ನಾಳೆ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ
ಹಾಸನ

ನಾಳೆ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

August 4, 2018

ಹಾಸನ: ಬೆಂಗಳೂರು ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಆ. 5ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಸನದ ವಿವಿಧ 7 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು.

ಹಾಸನದ ಮಹಿಳಾ ಪ್ರಥಮ ದರ್ಜೆ ಕಾಲೇಜು, ಎಂ.ಕೃಷ್ಣ ಪದವಿ ಪೂರ್ವ ಕಾಲೇಜು, ಸಿ.ಕೆ.ಎಸ್.ಇಂಗ್ಲೀಷ್ ಪ್ರಾಥಮಿಕ ಶಾಲೆ, ಬಾಲಕಿಯರ ವಿಭಜಿತ ಪದವಿ ಪೂರ್ವ ಕಾಲೇಜು, ಪ್ರಧಾನ ಬಾಲಕಿಯರ ಪದವಿ ಪೂರ್ವ ಕಾಲೇಜು, ಸುಜಲ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಕಲಾ ಕಾಲೇಜಿನಲ್ಲಿ ಪರೀಕ್ಷೆಯು ನಡೆಯಲಿದೆ.

ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಆನ್‍ಲೈನ್‍ನಲ್ಲಿ ಪಡೆದುಕೊಳ್ಳಬೇಕು. ಪರೀಕ್ಷಾ ಕೇಂದ್ರಕ್ಕೆ 90 ನಿಮಿಷ ಮುಂಚಿತವಾಗಿ ಆಗಮಿಸಬೇಕು. ಅಭ್ಯರ್ಥಿಗಳು ಭಾವಚಿತ್ರವಿರುವ ಗುರುತಿನ ದಾಖಲಾತಿಗಳಲ್ಲಿ ಯಾವುದಾದರೊಂದು ಪರಿಶೀಲನೆಗಾಗಿ ತಪ್ಪದೇ ಹಾಜರುಪಡಿಸತಕ್ಕದ್ದು ಎಂದು ಹಾಸನ ಪೊಲೀಸ್ ಅಧೀಕ್ಷಕರು ಹಾಗೂ ಪೊಲೀಸ್ ನೇಮಕಾತಿ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.

Translate »