ನಾಯಕ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ 
ಮೈಸೂರು

ನಾಯಕ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ 

November 23, 2020

ಮೈಸೂರು, ನ.22(ಆರ್‍ಕೆಬಿ)- ಮೈಸೂರಿನ ಜಿಲ್ಲಾ ನಾಯಕ ಶಿಕ್ಷಕರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಭಾನುವಾರ ಮೈಸೂರಿನ ಜೆಎಲ್‍ಬಿ ರಸ್ತೆಯ ರೋಟರಿ ಸಭಾಂಗಣದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ನಡೆಯಿತು.

ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ಗಳಿಗೆ ಪ್ರತಿಭಾ ಪುರಸ್ಕಾರ ನೀಡಿ  ಅಭಿ ನಂದಿಸಲಾಯಿತು. ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸಮು ದಾಯದ ವಿದ್ಯಾರ್ಥಿಗಳು ಉನ್ನತ ಮಟ್ಟದ ಶಿಕ್ಷಣ ಪಡೆಯಲು ಮುಂದಾಗಬೇಕು. ಅದಕ್ಕೆ ಅಗತ್ಯವಾದ ಎಲ್ಲಾ ರೀತಿಯ ಸಹಕಾರ ವನ್ನು ಸಮಾಜ ನೀಡಬೇಕು ಎಂದರು.

ಇದೇ ಸಂದರ್ಭದಲ್ಲಿ ಐಸಿಎಆರ್, ಜೆಆರ್‍ಎಫ್ ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಪರಿಶಿಷ್ಟ ವರ್ಗದಲ್ಲಿ 3ನೇ ಅತ್ಯುನ್ನತ ಸ್ಥಾನ ಪಡೆದ ನಂಜನಗೂಡು ತಾಲೂಕು ಬೊಕ್ಕಹಳ್ಳಿಯ ಹರ್ಷಿತ ನಾಯಕ ಹಾಗೂ ರಾಜ್ಯ ಪ್ರಸಸ್ತಿ ಪುರಸ್ಕøತ ಚಿತ್ರದುರ್ಗದ ಎಂ.ಡಿ. ಕೋಟೆಯ ದೈಹಿಕ ಶಿಕ್ಷಣ ಶಿಕ್ಷಕ ಚಿದಾ ನಂದಸ್ವಾಮಿ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ನಾಯಕ ಶಿಕ್ಷಕರ ಕ್ಷೇಮಾಭಿವೃದ್ದಿ ಸಂಘದ ಅದ್ಯಕ್ಷ ಪಿ.ನಾಗಲಿಂಗಪ್ಪ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ನಾಯಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ದ್ಯಾವಪ್ಪನಾಯಕ, ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಮಾಲಂಗಿ ಸುರೇಶ್, ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಮೈಸೂರು ಘಟಕದ ಅಧ್ಯಕ್ಷ ದುಂಡಯ್ಯ, ಕೆಎಸ್‍ಓಯು ಮನೋವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಹೆಚ್.ಪಿ.ಮಂಜುನಾಥ್, ವಿಶಾಲಾಕ್ಷಿ ಇನ್ನಿತರರು ಉಪಸ್ಥಿತರಿದ್ದರು.

 

 

Translate »