ಶಿಕ್ಷಣದಲ್ಲಿ ಕಲೆ, ಸಾಹಿತ್ಯ, ಕ್ರೀಡೆ ಜೊತೆಗೆ ಯೋಗ ಸೇರ್ಪಡೆಗೆ ಚಿಂತನೆ
ಮೈಸೂರು

ಶಿಕ್ಷಣದಲ್ಲಿ ಕಲೆ, ಸಾಹಿತ್ಯ, ಕ್ರೀಡೆ ಜೊತೆಗೆ ಯೋಗ ಸೇರ್ಪಡೆಗೆ ಚಿಂತನೆ

September 25, 2018

ಮೈಸೂರು:  ಕಾಲೇಜು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲವು ಬದ ಲಾವಣೆಗಳಾಗ ಬೇಕಿದ್ದು, ಆ ನಿಟ್ಟಿನಲ್ಲಿ ಕಲೆ, ಸಾಹಿತ್ಯ, ಕ್ರೀಡೆ ಯನ್ನು ಶಿಕ್ಷಣದಲ್ಲಿ ಅಳವಡಿಸುವ ಅಗತ್ಯವಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿ ವರೂ ಆಗಿರುವ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅಭಿಪ್ರಾಯಪಟ್ಟರು.

ಮೈಸೂರಿನ ಊಟಿ ರಸ್ತೆ ಜೆಎಸ್‍ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇ ಜಿನಲ್ಲಿ ಡಾ.ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಯವರ 103ನೇ ಜಯಂತಿ ಹಾಗೂ ವಿದ್ಯಾರ್ಥಿ ವೇದಿಕೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕಲೆ, ಸಾಹಿತ್ಯ, ಕ್ರೀಡೆಯ ಜೊತೆಗೆ ಯೋಗವನ್ನೂ ಶಿಕ್ಷಣದಲ್ಲಿ ಸೇರ್ಪಡೆ ಮಾಡಬೇಕಾಗಿದೆ ಎಂದರು.

ಇಂದು ಹೆಣ್ಣು ಮಕ್ಕಳು ವಿದ್ಯಾಭ್ಯಾಸಕ್ಕೆ ಹೆಚ್ಚು ಆಸಕ್ತಿ ತೋರಿ ಬರುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಅವರು, ಹೆಣ್ಣು ಮಕ್ಕಳು ತಮ್ಮ ರಕ್ಷಣೆಯನ್ನು ತಾವೇ ಮಾಡಿ ಕೊಳ್ಳುವ ನಿಟ್ಟಿನಲ್ಲಿ ಕರಾಟೆ ಕಲಿಯುವಂತೆ ಕರೆ ನೀಡಿದರು.
ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ ದವರು ಸಾವಿತ್ರಿಬಾಯಿ ಪುಲೆ. ಇವರ ಜನ್ಮ ದಿನಾಚರಣೆಯನ್ನೂ ಆಚರಿಸುವ ಅಗತ್ಯತೆ ಬಗ್ಗೆ ತಿಳಿಸಿದರು.

ಇಂದು ಶಿಕ್ಷಣ ವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಪ್ರಸ್ತಾಪಿಸಿದ ಅವರು, ಹಲವು ವಿಷಯಗಳಲ್ಲಿ ವಿದ್ಯಾರ್ಥಿಗಳೇ ಶಿಕ್ಷಕರಿಗಿಂತ ಮುಂದಿದ್ದಾರೆ. ಇದಕ್ಕಾಗಿ ಶಿಕ್ಷಕರಿಗೆ ತರಬೇತಿ ನೀಡುವ ಕುರಿತು ಆಲೋಚಿಸಲಾಗಿದೆ ಎಂದರು.
ವಿವಿ ಸಿಂಡಿಕೇಟ್‍ಗಳನ್ನು ರಾಜಕೀಯ ದಿಂದ ಹೊರತಾಗಿಡುವ ನಿಟ್ಟಿನಲ್ಲಿ ಸಿಂಡಿ ಕೇಟ್‍ಗಳಲ್ಲಿ ಶಿಕ್ಷಣ ತಜ್ಞರನ್ನಷ್ಟೇ ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದರು.

ನಿವೃತ್ತ ಐಎಎಸ್ ಅಧಿಕಾರಿ ಡಾ.ಸಿ. ಸೋಮಶೇಖರ್ ನುಡಿನಮನ ಸಲ್ಲಿಸಿ ದರು. ದತ್ತಿ ಬಹುಮಾನ, ಅಂತರ ಕಾಲೇಜು ಕ್ರೀಡಾ ಸ್ಪರ್ಧೆ ವಿಜೇತರಿಗೆ ಬಹು ಮಾನ ವಿತರಿಸಲಾಯಿತು. ಜೆಎಸ್‍ಎಸ್ ಮಹಾ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ. ಮಂಜುನಾಥ್, ಮುಖ್ಯ ಕಾರ್ಯ ನಿರ್ವಾ ಹಕ ಪ್ರೊ.ಬಿ.ವಿ.ಸಾಂಬಶಿವಯ್ಯ, ಪ್ರಾಂಶು ಪಾಲ ಪ್ರೊ.ಎಂ.ಮಹದೇವಪ್ಪ, ಪ್ರೊ.ಎಂ. ಕಾರ್ತಿಕ್, ಪ್ರೊ.ಎನ್.ಚಂದ್ರಪ್ಪ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Translate »