ಮೈಸೂರು,ನ.2(ಎಂಟಿವೈ)- ಕೊರೊನಾ ಹರಡುವಿಕೆ ತಡೆಗಟ್ಟಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆಯಾದರೂ, ಮುಂದಿನ ದಿನಗಳಲ್ಲಿ ಕೊರೊನಾ ಸ್ಫೋಟಗೊಳ್ಳುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜನರೇ ಸ್ವಯಂ ಪ್ರೇರಣೆಯಿಂದ ಕೋವಿಡ್-19 ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ. ಮೈಸೂರಲ್ಲಿ ಪತ್ರಕರ್ತರೊಂದಿಗೆ ಮಾತ ನಾಡಿದ ಅವರು, ಈ ಹಿಂದೆ ಮೈಸೂರಲ್ಲಿ ಕೊರೊನಾ ಸಂಪೂರ್ಣ ವಾಗಿ ನಿಯಂತ್ರಣದಲ್ಲಿತ್ತು. ನಂತರ ಸೋಂಕಿತರ ಸಂಖ್ಯೆ ಹೆಚ್ಚಾಗ ತೊಡಗಿತು. ಆದರೆ ಕಳೆದ 1 ತಿಂಗಳಿಂದ ಸೋಂಕಿ ತರ ಸಂಖ್ಯೆ ಕ್ಷೀಣಿಸಿದೆ. ಡಿಸೆಂಬರ್‍ನಲ್ಲಿ ಸೋಂಕಿ ತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಜನತೆ ಸೋಂಕು ಹರಡುವಿಕೆ ತಡೆಗೆ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದರು.
ಜಿಲ್ಲಾ ಗಡಿ, ಪ್ರವಾಸಿ ತಾಣ ಬಂದ್ ಮಾಡಲು ಸಾಧ್ಯವಿಲ್ಲ: ಕೊರೊನಾ ಸೋಂಕು ಹೆಚ್ಚಾಗುವ ಆತಂಕದಿಂದ ಮುಂದಿನ ದಿನಗಳಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳು ಹಾಗೂ ಜಿ¯್ಲÁ ಗಡಿಗಳನ್ನು ಬಂದ್ ಮಾಡುವುದಿಲ್ಲ. ಆದರೆ ಸೋಂಕು ಹರಡುವಿಕೆ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಅದಕ್ಕಾಗಿ ಅರಮನೆ, ಮೃಗಾಲಯಕ್ಕೆ ಬರುವ ಪ್ರವಾಸಿಗರಿಗೆ ಕೋವಿಡ್ ಟೆಸ್ಟ್ ಮಾಡುತ್ತಿz್ದÉೀವೆ. ಇದಕ್ಕೆ ಜನರು ಸಹಕಾರ ಅಗತ್ಯ ಎಂದರು.
ಜಿಲ್ಲೆಯಲ್ಲಿ ಆಕ್ಸಿಜನ್, ಬೆಡ್ ಕೊರತೆ ಇಲ್ಲ. ಮೈಸೂರಿನ ಎಲ್ಲಾ ಆಸ್ಪತ್ರೆಗಳಲ್ಲೂ ಸೂಕ್ತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಎಲ್ಲ್ಲಾ ತಾಲೂಕು ಆಸ್ಪತ್ರೆಗಳಲ್ಲೂ ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಟೆಸ್ಟ್ ಹೆಚ್ಚಳ ಮಾಡಿರುವುದು ಹಾಗೂ ಕೊರೊನಾ ಸೋಂಕಿತರಿಗೆ ತ್ವರಿತಗತಿಯಲ್ಲಿ ಚಿಕಿತ್ಸೆ ನೀಡುತ್ತಿರುವುದರಿಂದ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಜನರು ಪರಸ್ಪರ ಅಂತರ ಕಾಯ್ದು ಕೊಂಡು, ಮಾಸ್ಕ್ ಹಾಕಿಕೊಳ್ಳುವ ಮೂಲಕ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು. ಆಗ ಮಾತ್ರ ಸೋಂಕು ಹರಡುವಿಕೆ ನಿಯಂತ್ರಣ ಸಾಧ್ಯ ಎಂದು ತಿಳಿಸಿದರು.