ನಟ ದುನಿಯಾ ವಿಜಯ್ ಸೇರಿ ನಾಲ್ವರಿಗೆ ಷರತ್ತುಬದ್ಧ ಜಾಮೀನು
ಮೈಸೂರು

ನಟ ದುನಿಯಾ ವಿಜಯ್ ಸೇರಿ ನಾಲ್ವರಿಗೆ ಷರತ್ತುಬದ್ಧ ಜಾಮೀನು

October 2, 2018

ಬೆಂಗಳೂರು: ಜಿಮ್ ತರಬೇತುದಾರ ಮಾರುತಿ ಗೌಡ ಎಂಬಾತನನ್ನು ಅಪಹರಿಸಿ ಹಲ್ಲೆ ನಡೆ ಸಿದ ಆರೋಪ ಪ್ರಕರಣ ದಲ್ಲಿ ನಟ ದುನಿಯಾ ವಿಜಯ್ ಸೇರಿ ನಾಲ್ವರಿಗೆ ಬೆಂಗಳೂರಿನ ಸೆಷನ್ಸ್ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಇಂದಿಲ್ಲಿ ಆದೇಶ ನೀಡಿದೆ. ಒಂದು ಲಕ್ಷ ರೂಪಾಯಿ ಬಾಂಡ್, ಇಬ್ಬರ ಶ್ಯೂರಿಟಿ, ತನಿಖೆಗೆ ಸಹಕರಿಸಬೇಕು, ಸಾಕ್ಷಿಗಳಿಗೆ ಬೆದರಿಕೆ ಒಡ್ಡಬಾರದು, ಸಾಕ್ಷ್ಯ ನಾಶಮಾಡಬಾರದು ಎಂಬ ಷರತ್ತು ವಿಧಿಸಿ ನ್ಯಾಯಾಧೀಶರಾದ ಟಿ.ಪಿ. ರಾಮ ಲಿಂಗೇ ಗೌಡರು ಜಾಮೀನು ಮಂಜೂರು ಮಾಡಿ ತೀರ್ಪು ನೀಡಿದರು. ಸೆಲಿಬ್ರಿಟಿಗಳು ಹೇಗೆಂದರೆ ಹಾಗೆ ವರ್ತಿಸುವುದಲ್ಲ. ಹೀರೋ ಬೇರೆಯ ವರಿಗೆ ರೋಲ್ ಮಾಡೆಲ್ ಆಗಿರಬೇಕು. ನಟ ವಿಜಯ್ ಹೀಗೆಲ್ಲಾ ಮಾಡುವುದು ಸರಿಯಲ್ಲ. ಮುಂದೆ ಹೀಗೆ ವರ್ತಿಸಬಾರದು ಎಂದು ದುನಿಯಾ ವಿಜಯ್ ಪರ ವಕೀ ಲರಿಗೆ ನ್ಯಾಯಾಧೀಶರು ಮೌಖಿಕವಾಗಿ ಕಿವಿಮಾತು ಹೇಳಿದ ಪ್ರಸಂಗ ನಡೆಯಿತು.

ಹಲ್ಲೆ ಮತ್ತು ಕಿಡ್ನಾಪ್ ಪ್ರಕರಣದ ಸಂಬಂಧ ಜಾಮೀನು ಕೋರಿ ವಿಜಯ್ ಸೇರಿದಂತೆ ನಾಲ್ವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು 8ನೇ ಎಸಿಎಂಎಂ ನ್ಯಾಯಾಲಯ ವಜಾಗೊಳಿಸಿದ ಹಿನ್ನೆಲೆ ಯಲ್ಲಿ ಸೆಷನ್ಸ್ ಕೋರ್ಟ್ ಮೊರೆ ಹೋಗಿ ದ್ದರು. ಸೆ.27ರಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ಸೆಷನ್ಸ್ ಕೋರ್ಟ್ ವಿಚಾರಣೆ ಮುಂದೂಡಿತ್ತು. ಶನಿವಾರ ವಾದ, ಪ್ರತಿವಾದ ಆಲಿಸಿದ ಬಳಿಕ ಸೆಷನ್ಸ್ ಕೋರ್ಟ್ ನ್ಯಾಯಾಧೀಶರು ಜಾಮೀನು ತೀರ್ಪನ್ನು ಅ.1ಕ್ಕೆ ಕಾಯ್ದಿರಿಸಿದ್ದರು.

Translate »