ರಾಗಿ ಖರೀದಿ ಮೇಲಿನ  ನಿರ್ಬಂಧ ತೆರವುಗೊಳಿಸಿ
News

ರಾಗಿ ಖರೀದಿ ಮೇಲಿನ ನಿರ್ಬಂಧ ತೆರವುಗೊಳಿಸಿ

February 21, 2022

ಬೆಂಗಳೂರು, ಫೆ. 20- ರಾಗಿ ಖರೀದಿ ಮೇಲಿನ ನಿರ್ಬಂಧ ತೆರವುಗೊಳಿಸುವಂತೆ ಮನವಿ ಮಾಡಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ರಾಗಿ ಖರೀದಿಯನ್ನು ಎಂಎಸ್‍ಪಿ ದರದಲ್ಲಿ ಹೆಚ್ಚಿಸಲು, ನೋಂದಣಿ ಸಮಯವನ್ನು ವಿಸ್ತರಿಸಲು ಮತ್ತು ರೈತರ ಅನುಕೂಲಕ್ಕಾಗಿ ಖರೀದಿ ಸಲು ಇರುವ ನಿರ್ಬಂಧಗಳನ್ನು ತೆಗೆದುಹಾಕಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಒತ್ತಾಯಿಸಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಇಡೀ ವರ್ಷ ಪದೇ ಪದೆ ಸುರಿದ ಮಳೆಯ ನಡುವೆಯೂ ರಾಗಿ, ಭತ್ತ ಮುಂತಾದ ಬೆಳೆಗಳನ್ನು ಕೊಯಿಲು ಮಾಡಿ ಮಾರುಕಟ್ಟೆಗೆ ತರುತ್ತಿದ್ದಾರೆ. ಸರ್ಕಾರವು ಈ ವರ್ಷ ಜನವರಿ 1ರಿಂದ ರಾಗಿಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಸರ್ಕಾರಗಳು ಈ ರೈತ ರಿಗೆ ಸಬ್ಸಿಡಿಗಳನ್ನೇನೂ ನೀಡುತ್ತಿಲ್ಲ. ಈ ಬೆಳೆಗಳನ್ನು ಬೆಳೆ ಯುವುದರಿಂದ ನಿಸರ್ಗದ ರಕ್ಷಣೆಯೂ ಆಗುತ್ತದೆ. ಔಷಧ, ಕೀಟನಾಶಕ, ರಾಸಾಯನಿಕಗಳಿಲ್ಲದೆ ಬೆಳೆಯುವ ರಾಗಿ, ಜೋಳ ಮುಂತಾದ ಬೆಳೆಗಳು ನಿಸರ್ಗಸ್ನೇಹಿ ಯಾಗಿವೆ. ಹೀಗಾಗಿ ಇವುಗಳನ್ನು ಬೆಳೆಯಲು ಪೆÇ್ರೀತ್ಸಾಹಿಸ ಬೇಕು. ಆದರೆ ರಾಗಿಗೆ ಈಗ ದೊರೆಯುತ್ತಿರುವ ಬೆಲೆಯು ಯಾವುದಕ್ಕೂ ಸಾಲುವುದಿಲ್ಲ. ರಾಗಿಗೆ ನೀಡುತ್ತಿರುವ ಬೆಂಬಲ ಬೆಲೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಒಂದು ಕ್ವಿಂಟಾಲಿಗೆ ಕೇವಲ 82 ರೂಪಾಯಿ ಗಳಷ್ಟು ಮಾತ್ರ ಏರಿಕೆ ಮಾಡಲಾಗಿದೆ. ಡಾ.ಸ್ವಾಮಿನಾಥನ್ ಅವರ ವರದಿಯಲ್ಲಿನ ಸೂತ್ರಗಳನ್ನು ಪೂರ್ತಿಯಾಗಿ ಅಳವಡಿಸಿದರೆ 1 ಕ್ವಿಂಟಾಲ್ ರಾಗಿಗೆ ಈಗ ನಿಗದಿಪಡಿಸಿ ರುವ ಬೆಂಬಲ ಬೆಲೆಯ ಎರಡರಷ್ಟನ್ನು ರೈತರಿಗೆ ನೀಡ ಬೇಕಾಗುತ್ತದೆ. ಆದರೂ ರೈತರು ನಿಗದಿಪಡಿಸಿರುವ ಬೆಂಬಲ ಬೆಲೆಯಾದರೂ ತಮ್ಮ ಬೆಳೆಗಳಿಗೆ ಸಿಗಲಿ ಎಂದು ಆಶಿಸುತ್ತಿದ್ದಾರೆ. ಏಕೆಂದರೆ ಮುಕ್ತ ಮಾರುಕಟ್ಟೆಯಲ್ಲಿ ರಾಗಿಯ ಬೆಲೆ ಪ್ರತಿ ಕ್ವಿಂಟಾಲಿಗೆ 1800 ರೂಪಾಯಿಗಳಿಂದ 2180 ರೂಪಾಯಿ ಗಳಷ್ಟೆ ಇದೆ. ಈ ಬಾರಿ ರಾಜ್ಯದ ರೈತರಿಂದ ಕೇವಲ 2.10 ಲಕ್ಷ ಟನ್ ರಾಗಿಯನ್ನು ಮಾತ್ರ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸೂಚನೆ ನೀಡಿದೆ. ಈ ಸೂಚನೆಯನ್ನು ಆಧ ರಿಸಿ ರಾಜ್ಯದ ಬಿಜೆಪಿ ಸರ್ಕಾರವು ರೈತರಿಂದ ರಾಗಿ ಖರೀ ದಿಸಲು ವಿಪರೀತ ನಿಬಂಧನೆಗಳನ್ನು ವಿಧಿಸಿದೆ. ಅದರಲ್ಲಿ ಸಣ್ಣ ರೈತರಿಂದ ಮಾತ್ರ ಕೇವಲ 20 ಕ್ವಿಂಟಾಲ್ ರಾಗಿ ಯನ್ನು ಮಾತ್ರ ಖರೀದಿ ಮಾಡಲಾಗುವುದೆಂದು ತಿಳಿಸಿ ಆದೇಶ ಹೊರಡಿಸಿದೆ. ಯೂಕಲಿಪ್ಟಸ್ ಬೆಳೆಯನ್ನು ಬೆಳೆ ಯುತ್ತಿದ್ದ ರೈತರು ಕಳೆದ ಎರಡು ವರ್ಷಗಳಿಂದ ಈಚೆಗೆ ತಮ್ಮ ಹೊಲಗಳಲ್ಲಿ ಬೆಳೆದಿದ್ದ ಬೆಳೆಯನ್ನು ತೆಗೆದು ಹಾಕಿ ರಾಗಿ ಬೆಳೆಯಲಾರಂಭಿಸಿದ್ದಾರೆ. ಹಾಗಾಗಿ ಸಹಜ ವಾಗಿಯೇ ರಾಗಿಯ ಉತ್ಪಾದನೆ ಹೆಚ್ಚಾಗಿದೆ.

ಕಳೆದ ವರ್ಷ ಸುಮಾರು 4.7 ಲಕ್ಷ ಟನ್‍ಗಳಷ್ಟು ರಾಗಿ ಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಿದರೆ ಈ ಬಾರಿ ರಾಜ್ಯದಿಂದ ಕೇವಲ 2.10 ಲಕ್ಷ ಟನ್ ರಾಗಿ ಯನ್ನು ಖರೀದಿಸಲು ಮಾತ್ರ ರಾಜ್ಯಕ್ಕೆ ಅನುಮತಿ ನೀಡಲಾ ಗಿದೆ. ರೈತರು 15 ಲಕ್ಷ ಟನ್ ರಾಗಿ ಬೆಳೆದರೆ ಅವರು ತಮ್ಮ ಸ್ವಂತ ಬಳಕೆಗೆ ಶೇ.50ರಷ್ಟನ್ನು ಬಳಸುತ್ತಾರೆಂದರೆ ಉಳಿದದ್ದನ್ನು ಅವರು ಮಾರಲೇಬೇಕು. ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ರೈತರ ಉತ್ಪನ್ನಗಳನ್ನು ಖರೀದಿಸ ದಿದ್ದರೆ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಾರೆ. ಮಾರುಕಟ್ಟೆಯಲ್ಲಿ ಬೆಲೆಗಳು ಬಿದ್ದು ಹೋಗುತ್ತವೆ. ಹೀಗಾದರೆ ರೈತರ ಹಿತಾಸಕ್ತಿಯನ್ನು ಕಾಪಾಡುವುದು ಹೇಗೆ? ರೈತರ ಆದಾಯ ದ್ವಿಗುಣಗೊಳ್ಳುವುದು ಹೇಗೆ? ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮಾಡುವುದನ್ನು ನಿಲ್ಲಿಸಿದೆ. ಮುಕ್ತ ಮಾರುಕಟ್ಟೆಯಲ್ಲಿ ಈಗಾಗಲೆ ರಾಗಿಯ ಬೆಲೆ ಕಡಿಮೆಯಾಗಿ ಈಗ ಕೇವಲ 1800 ರೂ.ಗಳಿಂದ 2180 ರೂವರೆಗೆ ಮಾತ್ರ ಮಾರಾಟವಾಗುತ್ತಿದೆ.

ಇದರಿಂದ ಪ್ರತಿ ಕ್ವಿಂಟಾಲ್‍ಗೆ ರೈತರಿಗೆ ಸರಾಸರಿ 1377 ರೂಗಳಷ್ಟು ನಷ್ಟವಾಗುತ್ತಿದೆ. ಈ ಲೆಕ್ಕದಲ್ಲಿ ನೋಡಿದರೆ ಮಾರುಕಟ್ಟೆಗೆ 8 ಲಕ್ಷ ಟನ್ ರಾಗಿ ಬಂದರೆ 2.1 ಲಕ್ಷ ಟನ್ನನ್ನು ಬೆಂಬಲ ಬೆಲೆಯಡಿ ಖರೀದಿಸಲಾಗುತ್ತಿದೆ. ಉಳಿಕೆ 6 ಟನ್ ರಾಗಿ ಬೆಳೆದ ರೈತರಿಗೆ ಕನಿಷ್ಟ 1000 ಕೋಟಿ ನಷ್ಟವಾಗುತ್ತದೆ. ಆದ್ದರಿಂದ ಈ ಕೂಡಲೆ ರಾಗಿಯನ್ನು ಖರೀದಿಸಲು ವಿಧಿಸಿರುವ ನಿರ್ಬಂಧಗಳನ್ನು ತೆಗೆದು ಹಾಕಬೇಕು. ರೈತರು ಎಷ್ಟು ಕ್ವಿಂಟಾಲ್ ಖರೀದಿ ಕೇಂದ್ರಗಳಿಗೆ ತರುತ್ತಾರೊ ಅಷ್ಟನ್ನೂ ಖರೀದಿಸಬೇಕು. ಇಂದೇ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಕೇವಲ 2.10 ಲಕ್ಷ ಟನ್ ಖರೀದಿಸಲು ವಿಧಿಸಿರುವ ನಿರ್ಬಂಧವನ್ನು ತೆಗೆದು ಹಾಕಬೇಕೆಂದು ಒತ್ತಾಯಿಸಬೇಕು. ಸ್ಥಗಿತಗೊಳಿಸಿರುವ ನೋಂದಣಿ ಕೇಂದ್ರಗಳನ್ನು ಕೂಡಲೆ ಪುನರಾರಂಭಿಸಬೇಕು. ರಾಗಿ, ಭತ್ತ ಮುಂತಾದ ಉತ್ಪನ್ನಗಳಿಗೆ ನಿಗಧಿಗೊಳಿಸಿರುವ ಬೆಲೆಯನ್ನು ಹೆಚ್ಚಿಸಬೇಕೆಂದು ಆಗ್ರಹಿಸುತ್ತೇನೆ ಎಂದು ಪತ್ರ ಬರೆದು ಮನವಿ ಮಾಡಿದ್ದಾರೆ.

Translate »