ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮುಂದೆ ಜೂ.27ಕ್ಕೆ ಕೆಂಪೇಗೌಡರ ಪ್ರತಿಮೆಗೆ ಶಂಕುಸ್ಥಾಪನೆ
ಮೈಸೂರು

ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮುಂದೆ ಜೂ.27ಕ್ಕೆ ಕೆಂಪೇಗೌಡರ ಪ್ರತಿಮೆಗೆ ಶಂಕುಸ್ಥಾಪನೆ

June 24, 2020

ಬೆಂಗಳೂರು, ಜೂ.23(ಕೆಎಂಶಿ)-ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾ ಣದ ಮುಂಭಾಗದ 23 ಎಕರೆ ಪ್ರದೇಶದಲ್ಲಿ ಸ್ಥಾಪನೆಯಾಗ ಲಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಭವ್ಯ ಪ್ರತಿಮೆ ಹಾಗೂ ಸೆಂಟ್ರಲ್ ಪಾರ್ಕ್ ನಿರ್ಮಾಣಕ್ಕೆ ಇದೇ 27ರಂದು ಭೂಮಿಪೂಜೆ ನಡೆಯಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾ ಯಣ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಉನ್ನತ ಅಧಿಕಾರಿಗಳೊಂದಿಗೆ ಸ್ಥಳದಲ್ಲಿ ವ್ಯಾಪಕ ಪರಿಶೀಲನೆ ನಡೆಸಿದ ಅವರು, ಕಾರ್ಯಕ್ರಮವು ಗೊಂದಲ ಇಲ್ಲದೆ ಸರಳವಾಗಿ, ಅರ್ಥಪೂರ್ಣವಾಗಿ ನಡೆಯಬೇಕು. ಹೆಚ್ಚು ಜನ ಸೇರಲು ಅವಕಾಶ ನೀಡಬಾರದು. ಕೋವಿಡ್-19 ಇರುವ ಕಾರಣದಿಂದ ಹೆಚ್ಚು ಎಚ್ಚರಿಕೆ ವಹಿಸಬೇಕು. ಸರಕಾರ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿ ಗಳು ಪರಸ್ಪರ ಸಹಕಾರದಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು.ಬಿಬಿಎಂಪಿ ಆಯುಕ್ತ ಅನಿಲ್‍ಕುಮಾರ್, ಡಿಸಿಎಂ ಕಾರ್ಯದರ್ಶಿ ಪ್ರದೀಪ್ ಪ್ರಭಾಕರ್, ಉದ್ಯಮಿ ಪ್ರಶಾಂತ ಪ್ರಕಾಶ ಹಾಗೂ ವಿಮಾನ ನಿಲ್ದಾಣದ ಹಿರಿಯ ಅಧಿಕಾರಿಗಳು ಈ ವೇಳೆ ಹಾಜರಿದ್ದರು. ನಮ್ಮ ರಾಜ್ಯದ ಮಟ್ಟಿಗೆ ಮಾತ್ರವಲ್ಲ, ಇಡೀ ದೇಶದಲ್ಲಿಯೇ ಇದೊಂದು ಅಪರೂಪದ ಸ್ಮಾರಕವಾಗಲಿದ್ದು, ದೇಶ ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ನಮ್ಮ ರಾಜ್ಯದ ಭವ್ಯ ಪರಂಪರೆಯನ್ನು ಸಾರಿ ಹೇಳುವ ರೀತಿಯಲ್ಲಿ ಇರುತ್ತದೆ. ವಿಶಾಲವಾದ ಉದ್ಯಾನವನದಲ್ಲಿ ನಮ್ಮ ನಾಡಪ್ರಭುಗಳ ಪ್ರತಿಮೆ ವಿರಾಜಮಾನವಾಗಿ ಕಾಣುವಂತೆ ಯೋಜನೆ ರೂಪಿಸಲಾಗಿದೆ ಎಂದರು. ಇದೇ 27ರಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಮೆ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಲಿದ್ದಾರೆ ಎಂದರು.

Translate »