ವಾರದಿಂದ ಉಂಟಾಗಿದ್ದ ಕುತೂಹಲಕ್ಕೆ ರೋಚಕ ತೆರೆ
ಮೈಸೂರು

ವಾರದಿಂದ ಉಂಟಾಗಿದ್ದ ಕುತೂಹಲಕ್ಕೆ ರೋಚಕ ತೆರೆ

August 6, 2019

ಶ್ರೀನಗರ,ಆ.5- ಜಮ್ಮು ಕಾಶ್ಮೀರದಲ್ಲಿ ಕಳೆ ದೊಂದು ವಾರದಿಂದ ನಡೆಯುತ್ತಿದ್ದ ಬೆಳವಣಿಗೆ ಗಳು ತೀವ್ರ ಕುತೂಹಲ ಮೂಡಿಸಿದ್ದವು. ಆದರೀಗ ಈ ಎಲ್ಲಾ ಕುತೂಹಲಕ್ಕೆ ತೆರೆ ಬಿದ್ದಿದೆ. ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದಂತೆ ಕೇಂದ್ರ ಐತಿಹಾಸಿಕ ನಿರ್ಣಯ ತೆಗೆದುಕೊಂಡಿದೆ. ಈ ಹಿಂದೆ ಕಾಶ್ಮೀರಕ್ಕೆ ಸಂವಿಧಾನದಲ್ಲಿ 35(ಎ), 370ನೇ ವಿಧಿಗಳ ಅನ್ವಯ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊ ಳಿಸಲು ಗೃಹ ಸಚಿವ ಅಮಿತ್ ಶಾ ರಾಜ್ಯಸಭೆ ಯಲ್ಲಿ ಮಸೂದೆ ಮಂಡಿಸಿದ್ದಾರೆ. ಸದ್ಯ ಈ ಪ್ರಸ್ತಾವನೆಗೆ ರಾಷ್ಟ್ರಪತಿ ಸಹಿ ಹಾಕಿದ್ದು, ಸಂಸತ್‍ನ ಬೆಂಬಲ ವಿಲ್ಲದೆಯೂ ಈ ಮಸೂದೆ ಜಾರಿಯಾಗಲಿದೆ.

ಕಾಶ್ಮೀರದಲ್ಲಿ ಅಲ್ಲೋಲ ಕಲ್ಲೋಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಜಮ್ಮು- ಕಾಶ್ಮೀರ ಪ್ರವಾಸದಿಂದ ಮರಳಿದ ಬಳಿಕ ಮಹತ್ತರ ಬೆಳವಣಿಗೆಗಳು ನಡೆಯುತ್ತಿವೆ. ಒಂದೆಡೆ ಕಾಶ್ಮೀರಕ್ಕೆ ಹೆಚ್ಚುವರಿ ಸೈನಿಕರು ರವಾನೆಯಾದ ಬೆನ್ನಲ್ಲೇ ಸೋಮವಾರ ತಡರಾತ್ರಿ ನಿಷೇಧಾಜ್ಞೆ ಜಾರಿಗೊಳಿ ಸಲಾಗಿತ್ತು. ಇಷ್ಟೇ ಅಲ್ಲದೇ ಇಂಟರ್ನೆಟ್ ಕೂಡಾ ಸ್ಥಗಿತಗೊಳಿಸಲಾಗಿತ್ತು. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಕೇಂದ್ರ ಈ ಮಹತ್ತರ ಮಸೂದೆ ಮಂಡಿ ಸಿದೆ. ಈ ಮಸೂದೆ ಮಂಡಿಸುತ್ತಿದ್ದಂತೆಯೇ ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯ ಸಭೆಯಲ್ಲಿ ತೀವ್ರ ಕೋಲಾಹಲ ನಡೆದಿತ್ತು. ಆದರೆ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಿರುವು ದರಿಂದ ಬೆಂಬಲವಿಲ್ಲದೇ ಜಾರಿಯಾಗಲಿದೆ.

ಐತಿಹಾಸಿಕ ನಿರ್ಣಯದಿಂದ ಏನಾಗುತ್ತೆ?: ಸಂವಿಧಾನದ 370ನೇ ವಿಧಿ ರದ್ದುಗೊಳಿಸುವ ಮಸೂದೆಯಿಂದ, ಕಣಿವೆ ರಾಜ್ಯ ಜಮ್ಮು-ಕಾಶ್ಮೀರ ಇನ್ಮುಂದೆ ರಾಜ್ಯವಾಗಿ ಉಳಿಯುವು ದಿಲ್ಲ. ಇದೊಂದು ಕೇಂದ್ರಾಡಳಿತ ಪ್ರದೇಶವಾಗಿ ಗುರುತಿಸಿಕೊಳ್ಳಲಿದೆ. ಜಮ್ಮು-ಕಾಶ್ಮೀರದಿಂದ ಲಡಾಕ್‍ನ್ನು ಪ್ರತ್ಯೇಕಗೊಳಿಸಿ, ಎರಡು ಕೇಂದ್ರಾಡಳಿತ ಪ್ರದೇಶವಾಗಲಿದೆ. ಜಮ್ಮು-ಕಾಶ್ಮೀರ ವಿಧಾನಸಭೆ ಹೊಂದಿರುವ ಪ್ರದೇಶವಾದರೆ, ಲಡಾಕ್ ವಿಧಾನ ಸಭೆ ಇಲ್ಲದ ಕೇಂದ್ರಾಡಳಿತ ಪ್ರದೇಶವಾಗಲಿದೆ.

ಬಿಜೆಪಿ ಭರವಸೆ ಇದು: 2014ರ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ತನ್ನ ಪ್ರಣಾ ಳಿಕೆಯಲ್ಲಿ ವಿಶೇಷ ಸ್ಥಾನಮಾನವನ್ನು ರದ್ದು ಮಾಡುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಘೋಷಿ ಸಿತ್ತು. ಹಾಗಾಗಿ ಅಶಾಂತಿಗೆ ಎಡೆಮಾಡಿಕೊಡ ದಂತೆ ಸೂಕ್ತ ಭದ್ರತೆ ನೀಡಿ, ಈ ಸ್ಥಾನಮಾನ ವನ್ನು ರದ್ದುಪಡಿಸುವುದಾಗಿ ಭರವಸೆ ನೀಡಿತ್ತು ಎಂಬುವುದು ಉಲ್ಲೇಖನೀಯ.

Translate »