ಕಂಪ್ಯೂಟರ್ ಶಿಕ್ಷಣಕ್ಕೆ ಆದ್ಯತೆ ನೀಡಲು ಸಲಹೆ
ಚಾಮರಾಜನಗರ

ಕಂಪ್ಯೂಟರ್ ಶಿಕ್ಷಣಕ್ಕೆ ಆದ್ಯತೆ ನೀಡಲು ಸಲಹೆ

July 24, 2018

ಚಾಮರಾಜನಗರ:  ‘ಪ್ರಸ್ತುತದ ಆಧುನಿಕ ಜಗತ್ತಿನಲ್ಲಿ ಕಂಪ್ಯೂಟರ್ ಜ್ಞಾನ ಪ್ರತಿಯೊಬ್ಬರಿಗೂ ಮುಖ್ಯವಾಗಿದ್ದು, ವಿದ್ಯಾರ್ಥಿ ಕಂಪ್ಯೂಟರ್ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಉನ್ನತ ವಿಷ್ಯ ರೂಪಿಸಿಕೊಳ್ಳ ಬೇಕು’ ಎಂದು ಜಿಲ್ಲಾ ಸೆಷನ್ಸ್ ನ್ಯಾಯಾ ಧೀಶ ಜಿ. ಬಸವರಾಜ ಸಲಹೆ ನೀಡಿದರು.

ತಾಲೂಕಿನ ಬಿಸಲವಾಡಿ ಗ್ರಾಮದ ಸರ್ಕಾರಿ ಪ್ರೌಡಶಾಲೆಯಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆದ ಕಾನೂನು ಸಾಕ್ಷರತಾ ಕೂಟ ಕಾರ್ಯಕ್ರಮ ಉದ್ಫಾಟಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಶಾಲೆಗೆ ಒಂದು ಗಣಕಯಂತ್ರ ಮತ್ತು ಹಲವು ಕಾನೂನು ಪುಸ್ತಕಗಳನ್ನು ನೀಡಲಾಗಿದ್ದು, ಶಾಲೆಯ ಶಿಕ್ಷಕರ ಮೂಲಕ ಇದರ ಸದುಪ ಯೋಗವನ್ನು ಪಡೆದುಕೊಳ್ಳಬೇಕು. ವಿದ್ಯಾರ್ಥಿ ಗಳು ಪಠ್ಯ ಪುಸ್ತಕಗಳನ್ನು ಓದುವುದರ ಜೊತೆಗೆ ಕಾನೂನಿನ ಜ್ಞಾನವನ್ನು ತಿಳಿದುಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ.ವಿಶಾಲಾಕ್ಷಿ ಮಾತನಾಡಿ, ಮಾನವ ಸಂಘ ಜೀವಿ. ಆದ್ಧರಿಂದ ನಿತ್ಯ ಜೀವನದಲ್ಲಿ ಕಾನೂನಿನ ಅವಶ್ಯಕತೆಯಿದೆ. ಹಾಗಾಗಿ, ಪ್ರತಿಯೊಬ್ಬರೂ ಕಾನೂನಿನ ತಿಳುವಳಿಕೆ ಪಡೆದುಕೊಳ್ಳಬೇಕು. ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಮಾತ ನಾಡಿ, ಇಂದಿನ ಯುವ ಜನಾಂಗ ಶಿಸ್ತು, ಸಮಯ ಪ್ರಜ್ಞೆ, ಸೇವಾ ಮನೋಭಾವನೆ ಬೆಳೆಸಿಕೊಳ್ಳಬೇಕು. ಸಮಾಜದಲ್ಲಿ ಸಾಮ ರಸ್ಯದ ಕೊರತ ಇರುವುದರಿಂದ ದ್ವೇಷ, ಅಸೂಯೆ, ಮನೋಭಾವನೆ ಬಿಟ್ಟು ಸಹ-ಬಾಳ್ವೆ ಜೀವನ ನಡೆಸುವುದರ ಕಡೆ ಗಮನ ಹರಿಸಬೇಕು ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಲಕ್ಷ್ಮಿಪತಿ ಮಾತನಾಡಿ, ಪ್ರತಿಯೊಬ್ಬರು ಸಂವಿಧಾನ ದಲ್ಲಿರುವ ಮೂಲಭೂತ ಹಕ್ಕುಗಳನ್ನು ಪಡೆದು ಕೊಳ್ಳುತ್ತೇವೆ. ಹಾಗೆಯೇ, ಮೂಲ¨Àsೂತ ಕರ್ತವ್ಯಗಳನ್ನು ಪಾಲಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್. ಅರುಣ್ ಕುಮಾರ್, ಶಿಕ್ಷಕರು ಹಾಜರಿದ್ದರು.

Translate »