ಚಾಮರಾಜನಗರ: ಪ್ರತಿ ಯೊಬ್ಬ ವಾಹನ ಸವಾರರು ಹೆಲ್ಮೇಟ್ ಅನ್ನು ಕಡ್ಡಾಯವಾಗಿ ಬಳಸಬೇಕು ಎಂದು ಸಂಚಾರಿ ಪೊಲೀಸ್ ಠಾಣೆಯ ಎಎಸ್‍ಐ ಪಿ.ಕೆ.ವೆಂಕಟೇಶ್ ಸಲಹೆ ನೀಡಿದರು.
ನಗರದಲ್ಲಿ ಶನಿವಾರ ಜೆಎಸ್‍ಎಸ್ ಶಿಕ್ಷಣ ಮಹಾವಿದ್ಯಾಲಯ, ಜೆಎಸ್‍ಎಸ್ ಸ್ಕೂಲ್ ಆಫ್ ನರ್ಸಿಂಗ್ ಹಾಗೂ ಪಟ್ಟಣ ಸಂಚಾರಿ ಪೊಲೀಸ್ ಠಾಣೆಯಿಂದ ಹಮ್ಮಿ ಕೊಂಡಿದ್ದ 29ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಸಮರಾಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದ್ವಿಚಕ್ರ ವಾಹನ ಚಾಲನೆ ಮಾಡುವ ಸಂದರ್ಭದಲ್ಲಿ ಪ್ರತಿಯೊಬ್ಬರು ಕಡ್ಡಾಯ ವಾಗಿ ಚಾಲನಾ ಪರವಾನಗಿ ಪಡೆದು, ರಸ್ತೆಯ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಚಾಲನೆ ಮಾಡಬೇಕು ಎಂದು ತಿಳಿಸಿದರು.
ಸಂಚಾರಿ ಪೊಲೀಸ್ ಕಾನ್‍ಸ್ಟೇಬಲ್ ಎಸ್. ಮಂಜು ಮಾತನಾಡಿ, ರಸ್ತೆಯಲ್ಲಿ ಸಂಚ ರಿಸುವಾಗ ಮೊಬೈಲ್ ಬಳಸಬಾರದು. ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ರಸ್ತೆಯಲ್ಲಿ ಆಕಸ್ಮಿಕವಾಗಿ ಅಪಘಾತವಾದರೇ ಕೂಡಲೇ 108 ಅಂಬ್ಯೂ ಲೆನ್ಸ್ ಹಾಗೂ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಸಲಹೆ ನೀಡಿದರು.
ಈ ವೇಳೆ ವಿದ್ಯಾರ್ಥಿಗಳಿಗೆ ಸಾಕ್ಷ್ಯ ಚಿತ್ರಗಳ ಮೂಲಕ ಮಾಹಿತಿ ನೀಡಲಾ ಯಿತು. ಕಾರ್ಯಕ್ರಮದಲ್ಲಿ ಜೆಎಸ್‍ಎಸ್ ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ಎಸ್.ಎನ್.ರಾಜು, ಜೆಎಸ್‍ಎಸ್ ಸ್ಕೂಲ್ ಆಫ್ ನರ್ಸಿಂಗ್‍ನ ಪ್ರಾಂಶುಪಾಲ ಜಿ.ವಿನಯ್ ಕುಮಾರ್, ಕಾನ್‍ಸ್ಟೇಬಲ್‍ಗಳಾದ ಎಂ. ಕುಮಾರ, ಪ್ರದೀಪ್, ಉಪನ್ಯಾಸಕರಾದ ಯೋಗೇಶ್, ಮಧು ಹಾಜರಿದ್ದರು.