ಎಸ್ಪಿ ಕಚೇರಿಯಲ್ಲಿ ಮಹಿಳಾ ಪೊಲೀಸ್ ಪೇದೆ ಆತ್ಮಹತ್ಯೆಗೆ ಯತ್ನ!
ಮಂಡ್ಯ

ಎಸ್ಪಿ ಕಚೇರಿಯಲ್ಲಿ ಮಹಿಳಾ ಪೊಲೀಸ್ ಪೇದೆ ಆತ್ಮಹತ್ಯೆಗೆ ಯತ್ನ!

June 30, 2018

ಮಂಡ್ಯ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಮಹಿಳೆ ಯೋರ್ವಳು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಆತ್ಮಹತ್ಯೆ ಯತ್ನ ಪ್ರಕರಣ ಶುಕ್ರವಾರ ನಡೆದಿದೆ.

ಮಹಿಳಾ ಪೊಲೀಸ್ ಪೇದೆ ಕಮಲಮ್ಮ (56) ಎಂಬುವವರೇ ಎಸ್ಪಿ ಕಚೇರಿಯಲ್ಲಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತೀವ್ರವಾಗಿ ಅಸ್ವಸ್ಥರಾಗಿದ್ದ ಪೇದೆ ಕಮಲಮ್ಮ ಅವರನ್ನು ಸಹೋದ್ಯೋಗಿಗಳು ಜಿಲ್ಲಾ ಸ್ಪತ್ರೆಗೆ ದಾಖಲಿಸಿದ್ದಾರೆ.

ಮೊನ್ನೆಯಷ್ಟೆ ಎಸ್ಪಿ ಕಚೇರಿಯಲ್ಲಿ ನ್ಯಾಯಕ್ಕಾಗಿ ಒತ್ತಾಯಿಸಿ ಹೊಳಲಿನ ಮಹಿಳೆ ಯೋರ್ವಳು ಆತ್ಮಹತ್ಯೆಗೆ ಯತ್ನಿಸಿ ದ್ದಳು. ಇದೀಗ ಪೊಲೀಸ್ ಸಿಬ್ಬಂದಿಯೇ ಕಚೇರಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು ಚರ್ಚೆಗೆ ಗ್ರಾಸವಾಗಿದೆ.

ಎಸ್ಪಿ ಪ್ರತಿಕ್ರಿಯೆ: ಆತ್ಮಹತ್ಯೆಗೆ ಯತ್ನಿಸಿದ ಕಮಲಮ್ಮ ವಿರುದ್ಧ ಮೂರು ಕ್ರಿಮಿನಲ್ ಪ್ರಕರಣಗಳಿವೆ. ಸಾಕಷ್ಟು ಭ್ರಷ್ಟಾಚಾರ, ಕರ್ತವ್ಯ ಲೋಪ ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಮಳವಳ್ಳಿ ಉಪವಿಭಾಗಕ್ಕೆ ವರ್ಗ ಮಾಡಲಾಗಿತ್ತು. ವರ್ಗಾವಣೆಯಾಗಿ ಒಂದು ವಾರ ಕಳೆದಿದ್ದರೂ, ಕರ್ತವ್ಯಕ್ಕೆ ಹಾಜರಾಗಿ ರಲಿಲ್ಲ. ಹೀಗಾಗಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಮಾಧ್ಯಮದವರಿಗೆ ತಿಳಿಸಿದ್ದಾರೆ.

ಅಮಾನತು ಮಾಡಿದ ಬಳಿಕ ಇಂದು ನನ್ನನ್ನ ಭೇಟಿಯಾಗಲು ಬಂದಿದ್ದರು. ಭೇಟಿಗೆ ಅವಕಾಶ ನೀಡಿದರೂ ಒಳಗೆ ಬರಲಿಲ್ಲ. ಸಾರ್ವಜನಿಕರ ಗ್ಯಾಲರಿಯಲ್ಲಿ ಕುಳಿತಿ ದ್ದಾಗ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾ ಗಿದೆ. ಪ್ರಕರಣ ಸಂಬಂಧ ತನಿಖೆ ನಡೆಸಲಾಗುವುದು ಎಂದು ಅವರು ತಿಳಿಸಿದರು. ಈ ಸಂಬಂಧ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Translate »