ಸವಲತ್ತು ಸದುಪಯೋಗಕ್ಕೆ ಸಲಹೆ
ಚಾಮರಾಜನಗರ

ಸವಲತ್ತು ಸದುಪಯೋಗಕ್ಕೆ ಸಲಹೆ

July 9, 2018

ಗುಂಡ್ಲುಪೇಟೆ: ಸರ್ಕಾರದ ಸವಲತ್ತುಗಳನ್ನು ಸಮರ್ಪಕ ವಾಗಿ ಬಳಸಿಕೊಂಡು ಮಕ್ಕಳ ಆರೋಗ್ಯ ಮತ್ತು ಶಿಕ್ಷಣ ಮಟ್ಟವನ್ನು ಹೆಚ್ಚಿಸಿಕೊಳ್ಳಿ ಎಂದು ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಹೇಳಿದರು.

ತಾಲೂಕಿನ ಬೇಗೂರು ಹೋಬಳಿಯ ಯಡವನಹಳ್ಳಿ ಹಾಗೂ ಕೋಟೆಕೆರೆ ಗ್ರಾಮಗಳಲ್ಲಿ ತಲಾ 9.17 ಲಕ್ಷ ರೂ. ವೆಚ್ಚ ದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ನೂತನ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಮಕ್ಕಳ ಶೈಕ್ಷಣಿಕ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರವು ವಿವಿಧ ಯೋಜನೆಗಳನ್ನು ಜಾರಿ ಗೊಳಿಸುತ್ತಿದೆ. ಬಾಣಂತಿಯರು ಹಾಗೂ ಮಕ್ಕಳಲ್ಲಿ ಉಂಟಾಗುವ ತೊಂದರೆಗಳನ್ನು ತಪ್ಪಿಸಲು ಅಂಗನವಾಡಿ ಕೇಂದ್ರಗಳ ಮೂಲಕ ಪೌಷ್ಠಿಕಾಂಶವುಳ್ಳ ಆಹಾರ ಪದಾರ್ಥಗಳನ್ನು ವಿತರಿಸಲಾಗುತ್ತಿದೆ. ಇದಕ್ಕಾಗಿ ಅಗತ್ಯ ವಿರುವಲ್ಲಿ ಅಂಗನವಾಡಿ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಮಕ್ಕಳಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಒದ ಗಿಸಲಾಗುತ್ತಿದೆ. ಎಲ್ಲರೂ ಇವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ರತ್ನಮ್ಮ ಶ್ರೀಕಂಠಪ್ಪ, ತಾಲೂಕು ಪಂಚಾಯಿತಿ ಸದಸ್ಯರಾದ ಕೆ.ಪ್ರಭಾಕರ್, ರಾಜೇಶ್ವರಿ, ಮಾಜಿ ಸದಸ್ಯರಾದ ಜಯರಾಂ, ಕೃಷ್ಣ, ಕೋಟೆಕೆರೆ ಗ್ರಾಮಪಂಚಾಯಿತಿ ಅಧ್ಯಕ್ಷೆ ರಾಣಿ, ಮುಖಂಡರಾದ ನಾಗ ರಾಜಪ್ಪ, ಬಾಬುಪ್ರಸಾದ್, ರವಿ, ಜಯ ರಾಜು, ಮಹಾದೇವಪ್ರಸಾದ್ ಸೇರಿದಂತೆ ಹಲವರು ಇದ್ದರು.

Translate »