ಸಮಾಜಮುಖಿ ಕೆಲಸಗಳನ್ನು ಮೈಗೂಡಿಸಿಕೊಳ್ಳಲು ಸಲಹೆ
ಮಂಡ್ಯ

ಸಮಾಜಮುಖಿ ಕೆಲಸಗಳನ್ನು ಮೈಗೂಡಿಸಿಕೊಳ್ಳಲು ಸಲಹೆ

August 20, 2021

ಮಳವಳ್ಳಿ, ಆ.19(ಮೋಹನ್‍ರಾಜ್)- ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕೆಂಬ ಸಮಾಜಮುಖಿ ಚಿಂತನೆಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ವಾಗುತ್ತದೆ ಎಂದು ಲಯನ್ಸ್ ಕ್ಲಬ್‍ನ ಮಾಜಿ ರಾಜ್ಯಪಾಲ ಲಯನ್ ಕೆ.ದೇವೇಗೌಡ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಲಯನ್ಸ್ ಕ್ಲಬ್ ಮಳವಳ್ಳಿ ಸಿಟಿ ಘಟಕದ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸೇವೆ ಸಲ್ಲಿಸುತ್ತಿ ರುವ ಲಯನ್ಸ್ ಕ್ಲಬ್ 200ಕ್ಕೂ ಹೆಚ್ಚು ದೇಶಗಳಲ್ಲಿ ಶಾಖೆ ಗಳನ್ನು ಒಳಗೊಂಡಿದೆ. ಮಂಡ್ಯ ಜಿಲ್ಲೆಯಲ್ಲಿ ಕೇವಲ ನಾಲ್ಕು ಲಯನ್ಸ್ ಕ್ಲಬ್ ಘಟಕಗಳಿದ್ದು, ಕಡಿಮೆ ಸದಸ್ಯರನ್ನು ಒಳಗೊಂ ಡಿತ್ತು. ಆದರೇ ಇಂದು ಒಂದು ತಾಲೂಕಿನಲ್ಲಿಯೇ 4ಕ್ಕಿಂತ ಹೆಚ್ಚು ಘಟಕಗಳನ್ನು ಹೊಂದುವುದರ ಮೂಲಕ ಸಾವಿರಾರು ಸದಸ್ಯರನ್ನು ಒಳಗೊಂಡಿದೆ, ಕ್ಲಬ್‍ಗೆ ಸದಸ್ಯರಾಗುವವರು ನೀತಿ ನಿಯಮಗಳಿಗೆ ಬದ್ದರಾಗಿ ಸೇವಾ ಮನೋಭಾವ ವನ್ನು ರೂಢಿಸಿಕೊಳ್ಳಬೇಕೆಂದು ಹೇಳಿದರು.

ಕ್ಲಬ್ ಜನಸೇವೆಯೇ ಜನಾರ್ದನ ಸೇವೆ ಎಂಬ ಧ್ಯೇಯೋ ದ್ದೇಶದೊಂದಿಗೆ ಹಲವು ಸೇವಾ ಕಾರ್ಯಗಳೊಂದಿಗೆ ಮುನ್ನಡೆಯುತ್ತಿರುವುದು ಹೆಮ್ಮೆಯ ಸಂಗತಿ. ವಿಶೇಷವಾಗಿ ಅತಿಹೆಚ್ಚು ನೇತ್ರ ಚಿಕಿತ್ಸಾ ಶಿಬಿರವನ್ನು ಆಯೋಜನೆ ಮಾಡಿಕೊಂಡು ಬರಲಾಗುತ್ತಿದೆ, ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಹೊರ ರೋಗಿಗಳಿಗೆ ಹಲವು ವರ್ಷಗಳಿಂದ ಉಚಿತವಾಗಿ ಊಟ ನೀಡಲಾಗುತ್ತಿದ್ದು, ಸಾರ್ವಜನಿಕರು ಕೈಜೋಡಿಸಬೇಕೆಂದು ತಿಳಿಸಿದರು.
ಲಯನ್ಸ್ ಮಳವಳ್ಳಿ ಸಿಟಿ ಕ್ಲಬ್ ಅಧ್ಯಕ್ಷ ಭರತೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಳವಳ್ಳಿ ಲಯನ್ಸ್ ಕ್ಲಬ್ ವತಿಯಿಂದ ಕೋವಿಡ್ ಸೋಂಕನ್ನು ನಿಯಂತ್ರಿಸಲು ಸಾರ್ವಜನಿಕರಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್‍ಗಳನ್ನು ವಿತರಿಸಲಾಯಿತು. ಹಲವು ಖಾಲಿ ಇರುವ ಸ್ಥಳಗಳಲ್ಲಿ ಗಿಡಗಳನ್ನು ನೆಟ್ಟು ಬೆಳೆಸ ಲಾಗುತ್ತಿದೆ, ಮುಂದಿನ ದಿನಗಳಲ್ಲಿಯೂ ಕೂಡ ಸದಸ್ಯರು ಮತ್ತು ಎಲ್ಲಾ ಮುಖಂಡರ ಸಹಕಾರದೊಂದಿಗೆ ಹೆಚ್ಚಿನ ಸೇವೆ ಸಲ್ಲಿಸಲು ಮುಂದಾಗುವುದಾಗಿ ತಿಳಿಸಿದರು.

ಲ.ಕೃಷ್ಣೇಗೌಡ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷೆ ರಾಧನಾಗರಾಜು, ಉಪಾಧ್ಯಕ್ಷ ನಂದಕುಮಾರ್, ಎನ್.ಸುಬ್ರಹ್ಮಣ್ಯ, ಕೆ.ಎಲ್.ರಾಜಶೇಖರ್, ಕೆ.ಎಸ್.ಸುನೀಲ್ ಕುಮಾರ್, ಆನಂದ್, ಪುಟ್ಟರಾಜು, ಹರ್ಷ, ಅಣ್ಣೇಗೌಡ ಮಧು, ಬಸವರಾಜು ವಿರೂಪಾಕ್ಷ, ಸಿದ್ದೇಶ್ ಇತರರಿದ್ದರು.

Translate »