ಕೋವಿಡ್ ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಗೈರು ಹಾಜರು ಹಿಂದುಳಿದ ವರ್ಗದ ಕಲ್ಯಾಣ ಇಲಾಖೆ ಅಧಿಕಾರಿಗೆ ಡಿಸಿ ನೋಟಿಸ್
ಮೈಸೂರು

ಕೋವಿಡ್ ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಗೈರು ಹಾಜರು ಹಿಂದುಳಿದ ವರ್ಗದ ಕಲ್ಯಾಣ ಇಲಾಖೆ ಅಧಿಕಾರಿಗೆ ಡಿಸಿ ನೋಟಿಸ್

April 28, 2020

ಮೈಸೂರು, ಏ.27(ಪಿಎಂ)- ಮೈಸೂರಿನ ಕೋವಿಡ್ ಆಸ್ಪತ್ರೆಯಲ್ಲಿ ಹೌಸ್ ಕೀಪಿಂಗ್ ಸಂಬಂಧ ಮೇಲ್ವಿಚಾರಣೆಗಾಗಿ ನಿಯೋಜಿಸಿದ್ದರೂ ಕರ್ತವ್ಯ ನಿರ್ವಹಿಸ ದಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೈಸೂರು ಜಿಲ್ಲಾ ಅಧಿಕಾರಿ ಬಿಂದಿಯಾ ಅವರಿಗೆ ಜಿಲ್ಲಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.

ಮೈಸೂರು ನಗರದ ಕೆಆರ್‍ಎಸ್ ರಸ್ತೆಯ ಕೋವಿಡ್ ಆಸ್ಪತ್ರೆಯಲ್ಲಿ ಬೆಡ್, ಹೊದಿಕೆ, ದಿಂಬು ಇತ್ಯಾದಿಗಳನ್ನು ಶುಚಿಗೊಳಿಸುವ ಮತ್ತು ಸರಬರಾಜು ಮಾಡುವ ಕೆಲಸಗಳ ಉಸ್ತುವಾರಿ ತಂಡಕ್ಕೆ ನಿಯೋಜಿಸಿದ್ದರೂ ಅವರು ಕರ್ತವ್ಯಕ್ಕೆ ಹಾಜರಾಗಿಲ್ಲ. ಈ ಬಗ್ಗೆ ನೋಟಿಸ್ ತಲುಪಿದ 24 ಗಂಟೆಯೊಳಗೆ ಲಿಖಿತ ಸಮಜಾಯಿಷಿ ನೀಡುವಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಏ.23ರಂದು ನೋಟಿಸ್ ಜಾರಿ ಮಾಡಿದ್ದಾರೆ.

ಮಾ.30ರಂದು ಒಂದು ದಿನ ಮಾತ್ರ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ, ಕೇವಲ 15 ನಿಮಿಷ ಇದ್ದು, ಈವರೆಗೂ ಆಸ್ಪತ್ರೆಯತ್ತ ಸುಳಿಯದೇ ಇರುವುದು ನೋಡಲ್ ಅಧಿಕಾರಿಗಳಾದ ಮೈಸೂರು ಉಪವಿಭಾಗಾಧಿಕಾರಿಗಳು ನೀಡಿರುವ ವರದಿಯಿಂದ ದೃಢಪಟ್ಟಿದೆ. ಲಿಖಿತ ಸಮಜಾಯಿಷಿ ಸಲ್ಲಿಸದಿದ್ದಲ್ಲಿ ನಿಮ್ಮ ವಿರುದ್ಧ ಕ್ರಮ ಜರುಗಿಸ ಲಾಗುವುದು ಎಂದು ಜಿಲ್ಲಾಧಿಕಾರಿಗಳು ನೋಟಿಸ್‍ನಲ್ಲಿ ಎಚ್ಚರಿಕೆ ನೀಡಿದ್ದಾರೆ.

Translate »