರು ಜೆಡಿಎಸ್‍ಗೆ ಬೆಂಬಲ ನೀಡಿ ದ್ದಾರೆ. ಇದರಿಂದಾಗಿ ಜಿಲ್ಲೆಯ 7 ಕ್ಷೇತ್ರ ದಲ್ಲಿಯೂ ಜೆಡಿಎಸ್ ಜಯಗಳಿಸಿದೆ. ಹಾಗಾಗಿ ಕುಮಾರಸ್ವಾಮಿ ಅವರು ಕೂಡಲೇ, ಸ್ತ್ರೀಶಕ್ತಿ ಮಹಿಳಾ ಸ್ವಸಹಾಯ ಸಂಘಗಳ ಎಲ್ಲಾ ಬ್ಯಾಂಕ್ ಸಾಲವನ್ನು ಮನ್ನಾ ಮಾಡುವ ಮೂಲಕ ಕೊಟ್ಟ ವಾಗ್ದಾನವನ್ನು ಉಳಿಸಿ ಕೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ತಾಲೂಕು ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷ ಕೆ.ಎಸ್. ಕುಮಾರ್, ಕಾರ್ಯಾಧ್ಯಕ್ಷ ಮಹೇಶ್, ಉಪಾಧ್ಯಕ್ಷ ಹೊನ್ನೇನಹಳ್ಳಿ ರವಿ ಎಸ್. ಗೌಡ, ಸಂಘಟನಾ ಕಾರ್ಯದರ್ಶಿ ಸೋಮಶೇಖರ್, ತಾಲೂಕು ಯುವ ಘಟಕದ ಅಧ್ಯಕ್ಷ ಮದನ್‍ಗೌಡ, ತಾಲೂಕು ಮಹಿಳಾ ಘಟಕದ ಅಧ್ಯಕ್ಷ ಮೂಡನಹಳ್ಳಿ ಮಧು, ಕಾರ್ಯಾಧ್ಯಕ್ಷೆ ಸರಸ್ವತಿ, ನಗರ ಘಟಕದ ಅಧ್ಯಕ್ಷೆ ಮಂಗಳಾ, ತಾಲೂಕು ಗೌರವಾಧ್ಯಕ್ಷೆ ಜಯಲಕ್ಷ್ಮಿ, ತಾಲೂಕು ಸಂಚಾಲಕಿ ಅಕ್ಕಿ ಹೆಬ್ಬಾಳು ಭಾರತಿ, ಕಸಬಾ ಹೋಬಳಿ ಘಟಕದ ಅಧ್ಯಕ್ಷ ಆನಂದ್, ಕಿಕ್ಕೇರಿ ಹೋಬಳಿ ಘಟಕದ ಅಧ್ಯಕ್ಷ ಯೋಗೇಶ್, ಶೀಳನೆರೆ ಹೋಬಳಿ ಘಟಕದ ಉಪಾಧ್ಯಕ್ಷ ಎಚ್.ವಿ.ರಘುಪತಿ, ಪದಾಧಿಕಾರಿಗಳಾದ ಆಟೋ ಸೋಮು, ಅಭಿ, ದಿನೇಶ್, ರೇವು, ಪ್ರಜ್ವಲ್, ಯೋಗೇಶ್ ಇದ್ದರು.