ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲು ಸಲಹೆ
ಹಾಸನ

ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲು ಸಲಹೆ

August 10, 2018

ಹಾಸನ:  ‘ಶಿಕ್ಷಣ ಜೀವನದ ಪ್ರಮುಖ ಘಟ್ಟವಾಗಿದ್ದು, ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು’ ಎಂದು ಶಾಸಕ ಪ್ರೀತಮ್ ಜೆ.ಗೌಡ ಸಲಹೆ ನೀಡಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನ ದಲ್ಲಿ ಗುರುವಾರ ಜ್ಞಾನಧಾರೆ ಶಿಕ್ಷಣ ಸಂಸ್ಥೆ ಯಿಂದ ನಡೆದ 2018-19ನೇ ಸಾಲಿನ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು, ಈ ಸಂದರ್ಭದಲ್ಲಿ ಹಲವು ಕೆಟ್ಟ ಆಲೋ ಚನೆಗಳು ಮನಸಿನಲ್ಲಿ ಮೂಡುವುದು ಸಹಜ. ಆದರೆ, ಇದಕ್ಕೆ ವಿದ್ಯಾರ್ಥಿಗಳು ತಲೆಕೆಡಿಸಿಕೊಳ್ಳಬಾರದು. ಶಿಕ್ಷಣದ ಕಡೆಗೆ ಹೆಚ್ಚಿನ ಗಮನಹರಿಸಿ ವಿದ್ಯಾಸಂಸ್ಥೆಗೆ, ಪೋಷಕ ರಿಗೆ ಹಾಗೂ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಸಲಹೆ ನೀಡಿದರು.

ಅಂಕ ಅಥವಾ ಅತ್ಯುತ್ತಮ ಸ್ಥಾನ ಪಡೆಯು ವುದು ಮುಖ್ಯವಲ್ಲ. ಉತ್ತಮ ಸಂಸ್ಕಾರ ಹಾಗೂ ನಡವಳಿಕೆಗಳನ್ನು ವಿದ್ಯಾರ್ಥಿ ದೆಸೆಯಿಂದಲೇ ಮೈಗೂಡಿಸಿಕೊಳ್ಳಬೇಕು. ಆಗ ಮಾತ್ರ ಭವಿಷ್ಯದಲ್ಲಿ ಉತ್ತಮ ಬದುಕು ರೂಪಿಸಿಕೊಳ್ಳಲು ಸಾಧ್ಯ ಎಂದು ತಿಳಿಸಿದರು.

ವಿಶ್ವ ಮಟ್ಟದಲ್ಲಿ ಭಾರತಕ್ಕೆ ತನ್ನದೇ ಯಾದ ಗೌರವವಿದೆ ಎಂದ ಅವರು, ವಿದ್ಯಾರ್ಥಿಗಳು ತಮ್ಮ ದೈನಂದಿನ ಜೀವನದ ಕೆಲ ಸಮಯವನ್ನು ಸಮಾಜ ಸೇವೆಗೆ ಮುಡಿಪಾಗಿಡಬೇಕು ಎಂದರು.

ಜ್ಞಾನಧಾರೆ ಕಾಲೇಜಿನ ಜವರೇಗೌಡ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕಾದರೇ ಮೊದಲು ಗುರು-ಹಿರಿಯರನ್ನು ಗೌರವಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು. ಶಿಕ್ಷಣದ ಕಡೆ ಹೆಚ್ಚಿನ ಗಮನ ನೀಡಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಲಯನ್ಸ್ ಸೇವಾ ಸಂಸ್ಥೆ ಸದಸ್ಯ ಚಂದ್ರೇಗೌಡ, ಸಂಸ್ಥೆಯ ಕಾರ್ಯದರ್ಶಿ ಪ್ರಕಾಶ್, ಜ್ಞಾನಧಾರೆ ಐಟಿಐ ಕಾಲೇಜು ಪ್ರಾಂಶುಪಾಲ ಯೋಗೀಶ್, ಜ್ಞಾನಧಾರೆ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ನಂದೀಶ್, ವಿದ್ಯಾಸಿರಿ ಶಿಕ್ಷಣ ಸಂಸ್ಥೆ ನಿರ್ದೇಶಕ ರಂಗೇಗೌಡ, ಉಪ ನ್ಯಾಸಕಿ ಯೋಗಶ್ರೀ ಹಾಜರಿದ್ದರು. ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿ ಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.

Translate »