ಆಡಳಿತ ವೈಫಲ್ಯ: ಉಸ್ತುವಾರಿ ಸಚಿವ, ಸಂಸದ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ
ಮೈಸೂರು

ಆಡಳಿತ ವೈಫಲ್ಯ: ಉಸ್ತುವಾರಿ ಸಚಿವ, ಸಂಸದ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

June 6, 2021

ಮೈಸೂರು, ಜೂ.5(ಎಂಕೆ)- ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತ ವೈಫಲ್ಯ, ಅಧಿಕಾರಿಗಳ ಜಟಾಪಟಿ, ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣದಲ್ಲಿ ವಿಫಲ ರಾದ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಸಂಸದ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಮೈಸೂರು ನಗರ ಮತ್ತು ಗ್ರಾಮಾಂತರ ವಿಭಾಗದಿಂದ ಶನಿ ವಾರ ಮೌನ ಪ್ರತಿಭಟನೆ ನಡೆಸಲಾಯಿತು.

ನಗರದ ಜೆಎಲ್‍ಬಿ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು, ಕೇಂದ್ರ ಮತ್ತು ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಸಂಸದರ ವಿರುದ್ಧ ಭಿತ್ತಿಪತ್ರಗಳನ್ನು ಪ್ರದ ರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ವಿಫಲರಾಗಿ ರುವ ಸಚಿವ ಮತ್ತು ಸಂಸದರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರ ಹಿಸಿದರು. ಜಿಲ್ಲಾಧ್ಯಕ್ಷ ಬಿ.ಜೆ.ವಿಜಯ್‍ಕುಮಾರ್ ಮಾತನಾಡಿ, ಡಿಸಿ ರೋಹಿಣಿ ಸಿಂಧೂರಿ ಮತ್ತು ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವೆ ನಿತ್ಯ ಜಗಳವಾಗುತ್ತಿದೆ. ಇದರಿಂದ ಕೊರೊನಾ ಸೋಂಕು ನಿಯಂತ್ರಣ ಮಾಡಲು ಸಾಧ್ಯವಾಗುತ್ತಿಲ್ಲ. ಜಿಲ್ಲೆಯ ಆಡಳಿತ ನೋಡಿ ಕೊಳ್ಳಬೇಕಾದ ಉಸ್ತುವಾರಿ ಸಚಿವರು ಮತ್ತು ಸಂಸದರು ತಮ್ಮ ಜವಾಬ್ದಾರಿ ನಿರ್ವ ಹಿಸುವಲ್ಲಿಯೂ ವಿಫಲರಾಗಿದ್ದು ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾ ಯಿಸಿದರು. ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣ ಜವಾಬ್ದಾರಿಯನ್ನು ರಾಜ್ಯದ ಮುಖ್ಯ ಕಾರ್ಯದರ್ಶಿಗಳೇ ನೋಡಿ ಕೊಳ್ಳಲಿ. ಇಲ್ಲವೇ ಉತ್ತಮವಾಗಿ ಕೆಲಸ ಮಾಡುವ ಅಧಿಕಾರಿಗಳನ್ನು ನೇಮಿಸಲಿ ಎಂದರು. ಮಾಜಿ ಶಾಸಕ ವಾಸು, ನಗರಾ ಧ್ಯಕ್ಷ ಆರ್.ಮೂರ್ತಿ ಇನ್ನಿತರರಿದ್ದರು.

Translate »