ಚಾಮರಾಜನಗರ, ಏ.30- ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕøತಿ ಇಲಾಖೆ ವತಿ ಯಿಂದ ಭಗೀರಥ ಮಹರ್ಷಿ ಅವರ ಜಯಂತಿಯನ್ನು ಕೋವಿಡ್-19 ಹಿನ್ನೆಲೆ ಯಲ್ಲಿ ಸರಳವಾಗಿ ಹಾಗೂ ಸಾಂಕೇತಿಕ ವಾಗಿ ಆಚರಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿಂದು ಆಯೋಜಿಸಲಾಗಿದ್ದ ಸರಳ ಕಾರ್ಯಕ್ರಮವನ್ನು ಶಾಸಕ ಸಿ. ಪುಟ್ಟರಂಗ ಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆ.ಎಸ್. ಮಹೇಶ್ ದೀಪ ಬೆಳಗುವ ಮೂಲಕ ಉದ್ಘಾ ಟಿಸಿದರು. ಇದೇ ಸಂದರ್ಭದಲ್ಲಿ ಮಾತ ನಾಡಿದ ಶಾಸಕ ಸಿ. ಪುಟ್ಟರಂಗಶೆಟ್ಟಿ, ಭಗೀರಥ ಮಹರ್ಷಿ ಅವರ ಸಾಧನೆ ಸಿದ್ದಾಂತ ನಮ್ಮೆ ಲ್ಲರಿಗೂ ಆದರ್ಶಪ್ರಾಯವಾಗಿದೆ. ಅವರ ಛಲಬಿಡದ ಪ್ರಯತ್ನ ಗುಣಗಳನ್ನು ಅಳವಡಿಸಿ ಕೊಳ್ಳಬೆಕಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಮುಂದಾಗೋಣ ಎಂದು ಸಲಹೆ ಮಾಡಿದರು.
ಪ್ರಸ್ತುತ ಕೋವಿಡ್-19 ಮುಂಜಾಗ್ರತಾ ಕ್ರಮಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಸಾಮಾಜಿಕ ಅಂತರ ಕಾಯ್ದು ಕೊಂಡು ಸರಳವಾಗಿ ಕಾರ್ಯಕ್ರಮ ಏರ್ಪಾ ಡಾಗಿದೆ. ಈ ದಿಸೆಯಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದ ಶಾಸಕರು ಎಲ್ಲರಿಗೂ ಭಗೀರಥ ಮಹರ್ಷಿ ಜಯಂತಿ ಶುಭಾಶಯ ಕೋರಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆ.ಎಸ್. ಮಹೇಶ್ ಮಾತನಾಡಿ, ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾ ಗುತ್ತಿದೆ. ಭಗೀರಥ ಸಮಾಜ ಸಾಮಾಜಿಕ ವಾಗಿ ಶೈಕ್ಷಣಿಕವಾಗಿ ಮುಂದೆ ಬರಬೇಕಿದೆ. ಸಮುದಾಯಕ್ಕೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಪ್ರಸ್ತುತ ಉಂಟಾಗಿರುವ ಪರಿಸ್ಥಿತಿ ಸುಧಾರಿಸಲು ಎಲ್ಲರೂ ಸಹಕಾರ ನೀಡಬೇಕೆಂದು ತಿಳಿಸಿದರು.
ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಮಾತನಾಡಿ, ಉಪ್ಪಾರ ಸಮುದಾಯ ವಾಸಿ ಸುವ ಮೋಳೆಗಳ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಅಭಿವೃದ್ಧಿಗಾಗಿ ಪುನಶ್ಛೇತನ ಮಾಡುವ ದೃಷ್ಠಿಯಿಂದ ಜಿಲ್ಲೆಗೆ ನಾನು ಬಂದ ಆರಂಭ ದಲ್ಲೇ ವರದಿ ತಯಾರಿಸಲು ಮುಂದಾಗಿದ್ದೆ. ಕೊರೊನಾ ಮುಗಿದ ಬಳಿಕ ಈ ಕಾರ್ಯ ಕೈಗೊಂಡು ಸಮುದಾಯವನ್ನು ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಮುಂದುವ ರಿಯುವುದಾಗಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹರ್ಷಲ್ ಬೋಯರ್ ನಾರಾಯಣರಾವ್ ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ್ ಮಾತನಾಡಿ, ಭಗೀರಥ ಅವರ ಮಹತ್ಸಾಧನೆಯಿಂದ ಎಲ್ಲರೂ ಬಹಳಷ್ಟು ಕಲಿಯಬೇಕಿದೆ. ಉಪ್ಪಾರ ಸಮು ದಾಯದ ಅಭಿವೃದ್ಧಿಗೆ ಜಾಗೃತಿ ಮೂಡಿ¸ Àಬೇಕಿದೆ. ಮೌಢ್ಯತೆ ವಿರುದ್ಧ ಅರಿವು ಉಂಟು ಮಾಡಬೇಕಿದೆ ಎಂದರು. ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇ ಶಕರಾದ ಎಚ್.ಕೆ. ಗಿರೀಶ್, ಮುಖಂಡ ರಾದ ಮಹದೇವಶೆಟ್ಟಿ, ಚಿಕ್ಕಮಹದೇವು, ಮಂಗಲ ಶಿವಕುಮಾರ್, ಹನುಮಂತಶೆಟ್ಟಿ ಇತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.