ಶಾಲೆಯಿಂದ ಹೊರಗುಳಿದ  ಮಕ್ಕಳ ಸಮೀಕ್ಷೆ ಆರಂಭ
ಮೈಸೂರು

ಶಾಲೆಯಿಂದ ಹೊರಗುಳಿದ  ಮಕ್ಕಳ ಸಮೀಕ್ಷೆ ಆರಂಭ

November 15, 2018

ಮೈಸೂರು: ಶಾಲೆಯಿಂದ ಹೊರಗುಳಿದ ಮಕ್ಕಳ ವಿಸ್ತøತ ಸಮೀಕ್ಷಾ ಕಾರ್ಯ ಇಂದಿನಿಂದ ರಾಜ್ಯಾದ್ಯಂತ ಆರಂಭ ವಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಉಪನಿರ್ದೇಶಕಿ ಮಮತಾ ತಿಳಿಸಿದ್ದಾರೆ. ಶಿಕ್ಷಣದಿಂದ ವಂಚಿತರಾಗಿರುವ ಮಕ್ಕಳ ನಿಖರ ಸಂಖ್ಯೆ, ಕಾರಣವನ್ನು ತಿಳಿಯಲೆಂದು ಪರಿ ಣಾಮಕಾರಿಯಾಗಿ ಸಮೀಕ್ಷೆ ನಡೆಸಲು ಮಕ್ಕಳ ಗ್ರಾಮಸಭೆ, ವಾರ್ಡ್ ಸಭೆಗಳನ್ನು ನಡೆಸುವುದಲ್ಲದೆ ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ ಎಂದು ಅವರು ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಕಾರ್ಮಿಕ ಇಲಾಖೆ ಮತ್ತು ಶಿಕ್ಷಣ ಇಲಾಖೆಗಳು ಸೇರಿ ಇಂದಿನಿಂದ ಡಿಸೆಂಬರ್ 15ರವರೆಗೆ ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಸಮೀಕ್ಷಾ ಕಾರ್ಯ ನಡೆಸಿ ನಿಖರ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕೆಂದೂ ಸೂಚಿಸಲಾಗಿದೆ ಎಂದು ಮಮತಾ ಹೇಳಿದರು. ಆಶಾ ಕಾರ್ಯಕರ್ತೆಯರು, ಅಂಗನ ವಾಡಿ ಶಿಕ್ಷಕರು, ಬೇರೆ ಇಲಾಖೆಗಳ ಸಿಬ್ಬಂದಿಗಳನ್ನು ಸಮೀಕ್ಷಾ ಕಾರ್ಯಕ್ಕೆ ಬಳಸಿಕೊಳ್ಳ ಲಾಗಿದ್ದು, ಮನೆ-ಮನೆಗೆ ತೆರಳಿ ಮಕ್ಕಳ ಗಣತಿ ಮತ್ತು ಶಿಕ್ಷಣದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಕಲೆಹಾಕುವ ಕಾರ್ಯ ಇಂದಿನಿಂದ ಆರಂಭವಾಗಿದೆ. ರಾಜ್ಯದಲ್ಲಿ 1ನೇ ತರಗತಿಗೆ ಸೇರಿದ ಮಕ್ಕಳ ಸಂಖ್ಯೆಗಿಂತ 8ನೇ ತರಗತಿಗೆ ಹೋದಾಗ ಇರುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿರುವುದರಿಂದ ಉಳಿದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾ ರೆಂಬುದನ್ನು ಮನಗಂಡು, ಮತ್ತೆ ಅವರನ್ನು ಶಾಲೆಗೆ ಕರೆತರುವ ಉದ್ದೇಶದಿಂದ ಸಮೀಕ್ಷಾ ಕಾರ್ಯವನ್ನು ಸರ್ಕಾರ ನಡೆಸುತ್ತಿದೆ ಎಂದು ಉಪನಿರ್ದೇಶಕರು ತಿಳಿಸಿದ್ದಾರೆ.
ಬಾಲ್ಯ ವಿವಾಹ, ಅಕಾಲಿಕ ನಿಧನ, ವಲಸೆ, ಮಕ್ಕಳ ನಂಬಿಕೆಗಳಂತಹ ಹಲವು ಕಾರಣ ಗಳಿಂದ ಮಕ್ಕಳು ಶಾಲೆಯಿಂದ ದೂರ ಉಳಿದಿರಬಹುದೆಂಬ ಅಭಿಪ್ರಾಯದ ಹಿನ್ನೆಲೆಯಲ್ಲಿ ಸಮೀಕ್ಷೆ ಅನುಕೂಲವಾಗಲಿದೆ ಎಂಬುದು ಸರ್ಕಾರದ ನಿಲುವಾಗಿದೆ ಎಂದು ತಿಳಿಸಿದರು.

Translate »