ಡಿಕೆಶಿ ಕಾರಿನ ಮೇಲೆ ಚಪ್ಪಲಿ ಎಸೆತ
News

ಡಿಕೆಶಿ ಕಾರಿನ ಮೇಲೆ ಚಪ್ಪಲಿ ಎಸೆತ

March 29, 2021

ಬೆಳಗಾವಿ, ಮಾ.28- ರಾಸಲೀಲೆ ಸಿಡಿ ಪ್ರಕ ರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವ ಕುಮಾರ್ ಹೆಸರು ಪ್ರಸ್ತಾಪದ ಮಾರನೇ ದಿನವೇ ಡಿ.ಕೆ.ಶಿವಕುಮಾರ್ ಇಂದು ಬೆಳಗಾವಿಗೆ ಆಗಮಿ ಸಿದರು. ಅವರಿಗೆ ರಮೇಶ್ ಜಾರಕಿಹೊಳಿ ಬೆಂಬ ಲಿಗರ ಭಾರೀ ಪ್ರತಿಭಟನೆ ಬಿಸಿ ತಟ್ಟಿತು.

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿ ಳಿದ ಡಿ.ಕೆ.ಶಿವಕುಮಾರ್, ಅಲ್ಲಿಂದ ಹೋಟೆಲ್‍ಗೆ ತೆರಳುವ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಡಿಕೆಶಿ ಪ್ರಯಾಣಿಸುತ್ತಿದ್ದ ಕಾರಿಗೆ ಮುತ್ತಿಗೆ ಹಾಕಿ, ಚಪ್ಪಲಿ ಎಸೆದು, ಧಿಕ್ಕಾರ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಅವರನ್ನು ಎಷ್ಟೇ ನಿಯಂತ್ರಿಸಲು ಪ್ರಯತ್ನಿಸಿದರೂ ರೊಚ್ಚಿಗೆದ್ದ ರಮೇಶ್ ಜಾರಕಿಹೊಳಿ ಬೆಂಬಲಿಗರು ಕೈಗೆ ಸಿಕ್ಕಿದ್ದನ್ನು ತೂರಿ, ಧಿಕ್ಕಾರ ಕೂಗಿದರು. ಡಿಕೆಶಿ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಆ ಕಾರುಗಳ ಕಿಟಕಿ ಗಾಜುಗಳು ಪುಡಿಪುಡಿ ಯಾಗಿವೆ. ಹಲವು ವಾಹನ ಜಖಂಗೊಂಡಿವೆ. ವಿಮಾನ ನಿಲ್ದಾಣದಿಂದ ಹೋಟೆಲ್‍ವರೆಗೂ ರಸ್ತೆಯುದ್ದಕ್ಕೂ ರಮೇಶ್ ಜಾರಕಿಹೊಳಿ ಬೆಂಬಲಿ ಗರು ಧಿಕ್ಕಾರ ಕೂಗಿ ಡಿಕೆಶಿ ವಿರುದ್ಧ ಹರಿಹಾಯ್ದರು.

ಪರಿಸ್ಥಿತಿ ನಿಯಂತ್ರಿಸಲು ಬೆಳಗಾವಿ ಪೊಲೀಸರು ಹರಸಾಹಸಪಟ್ಟರು. ಕೆಲವೊಮ್ಮೆ ಪ್ರತಿಭಟನಾ ಕಾರರ ಮೇಲೆ ಲಾಠಿಚಾರ್ಜ್ ನಡೆಸಿ, ಗುಂಪನ್ನು ಚದು ರಿಸಿದರು. ಪರಿಸ್ಥಿತಿ ಕೈಮೀರಿ ಹೋಗುವುದನ್ನು ತಪ್ಪಿಸಲು ಹಲವು ಪ್ರತಿಭಟನಾಕಾರರನ್ನು ಪೊಲೀ ಸರು ಬಂಧಿಸಿದರು. ಈಗಾಗಲೇ ಬೆಳಗಾವಿ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಕಣಕ್ಕಿಸಲು ಹೈಕಮಾಂಡ್ ನಿರ್ಧರಿಸಿದೆ. ಹೀಗಾಗಿ ನಾಳೆ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸುವುದರಿಂದ ಡಿ.ಕೆ.ಶಿವಕುಮಾರ್ ಈ ಕಾರ್ಯಕ್ರಮದಲ್ಲಿ ಪಾಲ್ಗೊ ಳ್ಳಲು ಬೆಳಗಾವಿಗೆ ಆಗಮಿಸಿದ್ದಾರೆ.

Translate »