`ನಾಯ್ಡು’ ಪದ ದುರ್ಬಳಕೆ: ಸಂಸದ ಶಿವರಾಮೇಗೌಡ ವಿರುದ್ಧ ಏಕಾಂಗಿ ಪ್ರತಿಭಟನೆ
ಮೈಸೂರು

`ನಾಯ್ಡು’ ಪದ ದುರ್ಬಳಕೆ: ಸಂಸದ ಶಿವರಾಮೇಗೌಡ ವಿರುದ್ಧ ಏಕಾಂಗಿ ಪ್ರತಿಭಟನೆ

April 4, 2019

ಮೈಸೂರು: ಮಂಡ್ಯ ಲೋಕಸಭಾ ಕ್ಷೇತ್ರ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರನ್ನು ಟೀಕಿಸುವ ಸಂದರ್ಭದಲ್ಲಿ ಸಂಸದ, ಜೆಡಿಎಸ್ ಮುಖಂಡ ಎಲ್.ಆರ್.ಶಿವರಾಮೇಗೌಡ ಅವರು ಅನಗತ್ಯವಾಗಿ ನಾಯ್ಡು ಸಮುದಾಯದ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಮೈಸೂರಿನ ದರ್ಶನ್ ಅಭಿಮಾನಿ ಹರೀಶ್ ನಾಯ್ಡು ಬುಧವಾರ ಮೈಸೂರು ಮಹಾ ನಗರಪಾಲಿಕೆ ಎದುರು ಏಕಾಂಗಿ ಪ್ರತಿಭಟನೆ ನಡೆಸಿದರು.

ಶಿವರಾಮೇಗೌಡ ಅವರ ಭಾವಚಿತ್ರ ಹಿಡಿದು, ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಹಿಂದುಳಿದ ನಾಯ್ಡು ಸಮಾಜದ ಬಗ್ಗೆ ಶಿವರಾಮೇಗೌಡರು ಅನಗತ್ಯವಾಗಿ ಟೀಕಿಸುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಯಾವುದೇ ಜಾತಿ, ಮತಗಳ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವಂತಿಲ್ಲ ಎಂಬ ನಿಯಮವಿದ್ದರೂ, ಅನಗತ್ಯವಾಗಿ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಾಯ್ಡು ಸಮಾಜದ ಹೆಸರನ್ನು ದುರ್ಬಳಕೆ ಮಾಡಿರುವ ಶಿವರಾಮೇಗೌಡರು ಕೂಡಲೇ ಕ್ಷಮೆ ಯಾಚಿಸಬೇಕು. ಚುನಾವಣಾ ಆಯೋಗ ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಜೆಡಿಎಸ್ ವರಿಷ್ಠರು ಇವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಆಗ್ರಹಿಸಿದರು.

Translate »