`ಫ್ರೀ ಕಾಶ್ಮೀರ’ ಫಲಕ ಪ್ರದರ್ಶನ ವಿರುದ್ಧ ಮೈಸೂರಲ್ಲಿ ಎಬಿವಿಪಿ ಪ್ರತಿಭಟನೆ

ಮೈಸೂರು,ಜ.10(ಎಂಟಿವೈ)- ಮೈಸೂರು ವಿವಿ ಆವರಣದಲ್ಲಿ `ಫ್ರೀ ಕಾಶ್ಮೀರ’ ಫಲಕ ಪ್ರದ ರ್ಶಿಸಿದವರು ಹಾಗೂ ಪ್ರತಿಭಟನೆ ಆಯೋಜ ಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರ ಹಿಸಿ, ಗನ್‍ಹೌಸ್ ವೃತ್ತದಲ್ಲಿ ಎಬಿವಿಪಿ ನೇತೃತ್ವ ದಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.

ದೆಹಲಿಯ ಜೆಎನ್‍ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಬುಧವಾರ ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಸಂಶೋಧ ಕರ ಸಂಘ, ದಲಿತ ವಿದ್ಯಾರ್ಥಿ ಒಕ್ಕೂಟ, ಬಿವಿಎಸ್ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯ ಕರ್ತರು ನಡೆಸಿದ ಪ್ರತಿಭಟನೆ ವೇಳೆ ಯುವತಿ ಯೊಬ್ಬರು `ಫ್ರೀ ಕಾಶ್ಮೀರ’ ಎಂಬ ಫಲಕ ಪ್ರದ ರ್ಶಿಸಿದ್ದಾರೆ. ಇದರಿಂದ ತನ್ನದೇ ಆದ ಮಹತ್ವ ಹೊಂದಿರುವ ಮೈಸೂರು ವಿಶ್ವವಿದ್ಯಾನಿಲಯ ಪರಿಸರವನ್ನು ದೇಶದ್ರೋಹಿ ಚಟುವಟಿಕೆಗೆ ಬಳಸಿ ಕೊಳ್ಳಲು ಕೆಲವರು ಪ್ರಯತ್ನಿಸುತ್ತಿರುವಂತೆ ಕಾಣು ತ್ತಿದೆ. ಈ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾ ಕಾರರು ಆಗ್ರಹಿಸಿದರು.

ವಿದ್ಯಾರ್ಥಿಗಳ ಸಂಘಟನೆ ನೆಪದಲ್ಲಿ ಕೆಲವರು ರಾಷ್ಟ್ರದ ಶಕ್ತಿಯಾಗಿರುವ ವಿದ್ಯಾರ್ಥಿಗಳನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ದೇಶ ವಿಭಜನೆಯಂತಹ ಕಿಚ್ಚು ಹೊತ್ತಿಸಿ, ವಿದ್ಯಾರ್ಥಿಗಳನ್ನು ದುರ್ಬಳಕೆ ಮಾಡಿ ಕೊಳ್ಳಲಾಗುತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಎಫ್‍ಐಆರ್ ದಾಖ ಲಿಸಿರುವಂತೆ ಸಂಘಟಕರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಪ್ರತಿಭಟನೆ ಸಂಘಟಿಸಿದ ವಿದ್ಯಾರ್ಥಿ ಮುಖಂಡರು ಹಾಗೂ ಪ್ರತಿಭಟನೆ ಯಲ್ಲಿ ದೇಶದ್ರೋಹಿ ಚಟುವಟಿಕೆ ನಡೆಸಿದ ವಿದ್ಯಾರ್ಥಿಗಳನ್ನು ವಿವಿಯಿಂದ ಹೊರಹಾಕ ಬೇಕು ಎಂದು ಒತ್ತಾಯಿಸಿದರು. ಎಬಿವಿಪಿ ಮುಖಂಡರಾದ ರಾಕೇಶ್, ಆದರ್ಶ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.