ನಟಿಯರಾದ ರಾಗಿಣಿ, ಸಂಜನಾ ಜಾಮೀನು ಅರ್ಜಿ ವಜಾ
ಮೈಸೂರು

ನಟಿಯರಾದ ರಾಗಿಣಿ, ಸಂಜನಾ ಜಾಮೀನು ಅರ್ಜಿ ವಜಾ

November 4, 2020

ಬೆಂಗಳೂರು,ನ.3(ಕೆಎಂಶಿ)-ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾ ಗಿರುವ ಚಿತ್ರನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಅವರು ಗಳ ಜಾಮೀನು ಅರ್ಜಿಯನ್ನು ಹೈಕೋರ್ಟ್ ಇಂದು ವಜಾಗೊಳಿ ಸಿದೆ. ಪ್ರಕರಣದ ಆರೋಪಿಗಳಾದ ಸಂಜನಾ, ರಾಗಿಣಿ ದ್ವಿವೇದಿ, ರಾಹುಲ್, ವೀರೇನ್ ಖನ್ನಾ, ಪ್ರಶಾಂತ್, ಅಭಿಸ್ವಾಮಿ ಅವರು ಗಳ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಪರಪ್ಪನ ಅಗ್ರಹಾರದಲ್ಲಿ ಇನ್ನೂ ಕಾಲ ಕಳೆಯಬೇಕಿದೆ. ತಮಗೆ ಜಾಮೀನು ನೀಡಬೇಕೆಂದು ಪ್ರಕರಣದ 6 ಆರೋಪಿಗಳು ಹೈಕೋರ್ಟ್‍ನ ನ್ಯಾಯಮೂರ್ತಿ ಹರೀಶ್‍ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಲಯ ಕಳೆದ 24ರಂದು ತೀರ್ಪನ್ನು ಕಾಯ್ದಿರಿಸಿತ್ತು. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಈ ಆರೋಪಿಗಳ ಅರ್ಜಿಯನ್ನು ವಜಾಗೊಳಿಸಿ ನ್ಯಾಯಮೂರ್ತಿಗಳು ತೀರ್ಪು ಪ್ರಕಟಿಸಿದರು. ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವುದ ರಿಂದ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸುವುದೊಂದೇ ಈಗ ಅವರಿಗಿರುವ ದಾರಿ. ಸುಪ್ರಿಂಕೋರ್ಟ್‍ಗೂ
ಮೇಲ್ಮನವಿ ಅರ್ಜಿ ಹಾಕಿದರೂ ಕನಿಷ್ಠ ಪಕ್ಷ 15 ದಿನಗಳ ಕಾಲ ಪರಪ್ಪನ ಅಗ್ರಹಾರದಲ್ಲೇ ಇರಬೇಕಾಗುತ್ತದೆ. ಆರೋಪಿಗಳಿಗೆ ಯಾವುದೇ ಕಾರಣಕ್ಕೂ ನ್ಯಾಯಾಲಯ ಜಾಮೀನು ನೀಡಬಾರದೆಂದು ಸರ್ಕಾರಿ ಅಭಿಯೋಜಕರು ವಾದ ಮಂಡಿಸಿದ್ದರು. ಪ್ರಕರಣದ ಇನ್ನು ಕೆಲವು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರನ್ನು ಸಹ ವಿಚಾರಣೆಗೊಳಪಡಿಸ ಬೇಕಾಗಿದೆ. ವಿಚಾರಣಾ ಹಂತದಲ್ಲಿ ಜಾಮೀನು ನೀಡಿದರೆ ಸಾಕ್ಷ್ಯಾಧಾರಗಳನ್ನು ನಾಶಪಡಿಸುವ ಸಾಧ್ಯತೆ ಇರುವುದರಿಂದ ಜಾಮೀನು ಅರ್ಜಿಯನ್ನು ವಜಾಗೊಳಿಸಬೇಕೆಂದು ಮನವಿ ಮಾಡಿದ್ದರು.

ಇದಕ್ಕೆ ಆಕ್ಷೇಪಿಸಿದ ಆರೋಪಿಗಳ ಪರ ವಕೀಲರು, ತಮ್ಮ ಕಕ್ಷಿದಾರರು ವಿಚಾರಣೆಗೆ ಎಲ್ಲ ರೀತಿಯ ಸಹಕಾರ ನೀಡುತ್ತಿದ್ದಾರೆ. ವಿಚಾರಣಾಧಿಕಾರಿಗಳು ಕಳೆದ ಸಂದರ್ಭದಲ್ಲಿ ಹಾಜರಾಗಿದ್ದಾರೆ. ಮುಂದೆಯೂ ಕೂಡ ಕರೆದಾಗ ವಿಚಾರಣೆಗೆ ಬರುತ್ತಾರೆ. ನ್ಯಾಯಾಲಯ ಜಾಮೀನು ನೀಡಬೇಕೆಂದು ಕೋರಿದ್ದರು. ಎರಡು ಕಡೆಯವರ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಕಳೆದ 24ರಂದು ವಿಚಾರಣೆ ನಡೆಸಿ ಜಾಮೀನು ಅರ್ಜಿಯ ತೀರ್ಪನ್ನು ಕಾಯ್ದಿರಿಸಿತ್ತು. ಇನ್ನು ನ್ಯಾಯಾಲಯದಿಂದ ತಮಗೆ ಇಂದು ಜಾಮೀನು ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದ ಸಂಜನಾ ಮತ್ತು ರಾಗಿಣಿ ತೀರ್ಪು ಪ್ರಕಟವಾಗುತ್ತಿದ್ದಂತೆ ಕಣ್ಣೀರು ಹಾಕಿದರು ಎಂದು ತಿಳಿದು ಬಂದಿದೆ. ಸ್ಯಾಂಡಲ್‍ವುಡ್‍ನಲ್ಲಿ ಭಾರೀ ಸದ್ದು ಮಾಡಿದ್ದ ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ಸಿಸಿಬಿ ಪೆÇಲೀಸರು ಅನೇಕರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

 

 

Translate »