ಜಿ.ಮಾದೇಗೌಡ ಆರೋಗ್ಯ ವಿಚಾರಿಸಿದ ಆದಿಚುಂಚನಗಿರಿ ಶ್ರೀ, ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಅಶ್ವತ್ಥ್‍ನಾರಾಯಣ್
ಮಂಡ್ಯ

ಜಿ.ಮಾದೇಗೌಡ ಆರೋಗ್ಯ ವಿಚಾರಿಸಿದ ಆದಿಚುಂಚನಗಿರಿ ಶ್ರೀ, ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಅಶ್ವತ್ಥ್‍ನಾರಾಯಣ್

July 8, 2021

ಭಾರತೀನಗರ, ಜು.7(ಅ.ಸತೀಶ್)- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್, ಮಾಜಿ ಸಚಿವ ಎನ್.ಚೆಲುವರಾಯಸ್ವಾಮಿ, ಶಾಸಕ ಡಿ.ಸಿ.ತಮ್ಮಣ್ಣ ಅವರು ಭಾರತೀನಗರದ ಜಿ.ಮಾದೇಗೌಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಸಂಸದ ಜಿ.ಮಾದೇಗೌಡ ಅವರ ಆರೋಗ್ಯ ವಿಚಾರಿಸಿದರು.

ನಂತರ ಮಾತನಾಡಿದ ಸಿದ್ದರಾಮಯ್ಯ, ಜಿ.ಮಾದೇಗೌಡ ಅವರು ರಾಜಕೀಯ ಜೀವನದಲ್ಲಿ ಜನರಿಗೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಕಾವೇರಿ ವಿಷಯದಲ್ಲಿ ಜೀವನದುದ್ದಕ್ಕೂ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಅವರು ನೇರ, ದಿಟ್ಟ, ದಕ್ಷ, ಖಡಕ್ ರಾಜಕಾರಣಿಯಾಗಿದ್ದರು. ಅವರು ನಿಷ್ಠುರವಾಗಿ ಮಾತನಾಡಿ ದರೂ ಕೂಡ ಅವರ ಹೃದಯವಂತಿಕೆ ದೊಡ್ಡದು ಎಂದು ಬಣ್ಣಿಸಿದರಲ್ಲದೆ, ಬೇಗ ಗುಣಮುಖರಾಗಲಿ ಎಂದು ಆಶಿಸಿದರು.

ನಂತರ ಶಾಸಕ ಡಿ.ಸಿ.ತಮ್ಮಣ್ಣ ಮಾತನಾಡಿ, ಜಿ.ಮಾದೇಗೌಡ ರೈತಪರ ಹೋರಾಟಗಾರರು, ಇಳಿವಯಸ್ಸಿನಲ್ಲೂ ಕೂಡ ಹೋರಾಟ ಮಾಡಿ ಸರ್ಕಾರದ ಗಮನ ಸೆಳೆಯುತ್ತಿದ್ದರು. ಕಳೆದ 2-3 ತಿಂಗಳ ಹಿಂದೆಯೂ ರೈತರ ಹೋರಾಟಗಳಲ್ಲಿ ಭಾಗಿಯಾಗಿ ದ್ದರು. ಶೀಘ್ರ ಗುಣಮುಖರಾಗಿ ಬರಲಿ ಎಂದು ಆಶಿಸಿದರು.

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾ ನಂದನಾಥ ಸ್ವಾಮೀಜಿ ಹಾಗೂ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಕೆ.ಎಂ.ದೊಡ್ಡಿಯ ಜಿ.ಮಾದೇಗೌಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಸಂಸದ ಜಿ.ಮಾದೇಗೌಡರ ಆರೋಗ್ಯ ಕುರಿತು ವೈದ್ಯರಿಂದ ಮಾಹಿತಿ ಪಡೆದರು.

ನಂತರ ಉಪಮುಖ್ಯಮಂತ್ರಿ ಡಾ.ಅಶ್ವಥ್‍ನಾರಾಯಣ್ ಅವರು ಮಾದೇಗೌಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಎಲ್ಲಾ ಕೊಠಡಿ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅಶ್ವಥಿ, ತಹಶೀಲ್ದಾರ್ ವಿಜಯ್ ಕುಮಾರ್, ಡಾ.ಪ್ರಕಾಶ್, ಬಿ.ಎಂ.ನಂಜೇಗೌಡ, ಮಾಜಿ ಶಾಸಕ ನರೇಂದ್ರಸ್ವಾಮಿ, ಮುಖಂಡರಾದ ಎಸ್.ಗುರುಚರಣ್, ಗಣಿಗ ರವಿ, ಡಾ.ಪ್ರಕಾಶ್, ಜಿ.ಪಂ ಮಾಜಿ ಸದಸ್ಯ ಎ.ಎಸ್.ರಾಜೀವ್ ಮತ್ತು ಕಾಂಗ್ರೆಸ್ ಮುಖಂಡರು ಸೇರಿದಂತೆ ಇತರರಿದ್ದರು.

Translate »