ಗುಂಡ್ಲುಪೇಟೆ ಸಮಗ್ರ ಅಭಿವೃದ್ಧಿಗೆ ಕ್ರಮ
ಚಾಮರಾಜನಗರ

ಗುಂಡ್ಲುಪೇಟೆ ಸಮಗ್ರ ಅಭಿವೃದ್ಧಿಗೆ ಕ್ರಮ

September 8, 2018

ಗುಂಡ್ಲುಪೇಟೆ: ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಶಾಸಕ ಸಿ.ಎಸ್. ನಿರಂಜನಕುಮಾರ್ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದ ಮುಂಭಾಗದಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಅಳವಡಿಸಿದ್ದ ಬೀದಿದೀಪಗಳು ಮತ್ತು ಹೈಮಾಸ್ಟ್ ದೀಪಗಳಿಗೆ ನೀಡಿ ಮಾತನಾಡಿ, ಕಳೆದ ಎರಡು ವರ್ಷಗಳಲ್ಲಿಯೇ ಹೆದ್ದಾರಿ ಕಾಮಗಾರಿ ಮುಗಿದಿದ್ದರೂ ಸಹ ತಾಂತ್ರಿಕ ಕಾರಣ ಗಳಿಂದ ಬಳಕೆಗೆ ತರದೆ ಪಟ್ಟಣದ ಹೆದ್ದಾರಿಯು ಕಗ್ಗತ್ತಲಿನಿಂದ ಕೂಡಿತ್ತು. ಇದರಿಂದ ರಾತ್ರಿ ವೇಳೆ ಸಂಚರಿಸುವ ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಎದುರಿಸುತ್ತಿದ್ದರು.

ಪಟ್ಟಣದ ಸಮಗ್ರ ಅಭಿವೃದ್ಧಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದ್ದು, ಹಂತ ಹಂತವಾಗಿ ಪಟ್ಟಣ ಪ್ರಗತಿಯನ್ನು ಮಾಡಿ ರಾಜ್ಯದಲ್ಲಿಯೇ ಮಾದರಿ ಪಟ್ಟಣವನ್ನಾಗಿಸಲಾಗುವುದು. ಪಟ್ಟಣದ ಕುಡಿಯುವ ನೀರಿನ ಯೋಜನೆ, ವಸತಿ ಸೌಲಭ್ಯ, ರಸ್ತೆಗಳ ನಿರ್ಮಾಣ ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಈಗಾಗಲೇ ರೂಪಿಸಿಕೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಕಾರ್ಯರೂಪಕ್ಕೆ ತರಲಾಗುವುದು ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲಾಧ್ಯಕ್ಷ ಎನ್. ಮಲ್ಲೇಶ್, ಪುರಸಭೆ ಅಧ್ಯಕ್ಷ ಪಿ.ಗಿರೀಶ್, ಸದಸ್ಯರಾದ ಮಲ್ಲರಾಜು, ಕುಮಾರ್, ಪ್ರಧಾನ ಕಾರ್ಯದರ್ಶಿ ಶಿವಪ್ರಕಾಶ್, ಯುವ ಮೊರ್ಚಾ ಜಿಲ್ಲಾಧ್ಯಕ್ಷ ಪ್ರಣಯ್, ಸೆಸ್ಕ್ ಎಇಇ ಕೆ.ಎಂ. ಸಿದ್ದಲಿಂಗಪ್ಪ, ತಾಪಂ ಮಾಜಿ ಸದಸ್ಯ ಸಿ.ಮಹದೇವಪ್ರಸಾದ್, ಮುಖಂಡರಾದ ನಾಗೇಶ್, ಕಣ್ಣನ್, ಮಲ್ಲಿಕಾರ್ಜುನ್, ಎಸ್.ಸಿ.ಮಂಜುನಾಥ್, ನೌಷದ್ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಇದ್ದರು.

Translate »