ಬೆಂಗಳೂರು ಲಾಕ್‍ಡೌನ್‍ಗೆ ಸಲಹೆ
News

ಬೆಂಗಳೂರು ಲಾಕ್‍ಡೌನ್‍ಗೆ ಸಲಹೆ

April 12, 2021

ಬೆಂಗಳೂರು,ಏ.11-ರಾಜ್ಯದಲ್ಲಿ ಎರಡನೇ ಅಲೆಯ ಕೊರೊನಾ ಸ್ಫೋಟಗೊಂಡಿದ್ದು, ಭಾನುವಾರ ಒಂದೇ ದಿನ 10,250 ಪ್ರಕರಣ ದಾಖಲಾಗಿ, 40 ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆ ಯಲ್ಲಿ ಆರೋಗ್ಯ ಖಾತೆ ಸಚಿವ ಡಾ.ಕೆ.ಸುಧಾಕರ್ ಅವರು ವಿಧಾನ ಸೌಧದಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಒಂದೇ ದಿನ 7584 ಮಂದಿಗೆ ಸೋಂಕು ದೃಢ ಪಟ್ಟಿದ್ದು ಆತಂಕಕ್ಕೆ ಕಾರಣವಾಗಿದೆ. ತಾಂತ್ರಿಕ ಸಲಹಾ ಸಮಿತಿಯು ಬೆಂಗಳೂರಿನಲ್ಲಿ 10 ದಿನಗಳ ಕಾಲ ಲಾಕ್‍ಡೌನ್ ಜಾರಿಗೊಳಿಸುವಂತೆ ಸಲಹೆ ನೀಡಿದೆ ಎನ್ನಲಾಗಿದೆ. ಅಲ್ಲದೇ ಮೇ ಮೊದಲ ವಾರದಲ್ಲಿ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಾಂತ್ರಿಕ ಸಲಹಾ ಸಮಿತಿಯು ಎಚ್ಚರಿಕೆ ನೀಡಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಸಭೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಆರೋಗ್ಯ ಸಚಿವ ಡಾ. ಕೆ.ಸುಧಾಕರ್, ತಾಂತ್ರಿಕ ಸಲಹಾ ಸಮಿತಿಯು ಲಾಕ್‍ಡೌನ್‍ಗೆ ಸಲಹೆ ನೀಡಿರುವುದನ್ನು ದೃಢಪಡಿಸಿದರು. ಆದರೆ ತಜ್ಞರ ಅಭಿಪ್ರಾಯವನ್ನು ವರದಿ ರೂಪದಲ್ಲಿ ನೀಡುವಂತೆ ಕೇಳಿದ್ದು, ವರದಿ ಬಂದ ಬಳಿಕ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೇಳಿದ ಅವರು, ಅಧಿಕೃತ ವರದಿ ಬರುವವರೆಗೂ ತಾವು ಏನನ್ನಾದರೂ ಹೇಳಿದರೆ, ಅದು ತಪ್ಪಾಗುತ್ತದೆ ಎಂದರು.

ಮೇ ಮೊದಲ ವಾರದಲ್ಲಿ ರಾಜ್ಯದಲ್ಲಿ ಕೊರೊನಾ ಪ್ರಕ ರಣಗಳು ಹೆಚ್ಚಾಗಲಿದ್ದು, ಮೇ ಅಂತ್ಯದಲ್ಲಿ ಕಡಿಮೆ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದಾಗಿ ಅವರು ತಿಳಿಸಿ ದರು. ಪ್ರಕರಣಗಳು ಹೆಚ್ಚಾಗಲಿರುವ ಮುನ್ಸೂಚನೆ ದೊರೆತಿ ರುವುದರಿಂದ ಗಡಿ ಜಿಲ್ಲೆಗಳಲ್ಲಿ ಪ್ರಯಾಣಿಕರನ್ನು ಪರೀಕ್ಷಿಸುವ ಹಾಗೂ ಪರೀಕ್ಷಾ ವರದಿ ಪರಿಶೀಲಿಸುವ ಕ್ರಮ ಕೈಗೊಳ್ಳು ವಂತೆ ತಜ್ಞರು ಸಲಹೆ ನೀಡಿದ್ದಾರೆ.
ಅದನ್ನು ಕಾರ್ಯರೂಪಕ್ಕೆ ತರಲಾಗುವುದು. ಖಾಸಗಿ ಆಸ್ಪತ್ರೆಗಳು ಸರ್ಕಾರದ ಜೊತೆ ಸೇರಿ ಕೆಲಸ ಮಾಡುತ್ತಿವೆ. ಸರ್ಕಾರವು ಟೆಲಿ ಐಸಿಯು ವ್ಯವಸ್ಥೆಯನ್ನು ಆರಂಭಿಸಿದ್ದು, ಖಾಸಗಿ ಆಸ್ಪತ್ರೆಗಳು ಉಚಿತವಾಗಿ ಈ ಸೇವೆ ನೀಡುತ್ತಿವೆ. ಇದನ್ನು ಇನ್ನಷ್ಟು ಗಟ್ಟಿಗೊಳಿಸಬೇಕಿದೆ ಎಂದರು. ಅನ್ಯ ರಾಜ್ಯದಿಂದ ಬರುವವರ ಕೋವಿಡ್-19 ನೆಗೆಟಿವ್ ರಿಪೋರ್ಟ್ ನೋಡಿಯೇ ರಾಜ್ಯದೊಳಗೆ ಪ್ರವೇಶ ನೀಡುವಂತೆ ತಜ್ಞರು ಸಲಹೆ ನೀಡಿದ್ದಾರೆ. ಸಾರ್ವಜನಿಕರು ಗುಂಪು ಸೇರುವ ಹಾಗೂ ಅನಾವಶ್ಯಕವಾದ ಕಾರ್ಯಕ್ರಮಗಳನ್ನು ಆಯೋಜಿಸುವುದಕ್ಕೆ ಬ್ರೇಕ್ ಹಾಕುವಂತೆಯೂ ಸಲಹೆ ನೀಡಿದ್ದು, ಎಲ್ಲವನ್ನೂ ಕಾರ್ಯರೂಪಕ್ಕೆ ತರಲಾಗುವುದು ಎಂದರು.

Translate »