ಹಿರಿಯ ರಾಜಕೀಯ  ಮುತ್ಸದ್ದಿ ಜಿ.ಮಾದೇಗೌಡ ಆಸ್ಪತ್ರೆಗೆ ದಾಖಲು
ಮಂಡ್ಯ

ಹಿರಿಯ ರಾಜಕೀಯ ಮುತ್ಸದ್ದಿ ಜಿ.ಮಾದೇಗೌಡ ಆಸ್ಪತ್ರೆಗೆ ದಾಖಲು

July 5, 2021

ಭಾರತಿನಗರ,ಜು.4(ಅ.ಸತೀಶ್)-ಹಿರಿಯ ರಾಜ ಕೀಯ ಮುತ್ಸದ್ದಿ, ರೈತ ಹೋರಾಟಗಾರ, ಮಾಜಿ ಸಂಸದ ಜಿ.ಮಾದೇಗೌಡರು ಅನಾರೋಗ್ಯದಿಂದ ಬೆಂಗ ಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

94 ವರ್ಷದ ಹಿರಿಯರಾದ ಅವರು, ಶ್ವಾಸಕೋಶ ತೊಂದರೆ ಯಿಂದ ಕಳೆದ 15 ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರನ್ನು ನಾಳೆ (ಜು.5) ಬೆಂಗಳೂರಿನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿಕೊಂಡು ಭಾರತಿನಗರದಲ್ಲಿರುವ ಜಿ. ಮಾದೇಗೌಡ ಮಲ್ಪಿಸ್ಪೆಷಾಲಿಟಿ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅವರ ಪುತ್ರ, ಎಂಎಲ್‍ಸಿ ಮಧು ಮಾದೇಗೌಡ ಮಾಧ್ಯಮಗಳಿಗೆ ತಿಳಿಸಿದರು.

ಮಾದೇಗೌಡರು ಮಂಡ್ಯ ಜಿಲ್ಲೆಯ ಹಿರಿಯ ರಾಜಕಾರಣಿಯಾಗಿದ್ದು, ರೈತ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಕಾವೇರಿ ಹೋರಾಟದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕಿರು ಗಾವಲು ವಿಧಾನಸಭಾ ಕ್ಷೇತ್ರದಿಂದ 3 ಬಾರಿ ಶಾಸಕ ರಾಗಿ ಆಯ್ಕೆಯಾಗಿದ್ದರು. 1989 ಹಾಗೂ 1991ರಲ್ಲಿ ಮಂಡ್ಯ ಸಂಸದರಾಗಿ ಆಯ್ಕೆಯಾಗಿದ್ದರು. ಬೆಂಗ ಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಿ.ಮಾದೇಗೌಡ ರನ್ನು ಮಾಜಿ ಸಿಎಂ ಎಸ್.ಎಂ.ಕೃಷ್ಣ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ತಮ್ಮ ಬಹುಕಾಲದ ಒಡ ನಾಡಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.

Translate »