ಹನೂರು ಪಟ್ಟಣದ ಸ್ವಚ್ಛತೆಗೆ ಸಹಕರಿಸಲು ಸಲಹೆ

ಹನೂರು, ಜು.12(ಸೋಮು)- ಮನೆಗಳಲ್ಲಿ ಒಣಕಸ ಹಾಗೂ ಹಸಿಕಸವನ್ನು ವಿಂಗಡಿಸಿ ವಾಹನಕ್ಕೆ ಹಾಕುವುದರ ಮೂಲಕ ಪಟ್ಟಣದ ಸ್ವಚ್ಛತೆಗೆ ಪಟ್ಟಣ ಪಂಚಾಯಿತಿಯೊಂದಿಗೆ ಸಹಕಾರ ನೀಡಬೇಕು ಎಂದು ಪಪಂ ಮುಖ್ಯಾಧಿಕಾರಿ ಮೂರ್ತಿ ತಿಳಿಸಿದರು.
ಪಟ್ಟಣದಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಸೋಮವಾರ ಜಿಲ್ಲಾ ಗ್ರೀನ್ ಗ್ರಾಮೀಣಾಭಿವೃದ್ಧಿ ತರಬೇತಿ ಸಂಸ್ಥೆ ಹಾಗೂ ಪಟ್ಟಣ ಪಂಚಾಯಿತಿ ವತಿ ಯಿಂದ ಕಸ ವಿಂಗಡಣೆ ಹಾಗೂ ಸ್ವಚ್ಛತೆ ಸಂಬಂಧ ಆಟೋ ಮೂಲಕ ನಾಗರಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಜನರು ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡದ ಪರಿಣಾಮ ರೋಗ- ರುಜಿನಗಳಿಗೆ ತುತ್ತಾಗುತ್ತಿದ್ದಾರೆ. ಅಲ್ಲದೇ ಎಲ್ಲೆಂದರಲ್ಲಿ ಕಸ ಬಿಸಾಡುತ್ತಿದ್ದಾರೆ. ಇದರಿಂದ ಪರಿಸರದಲ್ಲಿ ಅನೈರ್ಮಲ್ಯ ನಿರ್ಮಾಣ ವಾಗುತ್ತಿದೆ. ಜೊತೆಗೆ ಸರ್ಕಾರ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಪ್ರತಿ ಕುಟುಂ ಬವೂ ಕಡ್ಡಾಯವಾಗಿ ಶೌಚಾಲಯವನ್ನು ಹೊಂದುವ ಸಲುವಾಗಿ ಪ್ರೋತ್ಸಾಹ ಧನವನ್ನು ನೀಡುತ್ತಿದೆ. ಆದಾಗ್ಯೂ ಈ ಯೋಜನೆ ಯಡಿ ಶೌಚಾಲಯವನ್ನು ನಿರ್ಮಿಸಿಕೊಂಡಿ ದ್ದರೂ ಕೆಲವರು ಇನ್ನು ಸಹ ಬಹಿ ರ್ದೆಸೆಗೆ ಬಯಲನ್ನೇ ಆಶ್ರಯಿಸಿಕೊಂಡಿ ದ್ದಾರೆ. ಇದರಿಂದ ಸುತ್ತಮುತ್ತಲಿನ ಪರಿಸರ ಅನೈರ್ಮಲ್ಯಗೊಳ್ಳುತ್ತಿದ್ದು, ಸಾಂಕ್ರಾಮಿಕ ರೋಗಕ್ಕೆ ಕಾರಣವಾಗಿದೆ. ಹಾಗಾಗಿ ಸ್ವಚ್ಛತೆ ಯನ್ನು ಕಾಪಾಡುವುದು ಅಗತ್ಯವೂ ಅನಿ ವಾರ್ಯವೂ ಆಗಿದೆ. ಆದ್ದರಿಂದ ಪಟ್ಟಣದ ಪ್ರತಿಯೊಬ್ಬರೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದರ ಮೂಲಕ ಮನೆಗಳಲ್ಲಿ ಒಣ ಕಸ ಹಾಗೂ ಹಸಿಕಸವನ್ನು ವಿಂಗಡಿಸಿ ಪಪಂನ ವಾಹನಕ್ಕೆ ಹಾಕಬೇಕು. ಅಲ್ಲದೇ ಬಹಿರ್ದೆಸೆಗೆ ಬಯಲಿನ ಮೊರೆ ಹೋಗದೆ ಕಡ್ಡಾಯವಾಗಿ ಶೌಚಾಲಯವನ್ನು ಬಳಸು ವುದರ ಮೂಲಕ ಪಟ್ಟಣದ ಸ್ವಚ್ಛತೆಗೆ ಸಹಕರಿಸಬೇಕು ಎಂದು ತಿಳಿಸಿದರು.

ಪ್ಲಾಸ್ಟಿಕ್ ಬಳಕೆ ಮಾಡಬೇಡಿ: ಪಟ್ಟಣದ ಬಹುತೇಕ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕೈ ಚೀಲ ಬಳಕೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಈ ಹಿಂದೆ ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಳ್ಳುವುದರ ಮೂಲಕ ದಂಡ ವನ್ನು ವಿಧಿಸಲಾಗಿದೆ. ಆಗಿದ್ದರೂ ಕೆಲವರು ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದಾರೆ. ಇದರಿಂದ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಸದಂತೆ ಮನವಿ ಮಾಡಿದರು.

ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಹರೀಶ್‍ಕುಮಾರ್ ಮಾತನಾಡಿ, ಪಟ್ಟಣದ ಪ್ರತಿಯೊಬ್ಬರೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದರ ಮೂಲಕ ಸುಂದರ ಪಟ್ಟಣವನ್ನಾಗಿಸಲು ಪಟ್ಟಣ ಪಂಚಾಯಿತಿಗೆ ಸಹಕಾರ ನೀಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ರೀನ್ ಗ್ರಾಮೀಣಾಭಿವೃದ್ಧಿ ತರಬೇತಿ ಸಂಸ್ಥೆಯ ಅಧ್ಯಕ್ಷ ಪ್ರಭು, ಕಾರ್ಯದರ್ಶಿ ಮಹ ದೇವಸ್ವಾಮಿ, ಸಂಯೋಜಕ ದೇವರಾಜು ಹಾಗೂ ಪಪಂ ಸಿಬ್ಬಂದಿಗಳು ಹಾಜರಿದ್ದರು.