ಕೊರೊನಾ ಮಾರ್ಗಸೂಚಿ ಪಾಲಿಸದವರ ವಿರುದ್ಧ  ಇಂದಿನಿಂದ ಕಠಿಣ ಕ್ರಮ
ಮೈಸೂರು

ಕೊರೊನಾ ಮಾರ್ಗಸೂಚಿ ಪಾಲಿಸದವರ ವಿರುದ್ಧ ಇಂದಿನಿಂದ ಕಠಿಣ ಕ್ರಮ

April 19, 2021

ಮೈಸೂರು,ಏ.18(ಎಂಟಿವೈ)-ಕೊರೊನಾ ಎರಡನೇ ಅಲೆ ಸಾಂಸ್ಕøತಿಕ ನಗರಿ ಮೈಸೂ ರನ್ನು ತತ್ತರಿಸುವಂತೆ ಮಾಡುತ್ತಿದ್ದು, ಜನರನ್ನು ಆತಂಕಕ್ಕೀಡುಮಾಡಿದೆ. ಕೊರೊನಾ ಮಾರ್ಗ ಸೂಚಿ ಪಾಲಿಸದೇ ಸೋಂಕು ಹರಡುವಿಕೆಗೆ ಕಾರಣವಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪಾಲಿಕೆ ಹಾಗೂ ಪೊಲೀಸರು ಮುಂದಾಗಿದ್ದು, ನಾಳೆಯಿಂದ (ಏ.19) ಒಂಭತ್ತು ವಲಯ ಕಚೇರಿ ವ್ಯಾಪ್ತಿಯಲ್ಲಿಯೂ ಕಾರ್ಯಾಚರಣೆ ನಡೆಸಲಿದ್ದಾರೆ.

ಎರಡನೇ ಹಂತದ ಕೊರೊನಾ ತೀವ್ರತೆ ಹೆಚ್ಚಾಗಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಉಲ್ಬಣಗೊಳ್ಳುವಂತೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳು ವಂತೆ ತಿಳಿಹೇಳಿದರೂ, ಬಹುತೇಕ ಮಂದಿ ಅದನ್ನು ನಿರ್ಲಕ್ಷಿಸುತ್ತಿದ್ದಾರೆ. ಇದನ್ನು ಮನಗಂಡು ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಾಗೃತಿ ಮೂಡಿಸಿದರೂ, ಯಾವುದೇ ಪ್ರಯೋಜನ ವಾಗಿಲ್ಲ. ಇದರಿಂದ ಪಾಲಿಕೆ ಸಿಬ್ಬಂದಿ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ಮೂಲಕ ಮಾಸ್ಕ್ ಧರಿಸದವರು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಗುಂಪುಗೂಡು ವವರ ವಿರುದ್ಧ ದಂಡ ವಿಧಿಸಲು ಕಾರ್ಯಾಚರಣೆ ನಡೆಸಲಿದ್ದಾರೆ. ಈಗಾಗಲೇ ಕೊರೊನಾ ಮಾರ್ಗ ಸೂಚಿ ಧಿಕ್ಕರಿಸುವ ಹಾಗೂ ಕೊರೊನಾ ಕಫ್ರ್ಯೂ ನಿಯಮ ಉಲ್ಲಂಘಿಸುವವರ ವಿರುದ್ಧ ಕಾರ್ಯಾ ಚರಣೆ ನಡೆಸಿ 1 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ. ಇದು ನಾಳೆಯಿಂದ ಮತ್ತಷ್ಟು ಚುರುಕುಗೊಳ್ಳಲಿದೆ.

ಮಾರ್ಷಲ್ ನೇಮಿಸಿಲ್ಲ: ಮೈಸೂರು ನಗರ ಪಾಲಿಕೆಯ ಆಯುಕ್ತೆ ಶಿಲ್ಪಾ ನಾಗ್ `ಮೈಸೂರು ಮಿತ್ರ’ನೊಂದಿಗೆ ಮಾತನಾಡಿ, ಮೈಸೂರಲ್ಲಿ ಮಾಸ್ಕ್ ಧರಿಸದ ಸಾರ್ವಜನಿಕರು ಹಾಗೂ ವ್ಯಾಪಾರಿ ಗಳಿಗೆ ದಂಡ ವಿಧಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ. ಇದರೊಂದಿಗೆ ಸಾಮಾಜಿಕ ಅಂತರ ಕಾಯ್ದು ಕೊಳ್ಳದೇ ಗುಂಪುಗೂಡಿದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಾಳೆಯಿಂದ ಮೈಸೂರು ನಗರದಲ್ಲಿ ಕೊರೊನಾ ಮಾರ್ಗಸೂಚಿ ಉಲ್ಲಂ ಘನೆಯ ವಿರುದ್ಧದ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಲಾಗುತ್ತದೆ. ನಮ್ಮ ಉದ್ದೇಶ ಜನರನ್ನು ಕೊರೊನಾ ಸೋಂಕಿನಿಂದ ಪಾರು ಮಾಡು ವುದೇ ಆಗಿದೆ. ಆದರೆ ಜನರು ಸ್ವಯಂಪ್ರೇರಣೆ ಯಿಂದ ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಪಾಡಿ ಕೊಳ್ಳುವಲ್ಲಿ ಹಿಂದೇಟು ಹಾಕುತ್ತಿದ್ದಾರೆ. ಇದನ್ನು ಮನಗಂಡು ಅನಿವಾರ್ಯವಾಗಿ ಕಾರ್ಯಾಚರಣೆ ನಡೆಸುವ ಮೂಲಕ ಕೋವಿಡ್-19 ಮಾರ್ಗಸೂಚಿ ಪಾಲನೆಗೆ ಜನರಲ್ಲಿ ತಿಳುವಳಿಕೆ ಮೂಡಿಸುವ ಪ್ರಯತ್ನ ಮಾಡಲಾಗುತ್ತದೆ ಎಂದು ಹೇಳಿದರು.

ಮೈಸೂರಲ್ಲಿ ವಿವಾಹ ಮಹೋತ್ಸವ, ಸಭೆ-ಸಮಾರಂಭ ಸೇರಿದಂತೆ ಇನ್ನಿತರೆಡೆ ನಿಗದಿತ ಸಂಖ್ಯೆಗಿಂತ ಹೆಚ್ಚಿನ ಜನರು ಸೇರುವುದನ್ನು ಪರಿಶೀಲಿಸಲು ಮಾರ್ಷಲ್‍ಗಳನ್ನು ನೇಮಿಸಿಲ್ಲ. ಆದರೆ ಒಂಭತ್ತು ವಲಯಗಳಲ್ಲೂ ನಗರ ಪಾಲಿಕೆ ಸಿಬ್ಬಂದಿ ಹಾಗೂ ಪೊಲೀಸರ ಜಂಟಿ ತಂಡ ಕಾರ್ಯಾಚರಿಸುತ್ತಿದೆ. ಮೈಸೂರಿನಲ್ಲಿ ಮಾರ್ಷಲ್‍ಗಳ ನೇಮಕಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮೈಸೂರು ಮಹಾ ನಗರಪಾಲಿಕೆ ಆಯುಕ್ತರಾದ ಶಿಲ್ಪಾನಾಗ್ `ಮೈಸೂರು ಮಿತ್ರ’ನಿಗೆ ಸ್ಪಷ್ಟಪಡಿಸಿದರು.

Translate »