ಉಚಿತ ಬಸ್‍ಪಾಸ್‍ಗೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ
ಚಾಮರಾಜನಗರ

ಉಚಿತ ಬಸ್‍ಪಾಸ್‍ಗೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ

June 10, 2018

ರಾಜ್ಯ ಸರ್ಕಾರದ ವಿರುದ್ಧ ಘೋಷಣೆ, ಎಲ್ಲ ಗ್ರಾಮಗಳಿಗೂ ಬಸ್‍ಸೌಲಭ್ಯ ಕಲ್ಪಿಸಲು ಆಗ್ರಹ

ಚಾಮರಾಜನಗರ: ರಾಜ್ಯದ ಎಲ್ಲ ವರ್ಗದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್‍ಪಾಸ್ ನೀಡಬೇಕು ಎಂದು ಆಗ್ರಹಿಸಿ ನಗರದಲ್ಲಿ ಶನಿವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಸೇವಾಭಾರತಿ ಕಾಲೇಜು ಹಾಗೂ ವಿದ್ಯಾವಿಕಾಸ ಸ್ವತಂತ್ರ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಮ್ಮ-ತಮ್ಮ ಕಾಲೇಜಿನಿಂದ ಮೆರವಣ ಗೆ ಆರಂಭಿಸಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದರು. ಬಳಿಕ, ಜಿಲ್ಲಾಡಳಿತ ಭವನಕ್ಕೆ ತೆರಳಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಉಚಿತ ಬಸ್‍ಪಾಸ್ ನೀಡುವಂತೆ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವು ಎಲ್ಲ ಬಡ, ಪ್ರತಿಭಾವಂತ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್‍ಪಾಸ್ ನೀಡಬೇಕು. ಗ್ರಾಮೀಣ ಭಾಗದಿಂದ ನಗರ ಪ್ರದೇಶಗಳಿಗೆ ವಿದ್ಯಾಭ್ಯಾಸಕ್ಕೆ ಬರುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು. ಬಸ್ ಸೌಲಭ್ಯವಿಲ್ಲದ ಗ್ರಾಮಗಳಿಗೆ ಕೂಡಲೇ ಸರ್ಕಾರ ಸಾರಿಗೆ ಸಂಪರ್ಕ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಈ ಹಿಂದೆ ಆಳ್ವಿಕೆ ನಡೆಸಿದ ಕಾಂಗ್ರೆಸ್ ಸರ್ಕಾರ ಎಸ್‍ಸಿ, ಎಸ್‍ಟಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್‍ಪಾಸ್ ನೀಡಿತ್ತು. ಇದರಿಂದ ಲಕ್ಷಾಂತರ ಅನುಕೂಲವಾಗಿತ್ತು. ಆದರೆ, ಈಗಿನ ಮೈತ್ರಿ ಸರ್ಕಾರದ ಪಕ್ಷಗಳು ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ರಾಜ್ಯದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್‍ಪಾಸ್ ನೀಡಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಹಂತ-ಹಂತವಾಗಿ ಹೋರಾಟವನ್ನು ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಕಾರ್ಯಕಾರಿಣ ಸದಸ್ಯ ಎಸ್.ಅಶ್ವಿನ್, ಮುಖಂಡರಾದ ನೂತನ್‍ಸುರೇಶ್, ನವೀನ್, ಅಕ್ಷಯ, ಚರಣ್, ಮಹೇಂದ್ರ, ಪ್ರಮೋದ್, ವರುಣ, ಹೇಮಂತ್, ಚೇತನ್, ಅನಿಲ್, ಮನು, ವಿನೋದ್, ಸಿದ್ದರಾಜು, ವಿವೇಕ್, ರೂಪಾ, ಕೊಮಲ, ಪವಿತ್ರ, ಮನೋಜ್, ಸಿಂಚನ, ಪ್ರಮೋದಿನಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Translate »