ವಿಷ ಸೇವಿಸಿ ಯುವಕ ಆತ್ಮಹತ್ಯೆ
ಮೈಸೂರು

ವಿಷ ಸೇವಿಸಿ ಯುವಕ ಆತ್ಮಹತ್ಯೆ

July 4, 2018

ಮೈಸೂರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನೋರ್ವ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.ಮೈಸೂರಿನ ವಿನಾಯಕನಗರ (ಪಡುವಾರಹಳ್ಳಿ)ದಲ್ಲಿರುವ ಅಜ್ಜಿ ಮನೆಯಲ್ಲಿ ಉಳಿದುಕೊಂಡಿದ್ದ ಹೆಚ್.ಡಿ.ಕೋಟೆ ಮೂಲದ ಸತೀಶ್(23) ಮೃತ ಯುವಕ.

ಅಜ್ಜಿ ಮನೆಯಲ್ಲಿ ವಾಸವಿದ್ದ ಸತೀಶ್, ಕೋಳಿ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ. ವಾರದ ಹಿಂದೆ ಮನೆ ಯಲ್ಲೇ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದ. ಕೂಡಲೇ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾನೆ. ಸಾಲ ಮಾಡಿಕೊಂಡಿ ದ್ದ ಸತೀಶ್, ಸರಿಯಾಗಿ ಕೆಲಸಕ್ಕೂ ಹೋಗು ತ್ತಿರಲಿಲ್ಲ. ಇದರಿಂದ ಜಿಗುಪ್ಸೆಗೊಂಡು ವಿಷ ಸೇವಿಸಿದ್ದ ಎಂದು ಪ್ರಕರಣ ದಾಖಲಿಸಿಕೊಂಡಿರುವ ಜಯಲಕ್ಷ್ಮೀಪುರಂ ಠಾಣೆ ಪೊಲೀಸರು ತಿಳಿಸಿದ್ದಾರೆ.

Translate »