ವಿದ್ಯಾರ್ಥಿಗಳಿಗೆ ವಿಜ್ಞಾನದ ಆಸಕ್ತಿ ಬೆಳೆಸಿಕೊಳ್ಳಲು ಸಲಹೆ

ಚಾಮರಾಜನಗರ: ವಿದ್ಯಾರ್ಥಿ ಗಳು ಮೂಲ ವಿಜ್ಞಾನದ ಬಗ್ಗೆ ಹೆಚ್ಚಿನ ಆಸಕ್ತಿ ಬೆಳಸಿಕೊಳ್ಳಬೇಕು ಎಂದು ಮೈಸೂರಿನ ಜೆಎಸ್‍ಎಸ್ ವೈದ್ಯಕೀಯ ಕಾಲೇಜಿನ ಅಂಗ ರಚನ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಎನ್.ಎಂ.ಶ್ಯಾಮ್‍ಸುಂದರ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಗ್ರ್ಯಾವಿಟಿ ಸೈನ್ಸ್ ಫೌಂಡೇಶ್‍ನಿಂದ ವಿದ್ಯಾರ್ಥಿಗಳಿಗಾಗಿ ಏರ್ಪ ಡಿಸಿದ್ದ ಒಂದು ದಿನದ ಆರೋಗ್ಯ ವಿಜ್ಞಾನ ವಿಶೇಷ ಉಪನ್ಯಾಸಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇಂದು ಪ್ರತಿಯೊಂದು ಕ್ಷೇತ್ರದಲ್ಲೂ ವಿಜ್ಞಾನ ಬಹಳ ಮುಖ್ಯವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ವಿಜ್ಞಾನವನ್ನು ಕಲಿತಾಗ ದೇಶಕ್ಕೆ ತಂತ್ರಜ್ಞಾನ ವಿಭಾಗದಲ್ಲಿ ಕೊಡುಗೆ ನೀಡಬಹುದು. ಭಾರತೀಯ ವಿಜ್ಞಾನಿಗಳು ಇಡೀ ವಿಶ್ವದಲ್ಲೇ ಹೆಸರುವಾಸಿಯಾಗಿದ್ದಾರೆ. ಭಾರತೀಯ ವಿಜ್ಞಾನಿಗಳು ಇತ್ತೀಚೆÀಗೆ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಸಂಶೋ ಧನೆಗಳನ್ನು ಮಾಡಿ ಇತರೆ ರಾಷ್ಟ್ರಗಳು ನಿಬ್ಬೆರಗಿಸುವಂತೆ ಮಾಡಿದ್ದಾರೆ ಎಂದರು.
ಬಳಿಕ, ಮಾನವ ಮತ್ತು ಪ್ರಾಣಿಗಳ ಅಂಗ ಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾ ಧಿಕಾರಿ ಎಂ.ಬಿ.ಪದ್ಮಶೇಖರ್ ಪಾಂಡ್ಯ ಮಾತನಾಡಿ, ಈ ರೀತಿಯ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸುವುದರೊಂದಿಗೆ ಹೊಸ ಹೊಸ ರೀತಿಯ ಕಲಿಕೆಗೆ ಸಹಕಾರಿಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಎಸ್ ಪ್ರಕಾಶ್, ಗ್ರ್ಯಾವಿಟಿ ಸಂಸ್ಥೆಯ ಕಾರ್ಯ ದರ್ಶಿ ಎ.ಎಸ್.ಅಭಿಷೇಕ್ ಮಾತನಾಡಿ ದರು. ನಂತರ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅಂಗರಚನಾದ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಭವಾನಿ ಶಂಕರ್, ಖಜಾಂಚಿ ಪುಷ್ಕಲ ಮುರುಳಿ ನಿರ್ದೇಶಕರಾದ ಗಾಯಿತ್ರಿ, ಮಹೇಶ್, ಸೋಮರಾಜು, ನಾಗೇಂದ್ರ ಮೂರ್ತಿ, ವಿವಿಧ ಶಾಲೆಯ ಶಿಕ್ಷಕರು, ವಿದ್ಯಾರ್ಥಿ ಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.