ನಿರಾಶ್ರಿತರಿಗೆ ತ್ವರಿತವಾಗಿ ಮನೆ ನಿರ್ಮಿಸಲು ಸೂಚನೆ
ಕೊಡಗು

ನಿರಾಶ್ರಿತರಿಗೆ ತ್ವರಿತವಾಗಿ ಮನೆ ನಿರ್ಮಿಸಲು ಸೂಚನೆ

December 28, 2018

ಮಡಿಕೇರಿ:  ಪ್ರಕೃತಿ ವಿಕೋಪದಿಂದ ಸಂಕ ಷ್ಟಕ್ಕೆ ತುತ್ತಾಗಿ ನಿರಾಶ್ರಿತರಾದ ಕುಟುಂಬಗಳಿಗೆ ತ್ವರಿತ ವಾಗಿ ಮನೆ ನಿರ್ಮಿಸುವಂತೆ ಸಂಬಂಧಪಟ್ಟ ಅಧಿಕಾರಿ ಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಗುರುವಾರ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈಗಾಗಲೇ ಮುಖ್ಯಮಂತ್ರಿಯವರು ಮನೆ ನಿರ್ಮಾ ಣಕ್ಕೆ ಚಾಲನೆ ನೀಡಿದ್ದು, ಮಾದಾಪುರ, ಕರ್ಣಂಗೇರಿ, ಸಂಪಾಜೆ, ಮದೆ ಮತ್ತಿತರ ಕಡೆಗಳಲ್ಲಿ ಗುರುತಿಸಲಾಗಿರುವ ಪ್ರದೇಶಗಳಲ್ಲಿ ಹೆಚ್ಚಿನ ತಂಡ ನಿಯೋಜಿಸಿ ಮನೆ ನಿರ್ಮಿ ಸುವಂತೆ ರಾಜೀವ್ ಗಾಂಧಿ ವಸತಿ ನಿಗಮದ ಎಂಜಿನಿಯ ರ್‍ಗಳಿಗೆ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.

ಮನೆ ನಿರ್ಮಾಣ ಸಂಬಂಧ ವಸತಿ ಸಚಿವರು ಮತ್ತು ವಸತಿ ಇಲಾಖೆಯ ಕಾರ್ಯದರ್ಶಿಯವರೊಂದಿಗೆ ಸದ್ಯದಲ್ಲಿಯೇ ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದು ಸಾ.ರಾ.ಮಹೇಶ್ ಅವರು ತಿಳಿಸಿದರು.

ಜಿಲ್ಲೆಯಲ್ಲಿ ರೈತರು ಬೆಳೆದಂತಹ ಭತ್ತವನ್ನು ಸರ್ಕಾರ ನಿಗಧಿಪಡಿಸಿದ ಬೆಂಬಲ ಬೆಲೆಯಲ್ಲಿ ತ್ವರಿತಗತಿಯಲ್ಲಿ ಖರೀದಿ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆಯ ಉಪ ನಿರ್ದೇಶಕರಿಗೆ ಸಾ.ರಾ. ಮಹೇಶ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

ರೈತರಿಂದ ಭತ್ತ ಖರೀದಿಯಲ್ಲಿ ಆಗುತ್ತಿರುವ ವಿಳಂಬಕ್ಕೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದ ಶಾಸಕ ಕೆ.ಜಿ.ಬೋಪಯ್ಯ, ಜಿಲ್ಲೆಯಲ್ಲಿ ಭತ್ತ ಬೆಳೆದಂತಹ ರೈತರಿಗೆ ಯಾವುದೇ ಅನಾನು ಕೂಲ ಉಂಟಾಗದ ರೀತಿಯಲ್ಲಿ ಭತ್ತವನ್ನು ಖರೀದಿ ಮಾಡಬೇಕು ಎಂದು ಆಗ್ರಹಿಸಿದರು.

ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಕೃಷಿ ಇಲಾಖೆ ವತಿಯಿಂದ ವಿತರಣೆ ಮಾಡಿರುವ ಕೆಂಪು ಭತ್ತದ ತಳಿಯ ಖರೀದಿಯಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರಿಪಡಿಸಿ ರೈತರಿಂದ ಕೆಂಪು ಅಕ್ಕಿ ಭತ್ತವನ್ನು ಖರೀದಿ ಮಾಡಬೇಕು ಎಂದು ಉಸ್ತುವಾರಿ ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್, ಸರ್ಕಾರವೇ ವಿತರಿಸಿದ ಕೆಂಪು ಅಕ್ಕಿ ಭತ್ತವನ್ನು ಬೆಳೆದ ರೈತರಿಂದ ಕಡ್ಡಾಯವಾಗಿ ಖರೀದಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಾಸಕ ಕೆ.ಜಿ.ಬೋಪಯ್ಯ ಜಿಲ್ಲೆಯಲ್ಲಿ ಮೇವು ಖರೀದಿಯ ಬಗ್ಗೆ ಸಭೆಯ ಗಮನ ಸೆಳೆದು ಮಾತನಾಡಿ, ಜಿಲ್ಲೆಯಲ್ಲಿ ಬೆಳೆದಂತಹ ಭತ್ತದ ಮೇವನ್ನು ಸಂಗ್ರಹಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದರು.

ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಪ್ರತಿಕ್ರಿಯಿಸಿ, ಮೇವಿನ ಸಂಗ್ರಹಣೆಗೆ ಇದುವರೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕರಿಂದ ಮಾಹಿತಿ ಪಡೆದು ಜಿಲ್ಲೆಯಲ್ಲಿ ದೊರೆಯು ತ್ತಿರುವ ಮೇವನ್ನು ಸುರಕ್ಷಿತವಾಗಿ ಸಂಗ್ರಹಿಸಿ ಇಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಶಾಸಕರಾದ ಕೆ.ಜಿ.ಬೋಪಯ್ಯ ಹಾಗೂ ಅಪ್ಪಚ್ಚುರಂಜನ್ ಅವರು ಅತಿವೃಷ್ಟಿಯಿಂದ ನಿರಾ ಶ್ರಿತರಾದವರಿಗೆ ವಿವಿಧೆಡೆಯಿಂದ ಬಂದಂತಹ ಆಹಾರ ಪದಾ ರ್ಥಗಳು ಸಮರ್ಪಕವಾಗಿ ವಿತರಣೆಯಾಗದೆ ಗೋದಾಮಿ ನಲ್ಲಿ ಹಾಗೆಯೇ ಉಳಿದಿದ್ದು, ಅರ್ಹ ಫಲಾನುಭವಿಗಳಿಗೆ ಶೀಘ್ರ ದಲ್ಲಿ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಭೆಗೆ ತಿಳಿ ಸಿದರು. ನಿರಾಶ್ರಿತರಿಗಾಗಿ ಬಂದ ಆಹಾರ ಸಾಮಗ್ರಿಗ ಳನ್ನು ತ್ವರಿತವಾಗಿ ಅರ್ಹರಿಗೆ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ವಿಶೇಷ ಅಪರ ಜಿಲ್ಲಾಧಿಕಾರಿ ಜಗದೀಶ್ ಅವರಿಗೆ ಸಾ.ರಾ.ಮಹೇಶ್ ಸೂಚನೆ ನೀಡಿದರು.
ಪಡಿತರ ವಿತರಣೆಯಲ್ಲಿ ಉಂಟಾಗುತ್ತಿರುವ ಬಯೋಮೆಟ್ರಿಕ್ ಸಮಸ್ಯೆಯನ್ನು ತುರ್ತಾಗಿ ಸರಿಪಡಿಸಿ ಯಾವುದೇ ಗೊಂದಲವಿಲ್ಲದಂತೆ ಪಡಿತರ ವಿತರಣೆಯಾಗಬೇಕು ಎಂದು ಅಧಿಕಾರಿಗಳಿಗೆ ಸಚಿವರು ತಾಕೀತು ಮಾಡಿದರು. ಅತಿವೃಷ್ಟಿಯಿಂದಾಗಿ ಅಪಾರ ಆಸ್ತಿಪಾಸ್ತಿ ಹಾನಿ ಸಂಭವಿಸಿ ಕಾಫಿ ತೋಟಗಳಲ್ಲಿ ಅನುಪಯು ಕ್ತವಾಗಿ ಬಿದ್ದಂತಹ ಮರಗಳನ್ನು ಸಂಬಂಧಪಟ್ಟ ತೋಟದ ರೈತರು ವಿಲೇವಾರಿ ಮಾಡಲು ಮುಂದಾದಾಗ ಅರಣ್ಯ ಇಲಾಖೆಯಿಂದ ಆಗುತ್ತಿರುವ ಆಕ್ಷೇಪಣೆ ಕುರಿತು ಶಾಸಕ ಕೆ.ಜಿ.ಬೋಪಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಂಬಂಧಪಟ್ಟ ತೋಟದ ಮಾಲೀಕರು ತಮ್ಮ ಸ್ವಂತ ತೋಟಗಳಲ್ಲಿ ಬಿದ್ದಂತಹ ಮರಗಳ ವಿಲೇವಾರಿಗೆ ಯಾವುದೇ ತರನಾದ ತೊಂದರೆ ಯನ್ನು ನೀಡದಂತೆ ಸೂಚನೆ ನೀಡಿದರು.
ವಿವಿಧ ವಸತಿ ಯೋಜನೆಗಳ ಪ್ರಗತಿ ಕುರಿತು ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್, ಜಿಲ್ಲೆಯಲ್ಲಿ ಬಾಕಿ ಉಳಿದಿರುವ ವಸತಿ ಯೋಜನೆಗಳನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ತಾಲೂಕು ಇಒಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅತಿವೃಷ್ಟಿಯಿಂದ ಉಂಟಾದ ಹಾನಿ ಸಂಬಂಧದ ಕಾಮ ಗಾರಿಗಳ ವೆಚ್ಚದ ಪಾವತಿಯನ್ನು ಸಂಬಂಧಪಟ್ಟ ಗುತ್ತಿಗೆ ದಾರರಿಗೆ ಈಗಾಗಲೇ ಸರ್ಕಾರವು ಅನುದಾನವನ್ನು ಬಿಡುಗಡೆ ಮಾಡಿದ್ದು, ಯಾವುದೇ ತರನಾದ ವಿಳಂಬ ವಾಗದ ರೀತಿಯಲ್ಲಿ ಕಾಮಗಾರಿ ಮುಗಿಸಿರುವ ಗುತ್ತಿಗೆ ದಾರರಿಗೆ ಪಾವತಿಸುವಂತೆ ಲೋಕೋಪಯೋಗಿ ಇಲಾ ಖೆಯ ಕಾರ್ಯಪಾಲಕ ಅಭಿಯಂತರ ಇಬ್ರಾಹಿಂ ಅವರಿಗೆ ಸೂಚನೆ ನೀಡಿದರು.

Translate »