ಚುನಾವಣಾ ಜಂಜಾಟದ ನಂತರ ಈಗ ಸರ್ಕಾರ ಸಕ್ರಿಯ
ಮೈಸೂರು

ಚುನಾವಣಾ ಜಂಜಾಟದ ನಂತರ ಈಗ ಸರ್ಕಾರ ಸಕ್ರಿಯ

April 25, 2019

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಅವರ ಸಂಪುಟ ಸಹೋದ್ಯೋಗಿಗಳು ಮತ್ತು ಅಧಿಕಾರಿಗಳು ಆಡಳಿತಯಂತ್ರಕ್ಕೆ ಮರಳಿದ್ದಾರೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ಪೂರ್ಣಗೊಳ್ಳುತ್ತಿದ್ದಂತೆ, ತಮ್ಮ ಮೂಲ ಕಾರ್ಯಕ್ಕೆ ಹಿಂತಿರುಗಿದ್ದಾರೆ. ಚುನಾವಣಾ ಪ್ರಚಾರ ಸಂದರ್ಭದಲ್ಲಿ ಇಡೀ ರಾಜ್ಯದ ಚಿತ್ರಣ ಕಂಡಿರುವ ಮುಖ್ಯ ಮಂತ್ರಿ ಹಾಗೂ ಅವರ ಸಂಪುಟದ ಕೆಲವು ಸಚಿವರಿಗೆ, ಬರದ ಭೀಕರತೆ ಅರಿವಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ರಾಜಧಾನಿಗೆ ವಾಪಸಾಗುತ್ತಿದ್ದಂತೆ ಮುಖ್ಯಮಂತ್ರಿ ಅವರು, ಮುಂದಿನ ವಾರ ಬರ ಪರಿಸ್ಥಿತಿ ಪರಿಶೀಲನೆ ಮತ್ತು ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಕುರಿತು ಚರ್ಚಿಸಲು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಕರೆಯಲಿದ್ದಾರೆ. ಬೆಂಗಳೂರು ಅಭಿವೃದ್ಧಿ ಹೊಣೆ ಗಾರಿಕೆ ಹೊತ್ತಿರುವ ಉಪಮುಖ್ಯಮಂತ್ರಿ ಡಾ|| ಜಿ. ಪರಮೇಶ್ವರ್ ಅವರಿಗೆ ಮುಂಬರುವ ಮಳೆಗಾಲದಲ್ಲಿ ನಗರದಲ್ಲಿ ಎದುರಾಗುವ ಸಮಸ್ಯೆ ಪರಿಹರಿಸಲು ಇಂದು ಇಡೀ ದಿನ ಅಧಿಕಾರಿಗಳ ಸಭೆ ನಡೆಸಿದರು. ಆಡಳಿತಶಾಹಿ ಮೇಲೆ ಹಿಡಿತ ಇಟ್ಟುಕೊಂಡಿರುವ ಸಚಿವರು ತಮ್ಮ ಇಲಾಖಾ ವ್ಯಾಪ್ತಿಯ ಇತಿಮಿತಿಯಲ್ಲಿ ಸಭೆ ನಡೆಸಿದರೆ, ಇನ್ನು ಕೆಲವು ಮಂತ್ರಿಗಳು ತಮ್ಮ ಕೊಠಡಿಗೆ ಬಂದು ವಿಶ್ರಾಂತಿ ಪಡೆದು ಹಿಂತಿರುಗಿದರು. ಚುನಾವಣಾ ನೀತಿ ಸಂಹಿತೆ ಜಾರಿ ನಂತರ ಕೆಲವು ಸಚಿವರು ವಿಧಾನಸೌಧಕ್ಕೆ ಬಾರದಿರುವುದು, ಏನೋ ಕಳೆದುಕೊಂಡಂತಾಗಿತ್ತು.

ಅಂತಹವರು ಬೆಳಗಿನಿಂದ ಸಂಜೆವರೆಗೂ ಕಚೇರಿಯಲ್ಲಿ ಕಾಲಕಳೆದರು. ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣ ಕ್ಕಿಳಿದಿದ್ದ ಪಂಚಾಯತ್‍ರಾಜ್ ಸಚಿವ ಕೃಷ್ಣಬೈರೇಗೌಡ, ತಮ್ಮ ಇಲಾಖೆ ವ್ಯಾಪ್ತಿಗೆ ಬರುವ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ದರು. ಪ್ರಸ್ತುತ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಲು ಶಾಸಕರ ನೇತೃತ್ವದ ಕಾರ್ಯಪಡೆಗಳಿಗೆ ಸೂಚಿಸಿದರು. ಬರಪರಿಸ್ಥಿತಿ ಗಂಭೀರವಾಗಿರುವು ದರಿಂದ ತುರ್ತಾಗಿ ಕುಡಿಯುವ ನೀರಿನ ಕಾಮಗಾರಿ ಕೈಗೊಳ್ಳಲು ಅನುದಾನ ಒದಗಿಸಲಾಗಿದೆ. ಸಮರೋ ಪಾದಿಯಲ್ಲಿ ಕುಡಿಯುವ ನೀರಿನ ಕಾಮಗಾರಿ ಕೈಗೊಳ್ಳ ಬೇಕು, ಯಾವ ಕಾರಣಕ್ಕೂ ನಿರ್ಲಕ್ಷಿಸಬಾರದು. ರಾಜ್ಯದ 176 ತಾಲೂಕು ಗಳು ಬರಪೀಡಿತವಾಗಿವೆ. ತುರ್ತಾಗಿ ನೀರು ಪೂರೈಕೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಅವಶ್ಯ ಕಾಮಗಾರಿಗಳಿಗೆ ಟೆಂಡರ್ ಕರೆದು ಕಾರ್ಯಾ ದೇಶ ನೀಡಲು ಚುನಾವಣಾ ಆಯೋಗದ ಅನುಮತಿಯೂ ಇದೆ. ತುರ್ತಾಗಿ ಅಲ್ಪಾವಧಿ ಟೆಂಡರ್ ಕರೆದು ಕಾಮಗಾರಿ ಆರಂಭಿಸಿ. ಯಾವುದೇ ಲೋಪ ಕಂಡುಬಂದರೆ ಸಂಬಂಧ ಪಟ್ಟ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡ ಲಾಗುವುದು ಎಂದು ಎಚ್ಚರಿಸಿದರು.

Translate »