ಪುತ್ತೂರಿನ ಸಾಮೂಹಿಕ ಅತ್ಯಾಚಾರ ಖಂಡಿಸಿ ಮೈಸೂರಲ್ಲಿ ಸರಣಿ ಪ್ರತಿಭಟನೆ
ಮೈಸೂರು

ಪುತ್ತೂರಿನ ಸಾಮೂಹಿಕ ಅತ್ಯಾಚಾರ ಖಂಡಿಸಿ ಮೈಸೂರಲ್ಲಿ ಸರಣಿ ಪ್ರತಿಭಟನೆ

July 7, 2019

ಮೈಸೂರು, ಜು.6(ಆರ್‍ಕೆ)- ಪುತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆಯಿತೆನ್ನಲಾದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ, ಮಹಿಳಾ ಕಾಂಗ್ರೆಸ್ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಮೈಸೂರಲ್ಲಿ ಇಂದು ಪ್ರತ್ಯೇಕ ಪ್ರತಿಭಟನೆ ನಡೆಸಿದರು. ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮೋಸಿನ್ ಖಾನ್ ನೇತೃತ್ವದಲ್ಲಿ ಸದಸ್ಯರು ಮೈಸೂರಿನ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಸಾಮೂಹಿಕ ಅತ್ಯಾಚಾರವೆಸಗಿರುವ ಆರೋಪಿ ಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದರು.

ಪುತ್ತೂರಿನಲ್ಲಿ ನಡೆದಿರುವ ಹೇಯ ಕೃತ್ಯದ ಬಗ್ಗೆ ಅಲ್ಲಿನ ಬಹುತೇಕ ಜನಪ್ರತಿನಿಧಿಗಳಾಗಿರುವ ಬಿಜೆಪಿಯವರು ಮಾತನಾಡದಿರುವುದು ಶೋಚನೀಯವಾಗಿದೆ ಎಂದು ಆರೋ ಪಿಸಿದ ಪ್ರತಿಭಟನಾಕಾರರು, ತಕ್ಷಣವೇ ಅತ್ಯಾಚಾರವೆಸಗಿ ದವರ ವಿರುದ್ಧ ಕಾನೂನು ರೀತಿಯ ಕಠಿಣ ಕ್ರಮ ಕೈಗೊಳ್ಳ ಬೇಕೆಂದು ಒತ್ತಾಯಿಸಿದರು. ರಾಜರಾಜೇಂದ್ರ, ಮನೋಜ್, ಮಹೇಶ್, ಕೆ. ಚೇತನ್, ಕಾಂತರಾಜು, ಬಸವಣ್ಣ ಸೇರಿ ದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಗರ ಮತ್ತು ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತೆ ಯರು, ಪುತ್ತೂರು ಸಾಮೂಹಿಕ ಅತ್ಯಾಚಾರ ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಡಾ.ಪುಷ್ಪಾ ಅಮರನಾಥ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ಪ್ರಕರಣ ನಾಗರಿಕ ಸಮಾಜ ತಲೆ ತಗ್ಗಿಸುವಂತ ಹದು ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಮತ್ತೊಂ ದೆಡೆ ಪುರಭವನದ ಡಾ. ಅಂಬೇಡ್ಕರ್ ಪ್ರತಿಮೆ ಬಳಿ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಅತ್ಯಾಚಾರವೆಸಗಿದವರ ವಿರುದ್ಧ ಘೋಷಣೆಗಳನ್ನು ಕೂಗಿ ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಶಿವ ಕುಮಾರ್, ನಾರಾಯಣ್, ಮಂಜು, ಸೋಮಣ್ಣ ಇದ್ದರು.

Translate »