ಮಂಕಿಪಾಕ್ಸ್ ಬಗ್ಗೆ ರಾಜ್ಯದಲ್ಲಿ ಕಟ್ಟೆಚ್ಚರ
News

ಮಂಕಿಪಾಕ್ಸ್ ಬಗ್ಗೆ ರಾಜ್ಯದಲ್ಲಿ ಕಟ್ಟೆಚ್ಚರ

June 8, 2022

ಬೆಂಗಳೂರು, ಜೂ. 7(ಕೆಎಂಶಿ)-ವಿಶ್ವದ ಹಲವೆಡೆ ಮಂಕಿಪಾಕ್ಸ್ ಸೋಂಕು ಹರಡು ತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳ ಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮಂಕಿಪಾಕ್ಸ್ ಸೋಂಕು ಹರುಡುತ್ತಿರುವುದನ್ನು ಸೂಕ್ಷ್ಮವಾಗಿ ಪರಿಗಣಿ ಸಿದ್ದು, ಮುನ್ನೆಚ್ಚರಿಕೆ ವಹಿಸಲಾಗಿದೆ. ರಾಜ್ಯದಲ್ಲಿ ರೋಗದ ಮುನ್ಸೂಚನೆ ಕಂಡು ಬಂದ ಕೂಡಲೇ ಸ್ಕ್ರೀನಿಂಗ್ ಮಾಡಲು ಸೂಚಿಸಲಾಗಿದೆ. ಎಲ್ಲಾ ಜಿಲ್ಲೆಗಳ ಆಸ್ಪತ್ರೆಯಲ್ಲಿ ಹಾಸಿಗೆ ಕಾಯ್ದಿರಿಸಲಾಗುವುದು. ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಸೇರಿದಂತೆ ಹಲವಾರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ ಕಣ್ಗಾವಲು ಚಟುವಟಿಕೆಗಳನ್ನು ತೀವ್ರಗೊಳಿಸಲು ನಿರ್ದೇಶನ ನೀಡಿದೆ. ಮಂಕಿಪಾಕ್ಸ್ ಶಂಕಿತ ವರದಿಯಾದಲ್ಲಿ ಮಾರ್ಗಸೂಚಿ ಪಾಲಿಸುವಂತೆ ಸೂಚಿಸಿದೆ. ಶಂಕಿತ ಪ್ರಕರಣ ಕಂಡುಬಂದಾಗ ಅಂತಹ ರೋಗಿಯನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡಲು ಜಿಲ್ಲಾ ಆಸ್ಪತ್ರೆಯಲ್ಲಿ 2 ಹಾಸಿಗೆ ಮೀಸಲಿಡಲು ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಚಿಸಲಾಗಿದೆ. ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಇರುವ ಬೆಂಗಳೂರು ಗ್ರಾಮಾಂತರ ಮತ್ತು ದಕ್ಷಿಣಕನ್ನಡ ಜಿಲ್ಲೆಯ ಡಿಎಸ್‍ಒಗಳು ವಿಮಾನ ನಿಲ್ದಾಣದ ಆರೋಗ್ಯ ಅಧಿಕಾರಿಯೊಂದಿಗೆ ಸಮನ್ವಯ ಸಾಧಿಸಿ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ನಡೆಸಲು ತಿಳಿಸಲಾಗಿದೆ ಎಂದಿದ್ದಾರೆ.

 

 

Translate »