ವಿದ್ಯಾರ್ಥಿನಿ ಹತ್ಯೆ ಖಂಡಿಸಿ ಎಬಿವಿಪಿ ಪ್ರತಿಭಟನೆ
ಹಾಸನ

ವಿದ್ಯಾರ್ಥಿನಿ ಹತ್ಯೆ ಖಂಡಿಸಿ ಎಬಿವಿಪಿ ಪ್ರತಿಭಟನೆ

August 4, 2018

ಹಾಸನ: ವಿದ್ಯಾರ್ಥಿನಿ ರಕ್ಷಿತಾ ಹತ್ಯೆ ಖಂಡಿಸಿ ನಗರದಲ್ಲಿ ಶುಕ್ರವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು (ಎಬಿವಿಪಿ)ಯಿಂದ ಪ್ರತಿಭಟನೆ ನಡೆಯಿತು.

ಇಲ್ಲಿನ ಹೇಮಾವತಿ ಪ್ರತಿಮೆ ಬಳಿಯಿಂದ ಸಮಾವೇ±ಗೊಂಡ ಎಬಿವಿಪಿ ಕಾರ್ಯಕರ್ತರು ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿನಿಯರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಬಿಜಿಎಸ್ ಶಾಲೆಯ ವಿದ್ಯಾರ್ಥಿನಿ ರಕ್ಷಿತಾ ಶಾಲಾ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಬಳಿಕ ಮನೆಗೆ ವಾಪಸ್ ತೆರಳುತ್ತಿರುವಾಗ ಯುವಕನೋರ್ವ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ನಂತರ ಕೊಲೆ ಮಾಡಿದ್ದಾನೆ. ಈ ಆರೋಪಿಯನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯಗಳು ಹೆಚ್ಚು ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಬೇಕು. ಹೆಣ್ಣು ಮಕ್ಕಳ ರಕ್ಷಣೆಗೆ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಬಳಿಕ, ಹೇಮಾವತಿ ಪ್ರತಿಮೆ ಬಳಿಯಿಂದ ಎನ್.ಆರ್.ವೃತ್ತ ಮೂಲಕ ಜಿಲ್ಲಾಧಿಕಾರಿ ಕಚೇರಿ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಎಬಿವಿಪಿಯ ಜಿಲ್ಲಾ ಸಂಚಾಲಕ ಚೇತನ್, ಕಾರ್ಯಕರ್ತರಾದ ಬೊಮ್ಮೇಗೌಡ, ಲತೇಶ್, ದರ್ಶನ್, ಅಶೋಕ್ ಸೇರಿದಂತೆ ವಿವಿಧ ಕಾಲೇಜು ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

Translate »