ಬಜೆಟ್ ಅಧಿವೇಶನದ ನಂತರ ನಿಗಮ-ಮಂಡಳಿ ಅಧ್ಯಕ್ಷರ ನೇಮಕ

ಬೆಂಗಳೂರು: ಬಜೆಟ್ ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿಳಿಸಿದರು.

ಸಮನ್ವಯ ಸಮಿತಿ ಸಭೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಂದಿನ ಸಭೆಯಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಬಜೆಟ್ ಅಧಿವೇಶನದ ನಂತರ ಅದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು. ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಗಳನ್ನು 20:10 ಅನುಪಾತದಲ್ಲಿ ಹಂಚಿಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರು ಕಾಂಗ್ರೆಸ್ ಪಾಲಿನ 20 ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಗಳಿಗೆ ಶಾಸಕರ ಪಟ್ಟಿಯನ್ನು ಸಿದ್ಧಪಡಿಸಿದ್ದು, ಅದಕ್ಕೆ ವೇಣುಗೋಪಾಲ್ ಅವರೂ ಸಹ ಸಮ್ಮತಿ ಸೂಚಿಸಿದ್ದಾರೆ. ಸಮನ್ವಯ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಿಗಮ-ಮಂಡಳಿ ಅಧ್ಯಕ್ಷರ ಪಟ್ಟಿ ವಿನಿಮಯ ಮಾಡಿಕೊಳ್ಳಲಾಯಿತು ಎಂದು ಹೇಳಲಾಗಿದೆ.