ಆದಿಚುಂಚನಗಿರಿ ಶ್ರೀಗಳ ಹುಟ್ಟುಹಬ್ಬ: ಸ್ವಯಂ ರಕ್ತದಾನ
ಮೈಸೂರು

ಆದಿಚುಂಚನಗಿರಿ ಶ್ರೀಗಳ ಹುಟ್ಟುಹಬ್ಬ: ಸ್ವಯಂ ರಕ್ತದಾನ

July 21, 2021

ಮೈಸೂರು, ಜು.20(ಎಸ್‍ಪಿಎನ್)- ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಯವರ ಜನ್ಮದಿನಾಚರಣೆ ಅಂಗವಾಗಿ ಕರ್ನಾ ಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್‍ಕುಮಾರ್‍ಗೌಡ ನೇತೃತ್ವದಲ್ಲಿ ಯುವಕರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಶ್ರೀಗಳ ಜನ್ಮ ದಿನಾಚರಣೆ ಅರ್ಥ ಪೂರ್ಣವಾಗಿ ಮಂಗಳವಾರ ಆಚರಿಸಿದರು.

ಮೈಸೂರು ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವಧಾರ ರಕ್ತನಿಧಿ ಕೇಂದ್ರದ ಆವರಣದಲ್ಲಿ ರಕ್ತದಾನ ಮಾಡಿದ ನಂತರ ಪ್ರಾಧಿಕಾರದ ಅಧ್ಯಕ್ಷ ಹೇಮಂತ್‍ಕುಮಾರ್‍ಗೌಡ ಮಾತನಾಡಿದರು. ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರು ತಮ್ಮ ಜೀವಿತಾವಧಿಯಲ್ಲಿ ಅನ್ನ, ಅಕ್ಷರ, ಆರೋಗ್ಯ, ಆಧ್ಯಾತ್ಮ, ಪರಿಸರ ಮತ್ತು ಗೋವು ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿದ್ದರು. ಇದೀಗ ನಿರ್ಮಲಾ ನಂದನಾಥ ಸ್ವಾಮೀಜಿಯವರು ಅದೇ ಹಾದಿ ಯಲ್ಲಿ ಸಾಗುತ್ತಿದ್ದಾರೆ ಎಂದು ತಿಳಿಸಿದರು.

ಕೋವಿಡ್-19 ಸೋಂಕಿನಿಂದ ಪೋಷಕ ರನ್ನು ಕಳೆದುಕೊಂಡು ಅನಾಥವಾಗಿರುವ ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ಶ್ರೀಗಳು ವಹಿಸಿಕೊಂಡು ಮಾನವೀಯತೆ ಮೆರೆದಿದ್ದಾರೆ. ಕೊರೊನಾ ಸಂಕಷ್ಟ ಸಂದರ್ಭದಲ್ಲಿ ಜಾತಿ ಮತ ನೋಡದೆ ಸರ್ವರಿಗೂ ಸಹಾಯ ಮಾಡುತ್ತಿ ದ್ದಾರೆ ಎಂದು ಕೊಂಡಾಡಿದರು.

ಮೈಸೂರು ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಮಾತನಾಡಿ, ರಕ್ತಕ್ಕೆ ಪರ್ಯಾಯ ಇಲ್ಲ. ಆದ್ದರಿಂದ ಸಾವಿನ ಅಂಚಿನಲ್ಲಿರುವವರ ಜೀವ ಉಳಿಸಬೇಕಾದರೆ ರಕ್ತವೇ ಜೀವ. ಆದ್ದರಿಂದ ಪ್ರತಿಯೊಬ್ಬರೂ ಸ್ವಯಂಪ್ರೇರಿತ ವಾಗಿ ರಕ್ತದಾನ ಮಾಡಲು ಮುಂದೆ ಬರಬೇಕು. 18ರಿಂದ 60 ವರ್ಷ ವಯಸ್ಸಿನ ಆರೋಗ್ಯವಂತ ಪುರುಷರು ಹಾಗೂ ಮಹಿಳೆಯರು ರಕ್ತದಾನ ಮಾಡು ವುದನ್ನು ರೂಢಿಸಿಕೊಳ್ಳಬೇಕು ಎಂದರು.

ಒಂದು ಯೂನಿಟ್ ರಕ್ತದಿಂದ ನಾಲ್ಕು ಜನರ ಪ್ರಾಣ ಉಳಿಸಬಹುದು ಎಂದು ತಜ್ಞರು ಅಭಿ ಪ್ರಾಯಪಟ್ಟಿದ್ದಾರೆ. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಯುವಜನರು ಉತ್ಸಾಹದಿಂದ ರಕ್ತದಾನ ಮಾಡಲು ಮುಂದೆ ಬರಬೇಕು ಎಂದು ಅಭಿಪ್ರಾಯಪಟ್ಟರು. ಈ ವೇಳೆ ಕೆಂಪೇಗೌಡ ಸಹಕಾರಿ ಬ್ಯಾಂಕ್ ಅಧ್ಯಕ್ಷ ಗಂಗಾಧರ್, ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಒಕ್ಕಲಿಗರ ಯುವ ಶಕ್ತಿ ವೇದಿಕೆ ಅಧ್ಯಕ್ಷÀ ಪ್ರಮೋದ್‍ಗೌಡ, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಕೇಬಲ್ ಮಹೇಶ್, ನರಸಿಂಹ ರಾಜ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಲೋಹಿತ್, ನವೀನ್, ಪ್ರಶಾಂತ್, ಉಮೇಶ್, ಶ್ರೀನಿವಾಸ್, ಉಲ್ಲಾಸ್, ಜೀವನ್, ಶಂಭು ಪಾಟೀಲ ಹಾಗೂ ಇನ್ನಿತರರು ಹಾಜರಿದ್ದರು.

Translate »