ಗುಂಡ್ಲುಪೇಟೆ: ಸರ್ಕಾರ ರೈತರಿಗೆ ನೀಡುತ್ತಿರುವ ಎಲ್ಲಾ ಸೌಲಭ್ಯಗಳನ್ನು ಸದ್ಬಳಕೆ ಮಾಡಿ ಕೊಳ್ಳುವ ಮೂಲಕ ಅಭಿವೃದ್ಧಿ ಹೊಂದಬೇಕು ಎಂದು ಶಾಸಕ ಸಿ.ಎಸ್.ನಿರಂಜನ ಕುಮಾರ್ ಹೇಳಿದರು.
ಪಟ್ಟಣದ ಕೃಷಿ ಇಲಾಖೆಯ ಆವರಣ ದಲ್ಲಿ ಆಯೋಜಿಸಿದ್ದ ಸಮಗ್ರ ಕೃಷಿ ಅಭಿ ಯಾನ ಸಮಾರೋಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ನೀರಾವರಿ ಮೂಲವಿಲ್ಲದೆ ಮಳೆಯಾಧಾ ರಿತ ಕೃಷಿಯಲ್ಲಿ ತೊಡಗಿರುವ ಬಹುತೇಕ ರೈತರಿಗೆ ವಿವಿಧ ಇಲಾಖೆಗಳಿಂದ ತಮಗೆ ದೊರಕುವ ಸವಲತ್ತುಗಳ ಬಗ್ಗೆ ಅರಿಲ್ಲದೆ ಹಿಂದುಳಿಯುವಂತಾಗಿದೆ. ಆದ್ದರಿಂದ ಇಲಾ ಖೆಗಳ ನಡಿಗೆ ರೈತರ ಬಾಗಿಲಿಗೆ ಕಾರ್ಯಕ್ರ ಮದ ಮೂಲಕ ತಾಲೂಕಿನ ಎಲ್ಲಾ ಗ್ರಾಮ ಗಳು ಹಾಗೂ ಗ್ರಾಮಪಂಚಾಯಿತಿಗಳ ಲ್ಲಿಯೂ ಜಾಗೃತಿ ಮೂಡಿಸಲಾಗಿದೆ. ಇವು ಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಹಿಂದಿನವರು ನೈಸರ್ಗಿಕ ಗೊಬ್ಬರ ಬಳಸಿ ಉತ್ತಮ ಬೆಳೆ ಬೆಳೆದುಕೊಳ್ಳುತ್ತಿದ್ದರು. ಆದರೆ ಇಂದಿನ ಯುಗದಲ್ಲಿ ತೀವ್ರ ಬದಲಾವ ಣೆಗಳು ಉಂಟಾಗುತ್ತಿದ್ದು, ಆಧುನಿಕ ವಿಧಾ ನಗಳ ಅಳವಡಿಕೆ, ಹೈನುಗಾರಿಕೆ, ತೋಟಗಾ ರಿಕೆ, ರೇಷ್ಮೆ, ಪಶುಸಂಗೋಪನೆ ಮುಂತಾದ ಎಲ್ಲಾ ಉಪಕಸುಬುಗಳನ್ನು ಸಮಗ್ರವಾಗಿ ಅಳವಡಿಸಿಕೊಂಡು ಲಾಭದಾಯಕವಾಗಿ ಸಿಕೊಳ್ಳಬೇಕು. ಹಿಂದಿನವರು ಬೆಳೆಯು ತ್ತಿದ್ದ ಸಿರಿಧಾನ್ಯಗಳಿಗೆ ಈಗ ಹೆಚ್ಚಿನ ಬೇಡಿಕೆಯಿದೆ ಎಂದರು.
ಕೃಷಿ ವಿಜ್ಞಾನಿ ಅರಸು ಮಲ್ಲಯ್ಯ ಮಾತ ನಾಡಿ, ದಿನೇ ದಿನೇ ಹೆಚ್ಚುತ್ತಿರುವ ಜನ ಸಂಖ್ಯೆಗೆ ಅನುಗುಣವಾಗಿ ಬೆಳೆಗಳನ್ನು ಬೆಳೆಯಬೇಕಾಗಿದೆ. ಕೃಷಿಗೆ ಲಭ್ಯವಿರುವ ಭೂಮಿಯಲ್ಲಿ ಮಣ್ಣು ಹಾಗೂ ನೀರಿನ ಪರೀಕ್ಷೆ ನಡೆಸಿ ಅಲ್ಲಿಗೆ ಹೊಂದುವ ಬೆಳೆ ಗಳನ್ನು ಕಡಿಮೆ ನೀರು ಬಳಸಿ ಸಾವ ಯವ ಪದ್ಧತಿಯಲ್ಲಿ ಸಮಗ್ರ ಬೆಳೆ ಬೆಳೆದರೆ ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಇಳುವರಿ ಬರು ವುದರಿಂದ ಲಾಭ ದೊರಕಲಿದೆ ಎಂದರು.
ಸಹಾಯಕ ಕೃಷಿ ನಿರ್ದೇಶಕ ವೆಂಕ ಟೇಶ್ ಮಾತನಾಡಿ, ಕೃಷಿ ಇಲಾಖೆಯು ಆಸಕ್ತ ರೈತರಿಗೆ ಕೃಷಿ ಹೊಂಡ ನಿರ್ಮಾಣ, ನೀರೆತ್ತುವ ಮೋಟಾರು, ಗಿರಣ , ಟ್ರ್ಯಾಕ್ಟರ್, ಟಿಲ್ಲರ್ ಸೇರಿದಂತೆ ವಿವಿಧ ಯಂತ್ರೋಪಕ ರಣಗಳಿಗೆ ಸಬ್ಸಿಡಿ ನೀಡುತ್ತಿದ್ದು, ರೈತರು ಇವು ಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ತೋಟಗಾರಿಕೆ, ಹೈನು ಗಾರಿಕೆ, ಮೀನುಗಾರಿಕೆ ರೇಷ್ಮೆ ಮುಂತಾದ ವಿವಿಧ ಇಲಾಖೆಗಳ ಮಳಿಗೆಗಳಲ್ಲಿ ದೊರ ಕುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡ ಲಾಯಿತು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಪಿ.ಗಿರೀಶ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಹೊರೆಯಾಲ ಮಹೇಶ್, ನಿರ್ದೇ ಶಕ ಎಸ್.ಎಂ.ಮಲ್ಲಿಕಾರ್ಜುನಸ್ವಾಮಿ, ಪುರಸಭೆ ಸದಸ್ಯ ಗೋವಿಂದರಾಜನ್ ಸೇರಿದಂತೆ ರೈತರು ಭಾಗವಹಿಸಿದ್ದರು.