ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ: ಸಚಿವ ಸಿ.ಎಸ್.ಪುಟ್ಟರಾಜು

ಹನೂರು:  ಯಾವುದೇ ಮುಲಾಜಿಲ್ಲದೇ ಆರೋಪಿ ಯಾವುದೇ ಪಕ್ಷದ ಪ್ರಭಾವಿಯಾಗಿದ್ದರೂ ಆತನನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಾಗುವುದು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು.

ಹನೂರು ಕ್ಷೇತ್ರ ವ್ಯಾಪ್ತಿಯ ಬಿದರಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಸಚಿವರು, ಕುಟುಂಬದವರಿಗೆ ಸಾಂತ್ವನ ಹೇಳಿ ನಂತರ ಪರಿಸ್ಥಿತಿ ಅವಲೋಕನ ಮಾಡಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ತಪ್ಪಿಸ್ಥರ ಯಾರೇ ಆಗಿರಲ್ಲಿ ಯಾವುದೇ ಪಕ್ಷದವರು ಆಗಿರಲಿ ಪ್ರಭಾವಿಗಳು ಆಗಿದ್ದರೂ ಸಹ ಕ್ರಮಕೈಗೊಳ್ಳು ವಂತೆ ಪೆÇಲೀಸ್ ಇಲಾಖೆಗೆ ಆದೇಶ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದರು. ಸಂಜೆಯೊಳಗೆ ಪ್ರಕರಣದ ವರದಿ ಕೈತಲುಪಲಿದೆ. ನಿರ್ದಾಕ್ಷಿಣ್ಯವಾಗಿ ಕ್ರಮವಹಿಸಲಾಗು ವುದು. ಇನ್ನು ಮುಂದೆ ಇಂತಹ ಪ್ರಕರಣಗಳು ಮರು ಕಳಹಿಸದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಸೂಚಿಸಲಾಗಿದೆ. ಈ ವಿಚಾರ ತಿಳಿದ ತಕ್ಷಣ ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಮಂಡ್ಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ 15 ಆಂಬುಲೆನ್ಸ್ ವ್ಯವಸ್ಥೆ ಮಾಡ ಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಸೌಲಭ್ಯ ಗಳನ್ನು ನೀಡಲಾಗಿದೆ ಎಂದರು. ಬಳಿಕ, ಸಚಿವ ಪುಟ್ಟರಾಜು, ಕೊಳ್ಳೇ ಗಾಲ ಶಾಸಕ ಎನ್.ಮಹೇಶ್, ಮುಖಂಡರಾದ ಮಂಜುನಾಥ್ ಅವರು ಕಿಚ್‍ಗುತ್ ಮಾರಮ್ಮ ದೇವಸ್ಥಾನದಲ್ಲಿ ಅಡುಗೆ ತಯಾರಿಸಿದ ಕೊಠಡಿ ಪರಿಶೀಲಿಸಿದರು. ಜೆಡಿಎಸ್ ಮುಖಂಡ ಮಂಜುನಾಥ್ ಅವರು, ಮೃತರ ಕುಟುಂಬಗಳಿಗೆ ತಲಾ 10 ಸಾವಿರ ವೈಯಕ್ತಿಕ ಪರಿಹಾರ ಘೋಷಿಸಿದರು.

ದಕ್ಷಿಣ ವಲಯ ಐಜಿಪಿ ಭೇಟಿ: ಮೈಸೂರು ದಕ್ಷಿಣ ವಲಯ ಐಜಿಪಿ ಶರತ್‍ಚಂದ್ರ ಅವರು ಸುಳವಾಡಿ ಗ್ರಾಮಕ್ಕೆ ಭೇಟಿ ನೀಡಿ ಕಿಚ್‍ಗುತ್ ದೇವಾಲಯದ ಆವರಣ ಹಾಗೂ ಅಡುಗೆ ತಯಾರಿಕೆ ಕೊಠಡಿ ಸೇರಿದಂತೆ ಘಟನೆಗೆ ಸಂಬಂಧಿಸಿದಂತೆ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದರು. ಶಂಕಿತ ಆರೋಪಿಗಳ ಕುರಿತು ಮಾಹಿತಿ ಪಡೆದುಕೊಂಡರು.