ಪ್ರಾಥಮಿಕ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ಚಿಂತನೆ
News

ಪ್ರಾಥಮಿಕ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ಚಿಂತನೆ

March 19, 2022

ಬೆಂಗಳೂರು, ಮಾ.18(ಕೆಎಂಶಿ)-ಬಿಜೆಪಿ ಆಡಳಿತ ದಲ್ಲಿರುವ ರಾಜ್ಯ ಸರ್ಕಾರಗಳು ಅನುಷ್ಠಾನಗೊಳಿಸಿ ರುವ ಯೋಜನೆಗಳನ್ನು ಹಂತ-ಹಂತವಾಗಿ ಜಾರಿ ಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಅದರಂತೆ ಪ್ರಾಥಮಿಕ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿ ಸಲು ಮುಂದಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸುದ್ದಿಗಾರರೊಂದಿಗೆ ಪ್ರತ್ಯೇಕ ವಾಗಿ ಮಾತನಾಡಿದ ವೇಳೆ ಇದರ ಸುಳಿವು ನೀಡಿದ್ದಾರೆ.

ಗುಜರಾತ್ ಮಾದರಿಯಲ್ಲಿ ಬರುವ ಶೈಕ್ಷಣಿಕ ವರ್ಷ ದಿಂದಲೇ ರಾಜ್ಯದ ಪ್ರಾಥಮಿಕ ಶಿಕ್ಷಣದ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಸುವ ಬಗ್ಗೆ ಸಿದ್ಧತೆಗಳು ನಡೆದಿವೆ.

ಪಠ್ಯ ಚಟುವಟಿಕೆಗಳಲ್ಲಿ ಭಗವದ್ಗೀತೆ ಅಳವಡಿಸಿ ದರೆ ತಪ್ಪೇನು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಪ್ರಶ್ನಿಸಿದ್ದಾರೆ. ಈಗಾಗಲೇ ಗುಜರಾತ್ ಸರ್ಕಾರ ಪ್ರಾಥಮಿಕ ಶಾಲೆಯ ಪಠ್ಯಗಳಲ್ಲಿ ಭಗವದ್ಗೀತೆ ಯನ್ನು ಅಳವಡಿಸಿದೆ. ನಮ್ಮಲ್ಲೂ ಕೂಡ ಈ ಮಾದರಿ ಯನ್ನು ಅಳವಡಿಸುವ ಕುರಿತು ಮುಖ್ಯಮಂತ್ರಿಯವ ರೊಂದಿಗೆ ಚರ್ಚಿಸಲಾಗುವುದು ಎಂದರು.

ಭಗವದ್ಗೀತೆಯನ್ನು ಪಠ್ಯದಲ್ಲಿ ಸೇರಿಸಬೇಕೆಂಬ ಬೇಡಿಕೆ ಕೇಳಿಬಂದಿದೆ, ಶಿಕ್ಷಣ ತಜ್ಞರು ಇಲಾಖೆಯ ಅಧಿಕಾರಿ ಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳ ಲಾಗುವುದು. ಪಠ್ಯಗಳಲ್ಲಿ ಭಗವÀದ್ಗೀತೆಯನ್ನು ಸೇರಿಸ ಬಾರದೆಂಬ ನಿಯಮ ಎಲ್ಲಿಯೂ ಇಲ್ಲ, ಬೈಬಲ್ ಇರಲಿ, ಕುರಾನ್ ಇರಲಿ ಒಳ್ಳೆಯ ಅಂಶಗಳಿದ್ದರೆ ಅದನ್ನು ಅಳವಡಿಸಿ ಕೊಂಡರೆ ತಪ್ಪೇನು ಇಲ್ಲ ಎಂದು ಸಮರ್ಥಿಸಿಕೊಂಡರು. ಅಲ್ಲದೆ ಇದರಿಂದ ಕೆಲವರಿಗೆ ಮುಜುಗರವಾಗಬಹುದಷ್ಟೇ, ಭಗವÀದ್ಗೀತೆಯಲ್ಲಿ ಅನೇಕ ಒಳ್ಳೆಯ ಅಂಶಗಳಿವೆ, ಇದರಿಂದ ಮಕ್ಕಳಲ್ಲಿ ಜ್ಞಾನಾರ್ಜನೆಗೆ ಸಹಕಾರಿಯಾಗಲಿದೆ ಎಂದರು. ಈ ಸಂಬಂಧ ಪ್ರತ್ಯೇಕವಾಗಿ ಮಾತನಾಡಿದ ಉನ್ನತ ಶಿಕ್ಷಣ ಸಚಿವರು, ಭಗವದ್ಗೀತೆಯನ್ನು ಪಠ್ಯಕ್ರಮದಲ್ಲಿ ಅಳವಡಿ ಸಲು ಶಿಕ್ಷಣ ಮಂಡಳಿಯಲ್ಲಿ ಚರ್ಚೆ ನಡೆಯುತ್ತಿದೆ, ಏನು ಕ್ರಮ ಸಾಧ್ಯವೋ ಅದನ್ನು ಮಾಡುತ್ತೇವೆ. ಪಠ್ಯಕ್ರಮಗಳಲ್ಲಿ ಏನಿರಬೇಕು ಹಾಗೂ ಏನಿರಬಾರದು ಎಂಬ ಬಗ್ಗೆ ಎನ್‍ಸಿಎಆರ್, ಡಿಎಸ್‍ಆರ್‍ಟಿಸಿ ನಿರ್ಧರಿಸುತ್ತದೆ, ಅಂತಹ ಸಂದರ್ಭದಲ್ಲಿ ಈ ವಿಷಯವನ್ನೂ ಗಮನಕ್ಕೆ ತೆಗೆದುಕೊಳ್ಳಲಿದೆ ಎಂದರು. ಕೇವಲ ಪ್ರಾಥಮಿಕ ಶಿಕ್ಷಣಕ್ಕಷ್ಟೇ ಅಲ್ಲದೆ, ವಿಶ್ವವಿದ್ಯಾಲಯ ಮಟ್ಟದಲ್ಲೂ ಭಗವದ್ಗೀತೆ ಅಳವಡಿಕೆ ಸಂಬಂಧ ವಿವಿಗಳು ತೀರ್ಮಾನ ಮಾಡಲಿವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

Translate »